ಬ್ರೇಕಿಂಗ್ ನ್ಯೂಸ್
12-07-25 01:42 pm Mangalore Correspondent ಕರಾವಳಿ
ಮಂಗಳೂರು, ಜುಲೈ 12 : ಸುರತ್ಕಲ್ ಬಳಿಯಿರುವ ಎಂಆರ್ ಪಿಎಲ್ ಪೆಟ್ರೋಲಿಯಂ ಶುದ್ಧೀಕರಣ ಘಟಕದಲ್ಲಿ ಅನಿಲ ಸೋರಿಕೆಯಾಗಿದ್ದು, ಇಬ್ಬರು ಕಾರ್ಮಿಕರು ದುರಂತ ಸಾವು ಕಂಡಿದ್ದಾರೆ.
ಪೆಟ್ರೋ ಕೆಮಿಕಲ್ ಘಟಕದಲ್ಲಿ ಟ್ಯಾಂಕ್ ಗಳನ್ನು ಕ್ಲೀನ್ ಮಾಡುತ್ತಿದ್ದಾಗ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮುಖ, ಕಣ್ಣಿಗೆ ಕವಚ ಧರಿಸಿ ಕಾರ್ಮಿಕರು ಟ್ಯಾಂಕ್ ಕ್ಲೀನಿಂಗ್ ಕೆಲಸ ಮಾಡುತ್ತಿದ್ದಾಗ ಮೂವರು ಗಂಭೀರ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದ ಕಾರ್ಮಿಕರನ್ನು ಕೂಡಲೇ ಸುರತ್ಕಲ್ ಶ್ರೀನಿವಾಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಅಷ್ಟರಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ.



ಮೃತರನ್ನು ಉತ್ತರ ಪ್ರದೇಶದ ಪ್ರಯಾಗರಾಜ್ ಜಿಲ್ಲೆಯ ದೀಪಚಂದ್ರ(33) ಮತ್ತು ಕೇರಳ ಮೂಲದ ಬಿಜಿಲ್ ಪ್ರಸಾದ್ (33) ಎಂದು ಗುರುತಿಸಲಾಗಿದೆ. ಇನ್ನೊಬ್ಬ ಗದಗ ಮೂಲದ ವಿನಾಯಕ್ ಎಂಬ ಕಾರ್ಮಿಕನೂ ಅಸ್ವಸ್ಥಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೆಟ್ರೋ ಕೆಮಿಕಲ್ಸ್ ಟ್ಯಾಂಕ್ ಗಳನ್ನು ಸಾಮಾನ್ಯವಾಗಿ ತಿಂಗಳಲ್ಲಿ ಒಂದು ಬಾರಿ ಕ್ಲೀನ್ ಮಾಡಲಾಗುತ್ತದೆ. ಅದೇ ರೀತಿ ಟ್ಯಾಂಕ್ ಕ್ಲೀನಿಂಗ್ ಮಾಡುತ್ತಿದ್ದಾಗ ಗ್ಯಾಸ್ ಸೇವನೆಗೊಳಗಾಗಿ ಕಾರ್ಮಿಕರು ಅಸ್ವಸ್ಥಕ್ಕೀಡಾಗಿದ್ದಾರೆ.
ಸದ್ಯಕ್ಕೆ ಎಂಆರ್ ಪಿಎಲ್ ಘಟಕದ ಸುರಕ್ಷತಾ ವಿಭಾಗದ ಅಧಿಕಾರಿಗಳು ಸೋರಿಕೆಯನ್ನು ನಿಲ್ಲಿಸಿದ್ದಾರೆ. ಘಟನೆ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಂಆರ್ ಪಿಎಲ್ ಒಳಗಡೆ ಏನೋ ಆಗಿದೆಯೆಂದು ಬೆಳಗ್ಗೆಯೇ ಸುದ್ದಿ ಹಬ್ಬಿತ್ತು. ಆದರೆ ಸರಿಯಾದ ಮಾಹಿತಿ ಸಿಕ್ಕಿರಲಿಲ್ಲ. ಇದೀಗ ಇಬ್ಬರು ಸಾವನ್ನಪ್ಪಿದ್ದನ್ನು ಪೊಲೀಸರೇ ದೃಢಪಡಿಸಿದ್ದಾರೆ.
In a tragic incident at the Mangalore Refinery and Petrochemicals Limited (MRPL) facility near Surathkal, two contract workers died and another was critically injured due to a suspected toxic gas leak while cleaning chemical storage tanks.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am