ಬ್ರೇಕಿಂಗ್ ನ್ಯೂಸ್
13-07-25 11:13 pm Mangalore Correspondent ಕರಾವಳಿ
ಮಂಗಳೂರು, ಜುಲೈ 13 : ಅಪಘಾತದಿಂದ ತಲೆಗೆ ಗಂಭೀರ ಗಾಯಗೊಂಡು ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ನಿವಾಸಿಯಾದ ಸುಮಿತ್ರಾ (46) ಅವರ ಚಿಕಿತ್ಸೆಗೆ ನೆರವಾಗುವಂತೆ ಅವರ ಪುತ್ರ ಶ್ರೇಯಸ್ ಕೆ.ಬಿ. ವಿನಂತಿಸಿದ್ದಾರೆ.
ಸುಮಿತ್ರಾ ಅವರು ಜುಲೈ 3ರಂದು ಕೆಲಸಕ್ಕೆಂದು ಕುಲ್ಕುಂದದಿಂದ ಮರ್ಧಾಳ ಕಡೆಗೆ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಕೈಕಂಬ ಬಳಿ ರಿಕ್ಷಾ ಪಲ್ಟಿಯಾಗಿ ಅವರ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿತ್ತು. ರಿಕ್ಷಾದ ಹಿಂಬದಿ ಕುಳಿತಿದ್ದ ಅವರ ತಲೆಯ ಬಲಭಾಗಕ್ಕೆ ತೀವ್ರ ಗಾಯವಾಗಿದ್ದು, ತಕ್ಷಣವೇ ಕಡಬ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ 108 ಆಂಬುಲೆನ್ಸ್ ಮೂಲಕ ಪುತ್ತೂರು ಸಿಟಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ, ನಂತರ ಮಂಗಳೂರಿನ ಅಂಬೇಡ್ಕರ್ ವೃತ್ತದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಸ್ತುತ ಅವರಿಗೆ ತಲೆಯ ಭಾಗದ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮುಂದೆಯೂ ಶಸ್ತ್ರಚಿಕಿತ್ಸೆ ಅಗತ್ಯವಿದ್ದು, ಒಟ್ಟು ವೆಚ್ಚ ಸುಮಾರು 15 ಲಕ್ಷ ರೂ.ಗೂ ಹೆಚ್ಚು ಆಗಬಹುದೆಂದು ವೈದ್ಯರು ತಿಳಿಸಿದ್ದಾರೆ. ಸುಮಿತ್ರಾ ಅವರ ಕುಟುಂಬವು ಆರ್ಥಿಕವಾಗಿ ದುರ್ಬಲವಾಗಿದ್ದು, ಯಾವುದೇ ಕೃಷಿ ಅಥವಾ ಇತರ ಆದಾಯದ ಮೂಲ ಇರುವುದಿಲ್ಲ. ಇವರ ಪತಿ ಟೈಲರ್ ವೃತ್ತಿ ಮಾಡುತ್ತಿದ್ದು, ಇತ್ತೀಚೆಗೆ ಅವರಿಗೆ ಬೆನ್ನುಮೂಳೆಯ ಸಮಸ್ಯೆಯಿಂದ ಮನೆ ಖರ್ಚು ಹಾಗೂ ಮಕ್ಕಳ ವಿದ್ಯಾಭ್ಯಾಸದ ಖರ್ಚು ಎಲ್ಲವೂ ಸುಮಿತ್ರಾ ಅವರ ಮೇಲಿತ್ತು.
ಇಂತಹ ಸಂಕಷ್ಟದ ಸಂದರ್ಭದಲ್ಲಿ ಆಸ್ಪತ್ರೆ ಮತ್ತು ಚಿಕಿತ್ಸಾ ವೆಚ್ಚವನ್ನು ಭರಿಸುವುದು ಈ ಕುಟುಂಬಕ್ಕೆ ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಹೃದಯಿ ದಾನಿಗಳು ಅಮ್ಮನ ಚಿಕಿತ್ಸೆಗೆ ನೆರವಾಗುವಂತೆ ಸುಮಿತ್ರಾ ಅವರ ಪುತ್ರ ಶ್ರೇಯಸ್ ಕೆ.ಬಿ. ವಿನಂತಿಸಿದ್ದಾರೆ. ಮಾಹಿತಿಗೆ ಶ್ರೇಯಸ್ (ದೂ. 9108243172) ಅವರನ್ನು ಸಂಪರ್ಕಿಸಬಹುದು.
ನೆರವು ನೀಡುವವರು ಸುಮಿತ್ರಾ ಅವರ ಪುತ್ರಿ ಶ್ರೇಯಾ ಕೆ.ಬಿ. ಅವರ ಬ್ಯಾಂಕ್ ಖಾತೆಗೆ ಹಣ ನೀಡಬಹುದು.
Bank of Baroda -ಸುಬ್ರಹ್ಮಣ್ಯ ಶಾಖೆ, ಅಕೌಂಟ್ ನಂಬರ್: 70570100004654
IFSC: BARB0VJSUBR
ಗೂಗಲ್ ಪೇ ನಂಬರ್: 9743203656
A family from Subrahmanya is pleading for financial help after a tragic road accident left 46-year-old Sumithra with a serious head injury. She is currently undergoing intensive treatment at KMC Hospital in Mangaluru and requires urgent brain surgery, with medical expenses estimated to exceed ₹15 lakh.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm