ಬ್ರೇಕಿಂಗ್ ನ್ಯೂಸ್
16-07-25 01:01 pm Mangalore Correspondent ಕರಾವಳಿ
ಮಂಗಳೂರು, ಜುಲೈ 16 : ಜಿಲ್ಲೆಯಲ್ಲಿ ಮರಳು, ಕೆಂಪು ಕಲ್ಲು ಅಭಾವದಿಂದ ಜನರಿಗೆ, ಕಾರ್ಮಿಕರಿಗೆ ತೊಂದರೆಯಾಗಿದೆ. ಸಮಸ್ಯೆ ಆಗದಂತೆ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯ. ಹಾಗಂತ, ಕಾಂಗ್ರೆಸ್ ಸರ್ಕಾರದ ನೀತಿಯಿಂದ ಈ ಸಮಸ್ಯೆ ಆಗಿದ್ದಲ್ಲ. ಬಿಜೆಪಿ ಸರ್ಕಾರ ಇದ್ದಾಗಲೇ ಈ ಸಮಸ್ಯೆ ಇತ್ತು. ಈಗ ಸಮಸ್ಯೆ ನಿವಾರಿಸಲು ಚುನಾಯಿತ ಜನಪ್ರತಿನಿಧಿಗಳು ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಬೇಕೇ ವಿನಾ ಕಾಂಗ್ರೆಸ್ ಸರ್ಕಾರದ ಮೇಲೆ ಗೂಬೆ ಕೂರಿಸುವುದಲ್ಲ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ರಮಾನಾಥ ರೈ ಹೇಳಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ರಾಜ್ಯದಲ್ಲಿ ಕೆಂಪು ಕಲ್ಲು ಮೇಲಿನ ರಾಯಲ್ಟಿ ಹೆಚ್ಚಿರುವುದನ್ನು ಕಡಿಮೆ ಮಾಡುವಂತೆ ಉಸ್ತುವಾರಿ ಸಚಿವರು ಮತ್ತು ಗಣಿ ಇಲಾಖೆ ಅಧಿಕಾರಿಗಳೊಂದಿಗೆ ಮಾತಾಡಿದ್ದೇನೆ. ಕೇರಳದಲ್ಲಿ 32 ರೂ., ರಾಜ್ಯದಲ್ಲಿ 280 ರೂ. ರಾಯಲ್ಟಿ ಇದೆ ಎನ್ನುವುದನ್ನು ಕೆಂಪು ಕಲ್ಲಿನ ವ್ಯಾಪಾರಸ್ಥರು ಒಪ್ಪುವುದಿಲ್ಲ. ಇದರ ಬಗ್ಗೆ ಕಾರ್ಮಿಕರಲ್ಲಿ, ವ್ಯಾಪಾರಸ್ಥರಲ್ಲಿ ನೋವು ಇದೆ. ಹಾಗಂತ ಬಿಜೆಪಿಗರು ರಾಜಕೀಯ ಮಾಡೋದಲ್ಲ. ಸರ್ಕಾರದ ಮೇಲೆ ಗೂಬೆ ಕೂರಿಸುವುದಲ್ಲ. ಇದಕ್ಕೆ ಕಾಂಗ್ರೆಸ್ ಸರ್ಕಾರದ ನೀತಿ ಕಾರಣ ಅಲ್ಲ. ಬೀದಿಯಲ್ಲಿ ನಿಂತು ಮಾತಾಡಿದರೆ ಸಮಸ್ಯೆ ಪರಿಹಾರ ಆಗಲ್ಲ.
ಚುನಾಯಿತ ಜನಪ್ರತಿನಿಧಿಗಳಿಗೆ ಜವಾಬ್ದಾರಿ ಬೇಡವೇ, ತಮ್ಮ ಕೆಲಸ ಮಾಡಬೇಕು. ಸರ್ಕಾರದ ಮಟ್ಟದಲ್ಲಿ ಮಾತುಕತೆ ಮಾಡಿ ಜನರ ಸಮಸ್ಯೆ ಬಗೆಹರಿಸೋದನ್ನು ಮಾಡಬೇಕು. ಸರ್ಕಾರ ಯಾವುದೇ ಹೊಸ ನೀತಿ ಜಾರಿಗೊಳಿಸಿಲ್ಲ, ಕಾಂಗ್ರೆಸ್ ಸರ್ಕಾರವನ್ನು ದೂರುವುದು ಯಾಕೆಂದು ಪ್ರಶ್ನಿಸಿದ ರಮಾನಾಥ ರೈ, ಹಿಂದೆ ನಮ್ಮ ಸರ್ಕಾರ ಇದ್ದಾಗ ನಾನ್ ಸಿಆರ್ ಝೆಡ್ ಮರಳು ತೆಗೆಸಿಕೊಡಲು ಬಹಳಷ್ಟು ಪ್ರಯತ್ನ ಪಟ್ಟಿದ್ದು ನಾನು. ಬೆಂಗಳೂರಿನಲ್ಲಿ 50-60 ಮೀಟಿಂಗ್ ಮಾಡಿ ನಾನ್ ಸಿಆರ್ ಝೆಡ್ ಮರಳಿನ ಲೈಸನ್ಸ್ ತೆಗೆಸಿಕೊಟ್ಟಿದ್ದೆ. ಇದರ ವಿಚಾರ ನಮ್ಮ ಮರಳು ವ್ಯಾಪಾರಿಗಳಿಗೂ ತಿಳಿದಿದೆ.
ಆದರೆ ಈಗ ಮರಳು ಬ್ಲಾಕ್ ಗಳನ್ನು ಟೆಂಡರ್ ಮಾಡದೆ ಬ್ಲಾಕ್ ಮಾಡಿದ್ದಾರೆ. ಇದರಿಂದ ಸಮಸ್ಯೆ ಆಗಿದೆ, ಅಕ್ರಮ ಮರಳುಗಾರಿಕೆ ವಿಚಾರದಲ್ಲಿ ಪೊಲೀಸರು ಕ್ರಮ ತೆಗೆದುಕೊಂಡದ್ದು ಸರಿ ಇದೆ. ಅಧಿಕಾರಿಗಳು, ಜಿಲ್ಲಾಡಳಿತ, ಚುನಾಯಿತ ಪ್ರತಿನಿಧಿಗಳು ಕುಳಿತು ಚರ್ಚಿಸಿ ಸಮಸ್ಯೆ ಸರಿಪಡಿಸಬೇಕು. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆಗೂ ಮಾತಾಡಿದ್ದು ಸಮಸ್ಯೆ ಬಗೆಹರಿಸಲು ಹೇಳಿದ್ದೇನೆ ಎಂದು ರೈ ಹೇಳಿದರು.
ಸುದ್ದಿಗೋಷ್ಟಿಯಲ್ಲಿ ಶಶಿಧರ್ ಹೆಗ್ಡೆ, ಶುಭೋದಯ ಆಳ್ವ, ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲೀಂ, ಪ್ರಕಾಶ್ ಸಾಲ್ಯಾನ್ ಇದ್ದರು.
Senior Congress leader and former minister Ramanath Rai has stated that the current shortage of sand and laterite stone in the district is not a result of the Congress government’s policies, but rather a longstanding issue that also existed during the previous BJP government’s tenure. He urged elected representatives to take responsibility and work with senior officials to resolve the crisis instead of blaming the government.
16-07-25 07:05 pm
Bangalore Correspondent
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 04:37 pm
HK News Desk
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm