ಬ್ರೇಕಿಂಗ್ ನ್ಯೂಸ್
22-07-25 11:19 am Mangalore Correspondent ಕರಾವಳಿ
ಮಂಗಳೂರು, ಜುಲೈ 22 : ಮಂಗಳೂರು ಹೊರವಲಯದ ಕೆತ್ತಿಕಲ್ ಹೆದ್ದಾರಿಯಲ್ಲಿ ಭೂಕುಸಿತ ಆಗಿರುವ ರೀತಿಯಲ್ಲೇ ಉಳಾಯಿಬೆಟ್ಟು ಬಳಿಯ ಪೆರ್ಮಂಕಿ ಕೈಗುರಿ ಎಂಬಲ್ಲಿ ನಿರಂತರ ಮಳೆಗೆ ಭಾರೀ ಭೂಕುಸಿತ ಸಂಭವಿಸಿದೆ. ಉಳಾಯಿಬೆಟ್ಟು ಕಡೆಯಿಂದ ಪೆರ್ಮಾಯಿ ಚರ್ಚ್ ಕಡೆಗೆ ಸಾಗುವ ರಸ್ತೆಗೆ ಸಂಪರ್ಕಗೊಳ್ಳುವ ಡಾಮರು ರಸ್ತೆಯೇ ಪೂರ್ತಿ ಕುಸಿದು ಬಿದ್ದಿದೆ. ಇದರಿಂದಾಗಿ ಈ ಭಾಗದ ಜನರು ಮಲ್ಲೂರು ಮೂಲಕ ಸುತ್ತುಬಳಸಿ ಮಂಗಳೂರು ಬರುವಂತಾಗಿದೆ.
ರಸ್ತೆ ಸುಮಾರು ನಾಲ್ಕು ಅಡಿಗಳಷ್ಟು ಕುಸಿದಿದ್ದು ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಮನೆ, ತೋಟಗಳಿಗೆ ಮಣ್ಣು ಬಿದ್ದು ಹಾನಿಯಾಗಿದೆ. ತೋಟದಲ್ಲಿ ಅಡಿಕೆ, ತೆಂಗಿನ ಮರಗಳಿಗೂ ಹಾನಿಯಾಗಿದ್ದು ಮಣ್ಣಿನ ಭಾರಕ್ಕೆ ವಾಲಿ ನಿಂತಿವೆ. ಭಾನುವಾರದಿಂದ ಗುಡ್ಡ ಕುಸಿತ ಶುರುವಾಗಿದ್ದು ಸೋಮವಾರ ಮತ್ತಷ್ಟು ಕುಸಿತಗೊಂಡು ಆಸುಪಾಸಿನ ಕೃಷಿ ತೋಟಗಳಿಗೆ ಭಾರೀ ಹಾನಿಯಾಗಿದೆ. ಮಣ್ಣು ತೆರವಿಗೆ ಕಾರ್ಯಾಚರಣೆ ಶುರುವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಪೆರ್ಮಂಕಿ ಪದವಿನಿಂದ ಪಾಲಿಕಟ್ಟೆ ಹಾಗೂ ಮಲ್ಲೂರು ಉದ್ದಬೆಟ್ಟುವಿಗೆ ಸಂಪರ್ಕಿಸುವ ರಸ್ತೆ ಭೂಕುಸಿತದಿಂದ ಕುಸಿದು ಹೋಗಿದೆ. ಇದರಿಂದ ನೂರಾರು ಮನೆಗಳಿಗೆ ಸಂಚಾರಕ್ಕೆ ಅಡಚಣೆಯಾಗಿದ್ದು, ಪರ್ಯಾಯ ರಸ್ತೆ ಬಳಸುವ ಸ್ಥಿತಿ ನಿರ್ಮಾಣವಾಗಿದೆ. ಪೆರ್ಮಂಕಿ ಕೈಗುರಿಯಲ್ಲಿ ಕೈಗುರಿ ನಿವಾಸಿ ಯೆಹುಜೆ ಎಂಬವರ ಮನೆ ಬಿರುಕು ಬಿಟ್ಟಿದ್ದು, ವಾಸ ಮಾಡಲು ಸಾಧ್ಯವೇ ಇಲ್ಲದ ಸ್ಥಿತಿಯಾಗಿದೆ. ಮನೆಯಲ್ಲಿದ್ದ ನಿವಾಸಿಗಳು ವಾಮಂಜೂರುನ ಸಂಬಂಧಿಕರ ಮನೆಗೆ ಸ್ಥಳಾಂತರಗೊಂಡಿದ್ದಾರೆ.
ಪೆರ್ಮಂಕಿ ಪ್ರದೇಶ ಭೌಗೋಳಿಕವಾಗಿ ಎತ್ತರ ಪ್ರದೇಶವಾಗಿದ್ದು, ಇಲ್ಲಿಂದ ಕೆಳಮುಖವಾಗಿ ಕೈಗುರಿಯತ್ತ ತೋಡು, ತೊರೆಗಳು ಹರಿಯುತ್ತಿವೆ. ಇದರಿಂದ ಕಿರು ಜಲಪಾತಗಳು ಸೃಷ್ಟಿಯಾಗಿದ್ದು, ಭೂಕುಸಿತದಿಂದ ಇಲ್ಲಿನ ಜಲಪಾತ, ತೊರೆಗಳು ಬೇರೆ ದಾರಿ ಹಿಡಿದು ಹರಿಯುತ್ತಿವೆ. ತೋಡಿನಲ್ಲಿ ಭಾರಿ ಪ್ರಮಾಣದ ನೀರು ಹರಿಯುತ್ತಿದ್ದರೆ, ಭೂಕುಸಿತದಿಂದ ಮಣ್ಣು ಕುಸಿದು ಬಿದ್ದು ತೋಡಿನ ನೀರು ಎಲ್ಲೆಂದರಲ್ಲಿ ಸಾಗುತ್ತಿದೆ. ಪೆರ್ಮಂಕಿ, ಪೆರ್ಮಾಯಿ ಮೇಲ್ಭಾಗದಲ್ಲಿ ಕೆಂಪು ಕಲ್ಲಿನ ಕೋರೆಗಳಿದ್ದು ನಿರಂತರ ಮಳೆಗೆ ನೀರು ನಿಂತಿದ್ದರಿಂದ ಕೆಳಬಾಗದ ಮಣ್ಣು ಸಡಿಲಗೊಂಡು ಕುಸಿದಿದೆಯೇ ಎನ್ನುವ ಬಗ್ಗೆ ಅಧ್ಯಯನ ಆಗಬೇಕಿದೆ.
ಪೆರ್ಮಂಕಿ ಕೈಗುರಿ ಭೂಕುಸಿತ ಪ್ರದೇಶಕ್ಕೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಭೂಕುಸಿತದ ಬಗ್ಗೆ ವರದಿ ತಯಾರಿಸಿ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಕಳುಹಿಸಲಾಗುವುದು ಎಂದಿದ್ದಾರೆ. ದುರ್ಘಟನೆಯಿಂದ ಭಾರೀ ಪ್ರಮಾಣದ ನಷ್ಟ ಸಂಭವಿಸಿದೆ. ಬಿರುಕು ಬಿಟ್ಟ ಮನೆಯವರು ಸ್ಥಳಾಂತರಗೊಂಡಿದ್ದಾರೆ. ಮಳೆ ನಿಲ್ಲದೆ ಪರಿಹಾರ ಕಾರ್ಯಾಚರಣೆ ಕಷ್ಟ. ಇದನ್ನು ಜಿಲ್ಲಾಡಳಿತದಿಂದ ನಡೆಸಬೇಕೇ ಹೊರತು ಪಂಚಾಯಿತಿ ಮಟ್ಟದಲ್ಲಿ ಸಾಧ್ಯವಿಲ್ಲ ಎಂದು ಸ್ಥಳಕ್ಕೆ ಬಂದ ಉಳಾಯಿಬೆಟ್ಟು ಪಿಡಿಒ ಅನಿತಾ ಕಾತ್ಯಾಯಿನಿ ಪ್ರತಿಕ್ರಿಯಿಸಿದ್ದಾರೆ.
A massive landslide, reminiscent of the recent incident near Kettikal highway, has struck the Permanki Kaiguri area near Ulaibettu, on the outskirts of Mangaluru. Triggered by continuous heavy rains, the landslide has completely washed away the tar road connecting Ulaibettu to the Permayi Church side, cutting off a key access route and causing major disruptions for local residents.
22-07-25 03:02 pm
HK News Desk
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
22-07-25 03:04 pm
HK News Desk
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
22-07-25 01:27 pm
Mangalore Correspondent
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
High Drama in Dharmasthala, Fake Godman Remar...
21-07-25 06:42 pm
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
22-07-25 12:38 pm
HK News Desk
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm