ಬ್ರೇಕಿಂಗ್ ನ್ಯೂಸ್
22-07-25 11:13 pm Mangalore Correspondent ಕರಾವಳಿ
ಪುತ್ತೂರು, ಜುಲೈ 22 : ಮಂಗಳೂರು-ಪುತ್ತೂರು ಮಾರ್ಗದಲ್ಲಿ ಸಂಚರಿಸುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಹಿಂದೂ ಯುವತಿಗೆ ಅನ್ಯಕೋಮಿನ ಯುವಕನಿಂದ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪುತ್ತೂರು ಮಹಿಳಾ ಠಾಣೆಗೆ ಒಪ್ಪಿಸಿದ್ದಾರೆ.
ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ KSRTC ಬಸ್‌ನಲ್ಲಿ ಈ ಘಟನೆ ಸಂಭವಿಸಿದೆ. ಆರೋಪಿಯು ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಇದನ್ನು ಗಮನಿಸಿದ ಬಸ್‌ನಲ್ಲಿದ್ದ ಇತರ ಪ್ರಯಾಣಿಕರು ಆರೋಪಿಯನ್ನು ತಡೆದು, ಪುತ್ತೂರು ಮಹಿಳಾ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.
ಹಿಂದೂ ಸಂಘಟನೆಗಳಿಂದ ಆಕ್ರೋಶ ;
ಈ ಘಟನೆಯ ಕುರಿತು ಮಾಹಿತಿ ತಿಳಿದ ಹಿಂದೂ ಸಂಘಟನೆಗಳು, ಬಿಜೆಪಿ ಮುಖಂಡರು ಪುತ್ತೂರು ಮಹಿಳಾ ಠಾಣೆಯ ಮುಂದೆ ಜಮಾಯಿಸಿ, ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಇಂತಹ ಘಟನೆಗಳು ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವುದು ಆತಂಕಕಾರಿಯಾಗಿದೆ ಎಂದು ಹಿಂದೂಪರ ಮುಖಂಡರು ಆರೋಪಿಸಿದ್ದಾರೆ.
ಮುಖಂಡರ ಎಚ್ಚರಿಕೆ:
ಹಿಂದೂ ಯುವತಿಯರ ಮೇಲೆ ಅನ್ಯಮತೀಯರಿಂದ ಇಂತಹ ಕೃತ್ಯಗಳು ಹೆಚ್ಚುತ್ತಿರುವುದು ಗಂಭೀರ ವಿಷಯ. ಇದಕ್ಕೆ ಕಡಿವಾಣ ಹಾಕಲು ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಹಿಂದೂ ಸಮಾಜವು ಸುಮ್ಮನಿರುವುದಿಲ್ಲ ಎಂದು ಹಿಂದೂ ಸಂಘಟನೆಯ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
A disturbing incident has come to light on a Mangaluru–Puttur government bus, where a Hindu girl was allegedly molested by a youth belonging to another community. Alert co-passengers intervened, detained the accused, and handed him over to the Puttur Women’s Police Station.
02-09-25 02:37 pm
HK News Desk
Man sets woman on fire, Bangalore: ತನ್ನನ್ನು ಬ...
01-09-25 10:53 pm
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 04:44 pm
Mangalore Correspondent
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
02-09-25 04:31 pm
Mangalore Correspondent
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm