ಬ್ರೇಕಿಂಗ್ ನ್ಯೂಸ್
23-07-25 10:19 am Mangaluru Correspondent ಕರಾವಳಿ
ಬೆಂಗಳೂರು, ಜುಲೈ 23: ಧರ್ಮಸ್ಥಳ ಹೆಣ ಹೂತ ಪ್ರಕರಣದ ತನಿಖೆಗೆ ರಚಿಸಲಾಗಿರುವ ಎಸ್‌ಐಟಿ ತಂಡಕ್ಕೆ ಮತ್ತೆ 20 ಪೊಲೀಸ್ ಅಧಿಕಾರಿಗಳನ್ನು ಸೇರ್ಪಡೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ವಿವಿಧ ಠಾಣೆಗಳ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್, ಎಎಸ್ಐಗಳನ್ನು ಎಸ್ಐಟಿ ತಂಡಕ್ಕೆ ನೇಮಿಸಿ ಡಿಜಿಪಿ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.
ಪ್ರಕರಣದ ಬಗ್ಗೆ ಇಂದಿನಿಂದಲೇ ತನಿಖೆ ಆರಂಭವಾಗಲಿದೆ ಎನ್ನುವ ಮಾಹಿತಿಯಿದ್ದು ಮೊದಲಿಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಆಗಮಿಸಲಿರುವ ಎಸ್‌ಐಟಿ ಅಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಮತ್ತು ಧರ್ಮಸ್ಥಳ ಪೊಲೀಸ್ ಇನ್ಸ್‌ಪೆಕ್ಟರ್ ಅವರಿಂದ ಪ್ರಕರಣದ ಮಾಹಿತಿ ಪಡೆಯಲಿದ್ದಾರೆ. ಅಬಳಿಕ ತನಿಖೆ ಪ್ರಕ್ರಿಯೆ ಬಗ್ಗೆ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ನಿರ್ಧರಿಸಲಿದ್ದಾರೆ. ವ್ಯಕ್ತಿಯ ದೂರು ಆಧರಿಸಿ ಹಲವು ಆಯಾಮಗಳಲ್ಲಿ ತನಿಖೆ ನಡೆಯಲಿದೆ.

20 ಅಧಿಕಾರಿಗಳ ತಂಡಕ್ಕೆ ಯಾರೆಲ್ಲ ?
ಮಂಗಳೂರು ಡಿಸಿಆರ್‌ಇ ಎಸ್‌ಪಿ ಸಿ.ಎ ಸೈಮನ್, ಉಡುಪಿ ಸಿಎಎನ್ ಠಾಣೆಯ ಡಿಎಸ್‌ಪಿ ಎ.ಸಿ ಲೋಕೇಶ್, ದಕ್ಷಿಣ ಕನ್ನಡ ಸಿಇಎನ್ ಠಾಣೆಯ ಡಿಎಸ್‌ಪಿ ಮಂಜುನಾಥ್, ಸಿಎಸ್‌ಪಿ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ್, ಸಿಎಸ್‌ಪಿ ಇನ್ಸ್‌ಪೆಕ್ಟರ್ ಇಸಿ ಸಂಪತ್, ಸಿಎಸ್‌ಪಿ ಪೊಲೀಸ್ ಇನ್ಸ್ಪೆಕ್ಟರ್ ಕೆ.ಕುಸುಮಾಧರ್ ತಂಡದಲ್ಲಿದ್ದಾರೆ.
ಉತ್ತರ ಕನ್ನಡದ ಶಿರಸಿ ಗ್ರಾಮಾಂತರ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ ಗೌಡ, ಉಡುಪಿ, ಬೈಂದೂರು ಇನ್ಸ್ಪೆಕ್ಟರ್ ಪಿ.ಡಿ ಸವಿತ್ರತೇಜ, ಸಿಎಸ್‌ಪಿ ಸಬ್ ಇನ್ಸ್ ಪೆಕ್ಟರ್ ಕೋಕಿಲ ನಾಯಕ್, ಸಿಎಸ್‌ಪಿ ಸಬ್ ಇನ್ಸ್ ಪೆಕ್ಟರ್ ವೈಲೆಟ್ ಫೆಮಿನಾ, ಸಿಎಸ್‌ಪಿ ಸಬ್ ಇನ್ಸ್‌ಪೆಕ್ಟರ್ ಶಿವಶಂಕರ್, ಉತ್ತರ ಕನ್ನಡ, ಶಿರಸಿ ಎನ್.ಎಂ. ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಾಜ್‌ಕುಮಾರ್ ಉಕ್ಕಳ್ಳಿ, ಉತ್ತರ ಕನ್ನಡ ಆಂಕೋಲ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಆರ್.ಸುಹಾಸ್ ಇದ್ದಾರೆ.
ಉತ್ತರ ಕನ್ನಡ ಮುಂಡಗೋಡ ಠಾಣೆ ಸಬ್ ಇನ್ಸ್ ಪೆಕ್ಟರ್ ವಿನೋದ್ ಎಸ್. ಕಾಳಪ್ಪನವರ್, ಮಂಗಳೂರು ಮೆಸ್ಕಾಂ ಸಬ್ ಇನ್ಸ್ ಪೆಕ್ಟರ್ ಜೆ.ಗುಣಪಾಲ್, ಉಡುಪಿ ನಗರ ಪೊಲೀಸ್ ಠಾಣೆಯ ಎಎಸ್‌ಐ ಸುಭಾಷ್ ಕಾಮತ್, ಉಡುಪಿ ಕಾಪು ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಹರೀಶ್‌ಬಾಬು, ಉಡುಪಿ ಮಲ್ಪೆ ಸರ್ಕಲ್ ಕಚೇರಿಯ ಹೆಡ್ ಕಾನ್‌ಸ್ಟೇಬಲ್ ಪ್ರಕಾಶ್, ಉಡುಪಿ ಕುಂದಾಪುರ ನಗರ ಠಾಣೆಯ ಹೆಡ್ ಕಾನ್‌ಸ್ಟೇಬಲ್ ನಾಗರಾಜ್ ಮತ್ತು ಚಿಕ್ಕಮಗಳೂರಿನ ಎಫ್‌ಎಂಎಸ್ ಹೆಡ್ ಕಾನ್‌ಸ್ಟೇಬಲ್ ದೇವರಾಜ್ ಅವರನ್ನು ನಿಯೋಜನೆ ಮಾಡಲಾಗಿದೆ. ಅಪರಾಧ ಪತ್ತೆಯಲ್ಲಿ ಪರಿಣತಿ ಪಡೆದ ಪೊಲೀಸರ ತಂಡವನ್ನು ರಚಿಸಲಾಗಿದ್ದು ಇವರು ಸರದಿಯಂತೆ ಬಂದು ತನಿಖೆ ನಡೆಸುವ ಸಾಧ್ಯತೆಯಿದೆ.
The Special Investigation Team (SIT) probing the alleged burial of bodies in Dharmasthala has been further strengthened with the appointment of 20 more police officers. The order was issued by Karnataka DGP Dr. M.A. Saleem, deploying officers with crime detection experience from Dakshina Kannada, Udupi, and Uttara Kannada districts.The SIT, led by DGP (Internal Security Division & Cyber Command) Pronab Mohanty, will officially commence its investigation today.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm