ಬ್ರೇಕಿಂಗ್ ನ್ಯೂಸ್
26-07-25 10:44 am Mangalore Correspondent ಕರಾವಳಿ
ಮಂಗಳೂರು, ಜುಲೈ 26 : ರಾಜ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆ "ಹಿಂದೂ ವಿರೋಧಿ" ಎಂಬ ಬಿಜೆಪಿ ಆರೋಪಕ್ಕೆದುರಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಶುಕ್ರವಾರ ಮಂಗಳೂರಿನ ಪುರಭವನದಲ್ಲಿ ಇದೇ ಮೊದಲ ಬಾರಿಗೆ ಮುಜರಾಯಿ ದೇವಸ್ಥಾನಗಳ ನಿರ್ವಹಣಾ ಸಮಿತಿಗಳ ಸದಸ್ಯರನ್ನು ಒಳಗೊಂಡ ಸಭೆ ನಡೆಸಲಾಯಿತು.
ಹಿಂದೂ ದೇವಸ್ಥಾನಗಳ ಅಭಿವೃದ್ಧಿ ಮತ್ತು ಧಾರ್ಮಿಕ ಸಾಮರಸ್ಯವನ್ನು ಖಚಿತಪಡಿಸಿಕೊಳ್ಳಲು ಕಾಂಗ್ರೆಸ್ ನಾಯಕರಿಗೆ ಈ ಸಭೆ ಒಂದು ವೇದಿಕೆಯಾಗಿತ್ತು. ಸಭೆಯಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಹಿಂದೂ ದೇವಸ್ಥಾನಗಳ ಹಣವನ್ನು ಮಸೀದಿ ಮತ್ತು ಚರ್ಚ್‌ಗಳ ಅಭಿವೃದ್ಧಿಗೆ ಬಳಸಲಾಗುತ್ತಿದೆ ಎಂದು ತಪ್ಪು ಮಾಹಿತಿಯನ್ನು ವ್ಯವಸ್ಥಿತವಾಗಿ ಹರಡಲಾಗುತ್ತಿದೆ. ಆದರೆ ಇದು ಶುದ್ಧ ಸುಳ್ಳು. ಕಾಂಗ್ರೆಸ್ ಸರ್ಕಾರವು ದೇವಾಲಯಗಳಿಗೆ ನೀಡಿದ ಐತಿಹಾಸಿಕ ಮತ್ತು ಆರ್ಥಿಕ ಬೆಂಬಲವನ್ನು ಎತ್ತಿ ತೋರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವದಲ್ಲಿ ದೇವಾಲಯಗಳಿಗೆ ನೀಡಲಾಗುತ್ತಿದ್ದ ತಸ್ತಿಕ್ ಅನುದಾನವನ್ನು ಹಲವು ಪಟ್ಟು ಹೆಚ್ಚಿಸಲಾಗಿದೆ. ತಸ್ತಿಕ್ ಅನ್ನು ಮೊದಲಿಗೆ 24,000 ರೂ.ಗಳಿಂದ 36,000 ರೂ.ಗೆ, ನಂತರ 48,000 ರೂ.ಗಳಿಗೆ ಮತ್ತು ಇತ್ತೀಚೆಗೆ 72,000 ರೂ.ಗಳಿಗೆ ಹೆಚ್ಚಿಸಿದ್ದು ಕಾಂಗ್ರೆಸ್ ಸರ್ಕಾರ. ಇನಾಂ ಭೂ ಅನುದಾನ ರದ್ದುಗೊಳಿಸಿದ ನಂತರ ಇದಕ್ಕೆ ಪರಿಹಾರವಾಗಿ ತಸ್ತಿಕ್ ವ್ಯವಸ್ಥೆಯನ್ನು ಮಾಜಿ ಮುಖ್ಯಮಂತ್ರಿ ಆರ್. ಗುಂಡೂರಾವ್ ಪರಿಚಯಿಸಿದ್ದರು ಎಂದು ಸಚಿವರು ತಮ್ಮ ತಂದೆಯ ಕೊಡುಗೆಯನ್ನು ಸ್ಮರಿಸಿದರು.
ದೇವಾಲಯಗಳನ್ನು ರಾಜಕೀಯ ಉದ್ದೇಶಗಳಿಗೆ ದುರುಪಯೋಗ ಮಾಡಿಕೊಳ್ಳಬಾರದು. ಧರ್ಮದಲ್ಲಿ ರಾಜಕೀಯ ಬೆರೆಸುವುದು ಸುಲಭ. ಆದರೆ ಅದು ಅಪಾಯಕಾರಿ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಸಭೆಯನ್ನು ಸಂಯೋಜಿಸಿದ್ದ ಎಂಎಲ್‌ಸಿ ಮಂಜುನಾಥ್ ಭಂಡಾರಿ, ರಾಜ್ಯ ಸರ್ಕಾರವು ಮುಜರಾಯಿ ದೇವಾಲಯ ಸಮಿತಿಗಳಿಗೆ 1,000ಕ್ಕೂ ಹೆಚ್ಚು ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡಿದೆ. ಆದರೆ ಈ ರೀತಿಯ ಹುದ್ದೆಗಳನ್ನು ರಾಜಕೀಯಕ್ಕೆ ಬಳಸಬಾರದು ಎಂದು ಒತ್ತಿ ಹೇಳಿದರು. ದೇವಾಲಯದ ಆದಾಯವನ್ನು ದೇಗುಲಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ಕಟ್ಟುನಿಟ್ಟಾಗಿ ಬಳಸಲಾಗುತ್ತದೆ ಎಂಬ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಮಾತನ್ನು ಭಂಡಾರಿ ಪುನರುಚ್ಚರಿಸಿದರು.
In a significant move to counter the BJP’s allegations of being “anti-Hindu,” the Karnataka Congress government, under the leadership of Dinesh Gundu Rao, Minister and Dakshina Kannada district in-charge, held a first-of-its-kind meeting with members of temple management committees on Friday at the Mangaluru Town Hall.
31-08-25 05:35 pm
HK News Desk
Bangalore Court, Dharmasthala, Delete Videos:...
30-08-25 04:51 pm
Kalaburagi ACP, Arrest: ರಿಯಲ್ ಎಸ್ಟೇಟ್ ಉದ್ಯಮಿಗ...
29-08-25 10:51 pm
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
31-08-25 01:32 pm
HK News Desk
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
Siddaramaiah, 1991 Election: 1991ರ ಚುನಾವಣೆಯಲ್...
29-08-25 05:20 pm
31-08-25 01:56 pm
Mangaluru Correspondent
Udupi, Diksha Sets New World Record, Bharatan...
31-08-25 12:49 pm
ಬೆಂಗಳೂರಿನಲ್ಲಿ ಉಳಿದಿದ್ದು ನಿಜ, ದೆಹಲಿಗೆ ಹೋಗಿದ್ದೂ...
30-08-25 11:08 pm
2002ರ ಉಳ್ಳಾಲದ ಚಾರಿತ್ರಿಕ ನಾಗಮಂಡಲದ ರೂವಾರಿ, ಧಾರ್...
30-08-25 11:01 pm
Mangalore, Ganesh Chaturthi, Catholic: ಸಂಘನಿಕ...
30-08-25 10:10 pm
30-08-25 03:22 pm
Mangalore Correspondent
Santosh Shetty Murder, Karkala, Pune: ಹಣಕ್ಕಾಗ...
27-08-25 10:23 pm
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm