ಬ್ರೇಕಿಂಗ್ ನ್ಯೂಸ್
26-07-25 10:41 pm Mangalore Correspondent ಕರಾವಳಿ
ಮಂಗಳೂರು, ಜುಲೈ 26 : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಘಟಕವನ್ನು ಸಂಘಟನೆ ದೃಷ್ಟಿಯಿಂದ ನಗರ ಮತ್ತು ಗ್ರಾಮಾಂತರ ಎಂದು ವಿಭಜಿಸಲು ನಿರ್ಧರಿಸಲಾಗಿದೆ. ಜಿಲ್ಲಾ ಘಟಕವನ್ನು ಎರಡಾಗಿ ವಿಭಜಿಸುವ ಬಗ್ಗೆ ಕೆಪಿಸಿಸಿಗೆ ಪ್ರಸ್ತಾವನೆ ಹೋಗಿದ್ದು, ಇನ್ನೂ ಅಲ್ಲಿಂದ ಅನುಮತಿ ಸಿಕ್ಕಿಲ್ಲ. ಈ ಕುರಿತು ಕೆಪಿಸಿಸಿ ಮಟ್ಟದಲ್ಲಿ ಚರ್ಚೆಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಈಗಾಗಲೇ ಮಹಿಳಾ ಕಾಂಗ್ರೆಸ್ ಘಟಕವನ್ನು ಎರಡಾಗಿ ವಿಭಜಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾ ನಗರ ಮತ್ತು ಗ್ರಾಮಾಂತರ ಘಟಕಗಳೆಂದು ವಿಭಜಿಸಲಾಗಿದೆ. ನಗರ ಘಟಕವು ಮಂಗಳೂರು ಉತ್ತರ, ದಕ್ಷಿಣ, ಉಳ್ಳಾಲ ಹಾಗೂ ಮೂಡುಬಿದಿರೆ ಕ್ಷೇತ್ರಗಳನ್ನು ಒಳಗೊಂಡಿದೆ. ಗ್ರಾಮಾಂತರ ಘಟಕದಲ್ಲಿ ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಕ್ಷೇತ್ರಗಳಿವೆ. ಜಿಲ್ಲೆ ತುಂಬ ವಿಸ್ತಾರ ಆಗಿರುವುದರಿಂದ ಅಧ್ಯಕ್ಷರು ಇತರ ಪದಾಧಿಕಾರಿಗಳು ಎಲ್ಲ ಕಡೆ ತೆರಳುವುದಕ್ಕೆ ಕಷ್ಟವಾಗುತ್ತದೆ ಎಂಬ ಕಾರಣಕ್ಕೆ ಈ ರೀತಿ ವಿಭಜಿಸಲಾಗಿದೆ. ನಗರ ಘಟಕಕ್ಕೆ ಮಾಜಿ ಕಾರ್ಪೊರೇಟರ್ ಅಪ್ಪಿ ಎಸ್ ಅಧ್ಯಕ್ಷರಾದರೆ, ಗ್ರಾಮಾಂತರ ಘಟಕಕ್ಕೆ ಉಷಾ ಅಂಚನ್ ಅಧ್ಯಕ್ಷರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಇದೇ ರೀತಿ ಪಕ್ಷದ ಎಲ್ಲ ಘಟಕಗಳೂ ಎರಡಾಗಿ ವಿಭಜನೆಗೊಳ್ಳಲಿದೆ, ಪಕ್ಷದ ಕಾರ್ಯಕರ್ತರಿಗೂ ಹೆಚ್ಚಿನ ಅವಕಾಶ ಸಿಗುವುದು ಮತ್ತು ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ. ಜಿಲ್ಲಾ ಕಾಂಗ್ರೆಸ್ ಘಟಕದ ವಿಭಜನೆಗೆ ಇನ್ನೂ ಕೆಪಿಸಿಸಿ ಕಡೆಯಿಂದ ಸೂಚನೆ ಬಂದಿಲ್ಲ. ಅಂತಹ ಪ್ರಸ್ತಾಪ ಮಾತ್ರ ಇದೆ ಎಂದು ಹರೀಶ್ ಕುಮಾರ್ ಹೇಳಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ತುರುಸಿನ ಸ್ಪರ್ಧೆ
ಜಿಲ್ಲಾ ಕಾಂಗ್ರೆಸ್ ಘಟಕ ವಿಭಜನೆಯಾದರೆ ಯಾರು ಅಧ್ಯಕ್ಷರಾಗುತ್ತಾರೆ ಎಂಬ ಬಗ್ಗೆ ಈಗಾಗಲೇ ಲಾಬಿ ಶುರುವಾಗಿದೆ. ನಗರ ಘಟಕದಲ್ಲಿ ಲೋಕಸಭೆಗೆ ಸ್ಪರ್ಧಿಸಿದ್ದ ಪದ್ಮರಾಜ್ ಪೂಜಾರಿ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಅಲ್ಲದೆ, ಶಶಿಧರ ಹೆಗ್ಡೆ, ಐವಾನ್ ಡಿಸೋಜ, ಮಿಥುನ್ ರೈ ಹೆಸರೂ ಚಾಲ್ತಿಯಲ್ಲಿದೆ. ಎರಡು ಘಟಕಗಳಾದರೆ ಒಂದು ಕಡೆ ಬಿಲ್ಲವ, ಇನ್ನೊಂದು ಕಡೆ ಬಂಟ್ ಅಥವಾ ಗೌಡ ಜನಾಂಗದವರು ಅಧ್ಯಕ್ಷರಾಗುವ ಸಾಧ್ಯತೆಯಿದೆ.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಕಳೆದ ಎಂಟು ವರ್ಷಗಳಿಂದ ಅಧ್ಯಕ್ಷ ಸ್ಥಾನದಲ್ಲಿದ್ದು, ಅವರ ಅವಧಿ ಎರಡು ವರ್ಷಗಳ ಹಿಂದೆಯೇ ಮುಗಿದಿತ್ತು. ಆದರೂ ಚುನಾವಣೆ ಇನ್ನಿತರ ಕಾರಣಕ್ಕೆ ಅವರನ್ನೇ ಎರಡು ಅವಧಿ ಬಳಿಕವೂ ಮುಂದುವರಿಸಲಾಗಿತ್ತು. ಇದೀಗ ಬೆಂಗಳೂರು, ಬೆಳಗಾವಿ ಮಾದರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಘಟಕವನ್ನು ವಿಭಜಿಸಿ ಪಕ್ಷವನ್ನು ತಳಮಟ್ಟದಲ್ಲಿ ಗಟ್ಟಿಯಾಗಿ ಸಂಘಟಿಸಲು ತಂತ್ರಗಾರಿಕೆ ನಡೆದಿದೆ.
The Dakshina Kannada District Congress unit is moving toward a strategic organizational split into urban and rural segments. While a formal proposal has been sent to the Karnataka Pradesh Congress Committee (KPCC), official approval is still awaited. District Congress President Harish Kumar confirmed during a press conference that discussions regarding the division are ongoing at the KPCC level.
01-09-25 10:53 pm
Bangalore Correspondent
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
01-09-25 10:01 pm
Mangalore Correspondent
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
01-09-25 09:21 pm
Udupi Correspondent
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm