ಬ್ರೇಕಿಂಗ್ ನ್ಯೂಸ್
31-07-25 10:23 am Mangalore Correspondent ಕರಾವಳಿ
ಮಂಗಳೂರು, ಜುಲೈ 31 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳಿನ ಸಮಸ್ಯೆಯಿಂದ ತೀವ್ರ ಸಂಕಷ್ಟ ಎದುರಾಗಿದ್ದನ್ನು ಮನಗಂಡು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಶಾಸಕ- ಸಂಸದರ ನಿಯೋಗ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.
ಕೆಂಪು ಕಲ್ಲು ಮತ್ತು ಮರಳಿನ ಪೂರೈಕೆಯಲ್ಲಿ ತೀವ್ರ ಅಭಾವ ಉಂಟಾಗಿದ್ದರಿಂದ ಜಿಲ್ಲೆಯಲ್ಲಿ ಸಾಮಾನ್ಯ ಜನರ ಗೃಹ ನಿರ್ಮಾಣ ಸೇರಿದಂತೆ ಎಲ್ಲ ರೀತಿಯ ಕಟ್ಟಡ ಕಾಮಗಾರಿಗಳು ಸ್ಥಗಿತಗೊಂಡಿವೆ. ಇದು ನಮ್ಮ ಜಿಲ್ಲೆಯ ಆರ್ಥಿಕತೆಗೂ ಹೊಡೆತ ನೀಡಿದ್ದು, ಸಾವಿರಾರು ಕಾರ್ಮಿಕರ ಬದುಕು ದುಸ್ತರಗೊಂಡಿದೆ. ಹಾಗಾಗಿ ಕೂಡಲೇ ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸುವಂತೆ ನಮ್ಮೆಲ್ಲರ ಆಗ್ರಹವಾಗಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ನೇತೃತ್ವದಲ್ಲಿ ಜಿಲ್ಲೆಯ ಬಿಜೆಪಿ ಶಾಸಕರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.
ಕೆಂಪು ಕಲ್ಲಿನ ಕೋರೆಯ ಪರವಾನಗಿಯನ್ನು ಗಣಿ ಇಲಾಖೆಯಿಂದ ಹೊರಗಿಟ್ಟು ಸರಳೀಕೃತಗೊಳಿಸಬೇಕು. ಕೆಂಪು ಕಲ್ಲಿಗೆ ಕೇರಳದಲ್ಲಿ ಟನ್ ಒಂದಕ್ಕೆ 32 ರೂ. ರಾಯಲ್ಟಿ ಇದ್ದರೆ ಕರ್ನಾಟಕದಲ್ಲಿ 290 ರೂ. ಇದೆ. ಇದನ್ನು ಹತ್ತು ಶೇಕಡಾಕ್ಕೆ ಇಳಿಸಬೇಕು ಎಂದು ಮನವಿಯಲ್ಲಿ ಕೋರಿದ್ದಾರೆ. ಅಲ್ಲದೆ, ಮರಳಿನ ಪೂರೈಕೆ ವಿಷಯದಲ್ಲಿ ನಿರ್ದಿಷ್ಟ ಮಾರ್ಗದರ್ಶಿ ಸೂತ್ರ ಅಳವಡಿಸಬೇಕು. ಕರಾವಳಿಗೆ ಪ್ರತ್ಯೇಕ ಮರಳು ನೀತಿ ಅಳವಡಿಸಬೇಕು. ತೋಡು, ಹೊಳೆಯಲ್ಲಿ ಮರಳು ತೆಗೆಯಲು ಸ್ಥಳೀಯಾಡಳಿತದಿಂದ ಪರವಾನಗಿ ನೀಡುವಂತೆ ಮಾಡಬೇಕು ಮನವಿಯಲ್ಲಿ ಆಗ್ರಹ ಮಾಡಲಾಗಿದೆ.
ಇದೇ ಸಂದರ್ಭದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಹಿರಿಯ ಐಎಎಸ್ ಅಧಿಕಾರಿ ಸಮೀರ್ ಶುಕ್ಲಾ ಅವರನ್ನೂ ಭೇಟಿ ಮಾಡಿ ಜಿಲ್ಲೆಯಲ್ಲಿ ಜನಸಾಮಾನ್ಯರು ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ವಿವರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜ, ರಾಜೇಶ್ ನಾಯ್ಕ್, ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ, ಕಿಶೋರ್ ಕುಮಾರ್, ಪ್ರತಾಪಸಿಂಹ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಯತೀಶ್ ಆರ್ವಾರ್, ಮಾಧ್ಯಮ ಪ್ರಕೋಷ್ಠದ ಸಂಚಾಲಕ ವಸಂತ ಜೆ.ಪೂಜಾರಿ ಉಪಸ್ಥಿತರಿದ್ದರು.
A delegation of BJP MPs and MLAs from Dakshina Kannada district, led by MP Capt. Brijesh Chowta, met Karnataka Chief Minister Siddaramaiah in Bengaluru to submit a memorandum urging immediate action to resolve the ongoing crisis surrounding the supply of red stone and sand in the district.
31-07-25 11:20 pm
Bangalore Correspondent
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
Pranab Mohanty, SIT, Dharmasthala; ಎಡಿಜಿಪಿ ಪ್...
30-07-25 06:28 pm
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
31-07-25 10:08 pm
HK News Desk
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
31-07-25 11:16 pm
Mangalore Correspondent
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
Human Skull, Multiple Bones, Dharmasthala, SI...
31-07-25 08:45 pm
31-07-25 06:04 pm
Mangalore Correspondent
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm