ಬ್ರೇಕಿಂಗ್ ನ್ಯೂಸ್
06-08-25 07:37 pm Mangalore Correspondent ಕರಾವಳಿ
ಮಂಗಳೂರು, ಆ.6 : ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣ ಸಂಬಂಧಿಸಿ ಎಸ್ಐಟಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ಇಂದು ಸ್ನಾನಘಟ್ಟದ ಬಳಿಯ ಬಂಗ್ಲೆಗುಡ್ಡೆ ಕಾಡಿನ ಮಧ್ಯೆ ಶೋಧ ಕಾರ್ಯ ನಡೆಸಿದ್ದಾರೆ. ಇದಲ್ಲದೆ, ಧರ್ಮಸ್ಥಳ ಗ್ರಾಮ ಪಂಚಾಯತ್ ಕಚೇರಿಗೂ ತೆರಳಿ ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಇದೇ ವೇಳೆ, ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಬಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಧರ್ಮಸ್ಥಳ ಪ್ರಕರಣದಲ್ಲಿ ಎಲ್ಲ ಆಯಾಮಗಳಿಂದಲೂ ಎಸ್ಐಟಿ ತನಿಖೆಗೆ ಇಳಿದಿದ್ದು, ಯಾವುದೇ ರೀತಿಯ ಗೊಂದಲ, ಸಂಶಯ ಉಳಿಯಬಾರದು ಎನ್ನುವ ನಿಟ್ಟಿಲ್ಲಿ ಶೋಧಕ್ಕೆ ಮುಂದಾಗಿದೆ. ದೂರುದಾರ ವ್ಯಕ್ತಿ ತೋರಿಸಿದ್ದ 13 ಪಾಯಿಂಟ್ ಪೈಕಿ 12 ಕಡೆ ಈಗಾಗಲೇ ಅಗೆಯಲಾಗಿದ್ದು, ಒಂದು ಕಡೆ ಮಾತ್ರ ಅಸ್ಥಿಪಂಜರ ಸಾಕ್ಷ್ಯ ಸಿಕ್ಕಿತ್ತು. ಇದರ ನಡುವೆ ಬಂಗ್ಲೆಗುಡ್ಡೆ ಕಾಡಿನ ಮಧ್ಯೆ ಮತ್ತೊಂದು ಕಡೆ ಶವದ ಅಸ್ಥಿಪಂಜರ ಸಿಕ್ಕಿದ್ದು ಬಿಟ್ಟರೆ, ಗುರುತಿಸಲಾದ ಪಾಯಿಂಟ್ ಗಳಲ್ಲಿ ಹೆಚ್ಚು ಸಾಕ್ಷ್ಯ ಸಿಕ್ಕಿರಲಿಲ್ಲ. ಹೀಗಾಗಿ ಹಲವು ರೀತಿಯ ಗೋಜಲು, ಗೊಂದಲ ಎದುರಾಗಿರುವಾಗಲೇ ದೂರುದಾರ ವ್ಯಕ್ತಿ ಬೇರೆಯದ್ದೇ ಪಾಯಿಂಟ್ ಗಳನ್ನು ಹೇಳತೊಡಗಿದ್ದಾನೆ.
ದೂರುದಾರ ವ್ಯಕ್ತಿಯ ಕೋರಿಕೆಯಂತೆ, ಬುಧವಾರ ಬಂಗ್ಲೆಗುಡ್ಡೆ ಕಾಡಿನಲ್ಲಿ ಮೊನ್ನೆ ಅಸ್ಥಿಪಂಜರ ಸಿಕ್ಕಿರುವ ಜಾಗದಲ್ಲೇ ಇಂದು ಕಾರ್ಮಿಕರನ್ನು ಬಳಸಿ ಅಗೆಯಲಾಗಿದೆ. ಆದರೆ, ಯಾವುದೇ ಸಾಕ್ಷ್ಯ ಲಭಿಸಿಲ್ಲ ಎಂದು ಹೇಳಲಾಗುತ್ತಿದ್ದು, ಸಂಜೆಯ ವೇಳೆಗೆ ಗುಡ್ಡದಿಂದ ಇಳಿದು ಬಂದ ಅಧಿಕಾರಿಗಳು ನೇರವಾಗಿ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ತೆರಳಿದ್ದಾರೆ. ಇದೇ ವೇಳೆ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿಗೆ ಬಂದಿದ್ದು, ಡಿಐಜಿ, ಎಸ್ಪಿ ಮತ್ತು ತಂಡದ ಇತರ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಿದ್ದಾರೆ.
ಇದೇ ವೇಳೆ, ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ 1995ರಿಂದ 2014ರ ವರೆಗೆ ಆಡಳಿತ ನಡೆಸಿರುವ ಅಧ್ಯಕ್ಷರು, ಅಧಿಕಾರಿಗಳು ಮತ್ತು ಅಸಹಜ ಸಾವುಗಳ ಕುರಿತ ದಾಖಲೆಗಳನ್ನು ಎಸ್ಐಟಿ ಅಧಿಕಾರಿಗಳು ಪಡೆದಿದ್ದಾರೆ. ಎಸ್ಐಟಿ ತಂಡದ ಇನ್ಸ್ ಪೆಕ್ಟರ್ ಒಬ್ಬರು ಗ್ರಾಮ ಪಂಚಾಯತ್ ಕಚೇರಿಗೆ ಬಂದು ಅಲ್ಲಿರುವ ದಾಖಲೆಗಳನ್ನು ಸಂಗ್ರಹಿಸಿದ್ದಾರೆ.
ಇದೇ ವೇಳೆ, ಯೂಟ್ಯೂಬ್ ಚಾನೆಲ್ ಮತ್ತು ಸೋಶಿಯಲ್ ಮೀಡಿಯಾಗಳಲ್ಲಿ ಧರ್ಮಸ್ಥಳ ದೇವಸ್ಥಾನವನ್ನು ಟಾರ್ಗೆಟ್ ಮಾಡಲಾಗಿದೆ, ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ, ಎಸ್ಐಟಿ ತಂಡದ ಮಾಹಿತಿಯೆಂದು ಸುಳ್ಳು ವಿಚಾರಗಳನ್ನು ಹರಿಯಬಿಟ್ಟು ಕ್ಷೇತ್ರದ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆಂದು ಕಿರುತೆರೆ ನಟ ಕಿರಿಕ್ ಕೀರ್ತಿ ಬೆಳ್ತಂಗಡಿಗೆ ಬಂದು ಎಸ್ಐಟಿ ಕಚೇರಿಗೆ ದೂರು ನೀಡಿದ್ದಾರೆ. ಇದೇ ವೇಳೆ, ಹೋರಾಟಗಾರರ ಪರ ಇರುವ ಸೋಶಿಯಲ್ ಮೀಡಿಯಾಗಳ ವಿರುದ್ಧ ಕಿರಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
The Special Investigation Team (SIT), probing the alleged burial of a body in Dharmasthala, resumed its search operations today in the Banglegudde forest near Snanaghatta. The search was specifically conducted at the same location where skeletal remains were discovered earlier this week. Labourers were deployed to assist in digging, but no new evidence was found during today’s search.
29-08-25 10:51 pm
HK News Desk
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
ಚಿಂತಾಮಣಿಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ ; 100...
29-08-25 05:59 pm
Chikkamagaluru, Police, Fine: ಸಾರ್ವಜನಿಕರಿಗೆ ಮ...
28-08-25 06:23 pm
Bidar Bus Driver Suicide: ಬೀದರ್ ಬಸ್ ಡಿಪೋ ನಲ್ಲ...
28-08-25 02:41 pm
29-08-25 05:20 pm
HK News Desk
PM Modi Japan: ಪ್ರಧಾನಿ ಮೋದಿಗೆ ಜಪಾನ್ನಲ್ಲಿ ಗಾಯ...
29-08-25 01:47 pm
ಮೋದಿ 75 ವರ್ಷಕ್ಕೆ ನಿವೃತ್ತರಾಗಬೇಕು ಎಂದು ಹೇಳಿಲ್ಲ...
29-08-25 12:50 pm
ಪ್ರತಿ ಭಾರತೀಯ ಕುಟುಂಬಗಳು ಮೂರಕ್ಕಿಂತ ಹೆಚ್ಚು ಮಕ್ಕಳ...
29-08-25 10:56 am
Kanhangad Suicide: ಕಾಞಂಗಾಡ್ ; ಬೆಳೆದು ನಿಂತ ಇಬ್...
28-08-25 12:19 pm
29-08-25 10:54 pm
Mangalore Correspondent
Talapady Accident, Ksrtc, Death, Mangalore: ತ...
29-08-25 09:08 pm
Mangalore, Eric Ozario, Konkani, Death: ಮಾಂಡ್...
29-08-25 08:13 pm
Mahesh Shetty Thimarodi, SIT, Mangalore: ಬೆಳ್...
29-08-25 03:48 pm
Puttur Tahsildar, Lokayukta Raid: ಜಮೀನು ಪರಭಾರ...
28-08-25 11:00 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm