ಬ್ರೇಕಿಂಗ್ ನ್ಯೂಸ್
07-08-25 10:45 pm Mangalore Correspondent ಕರಾವಳಿ
ಉಳ್ಳಾಲ, ಆ.7 : ನಿಯಂತ್ರಣ ತಪ್ಪಿದ ಸ್ಕೂಟರೊಂದು ಆವರಣ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು ಸಹ ಸವಾರನಾಗಿದ್ದ ಅವರ ಪುತ್ರ ಪ್ರಾಣಾಪಾಯದಿಂದ ಪಾರಾದ ಘಟನೆ ಉಳ್ಳಾಲದ ಸುಂದರಿಭಾಗ್ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಮೂಲತಃ ಉಳ್ಳಾಲ ಕೋಟೆಪುರ ನಿವಾಸಿ, ಪ್ರಸ್ತುತ ಮುಕ್ಕಚ್ಚೇರಿಯಲ್ಲಿ ನೆಲೆಸಿರುವ ಇಬ್ರಾಹಿಂ (47) ಯಾನೆ ಕಮಾಲ್ ಮೃತಪಟ್ಟ ವ್ಯಕ್ತಿ. ಇಬ್ರಾಹಿಂ ಅವರು ಮಂಗಳೂರಿನ ಧಕ್ಕೆಯಲ್ಲಿ ಮೀನಿನ ವ್ಯವಹಾರ ನಡೆಸುತ್ತಿದ್ದರೆನ್ನಲಾಗಿದೆ. ಇಂದು ಸಂಜೆ ತನ್ನ ಕಿರಿಯ ಮಗನನ್ನ ಸ್ಕೂಟರಿನಲ್ಲಿ ಕುಳ್ಳಿರಿಸಿ ಸುಂದರಿ ಭಾಗ್ ನಿಂದ ಮುಕ್ಕಚ್ಚೇರಿಯ ಮನೆಯ ಕಡೆ ತೆರಳುತ್ತಿದ್ದ ವೇಳೆ ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಬಳಿಕ ಆವರಣಗೋಡೆಯೊಂದಕ್ಕೆ ಬಡಿದ ಪರಿಣಾಮ ಇಬ್ರಾಹಿಂ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ರಾಹಿಂ ಅವರ ಪುತ್ರನ ಕೈಗೆ ಏಟು ತಗುಲಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಅಪಘಾತಕ್ಕೀಡಾದ ಇಬ್ರಾಹಿಂ ಅವರನ್ನ ತಕ್ಷಣ ಉಳ್ಳಾಲದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ವೈದ್ಯರು ಪರಿಶೀಲಿಸಿ ಇಬ್ರಾಹಿಂ ಅವರು ಸಾವನ್ನಪ್ಪಿರೋದಾಗಿ ತಿಳಿಸಿದ್ದರು. ಜನಾನುರಾಗಿಯಾಗಿದ್ದ ಇಬ್ರಾಹಿಂ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಅವರ ಸಂಬಂಧಿಗಳು, ಹಿತೈಷಿಗಳು ಸೇರಿದಂತೆ ಭಾರೀ ಸಂಖ್ಯೆಯಲ್ಲಿ ಜನರು ಆಸ್ಪತ್ರೆಯ ಮುಂದೆ ಜಮಾಯಿಸಿದ್ದರು.
ಸ್ಥಳಕ್ಕೆ ಭೇಟಿ ಕೊಟ್ಟ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದು ಇಬ್ರಾಹಿಂ ಅವರ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಇಬ್ರಾಹಿಂ ಅವರು ಪತ್ನಿ , ಮೂವರು ಮಕ್ಕಳನ್ನ ಅಗಲಿದ್ದಾರೆ.
A tragic road accident occurred in the Sundaribagh area of Ullal on Thursday evening when a scooter lost control and rammed into a compound wall, resulting in the death of the rider on the spot. The pillion rider, his young son, survived with minor injuries
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am