ಬ್ರೇಕಿಂಗ್ ನ್ಯೂಸ್
08-08-25 01:19 pm Mangalore Correspondent ಕರಾವಳಿ
ಮಂಗಳೂರು, ಆ.8 : ಧರ್ಮಸ್ಥಳ ಹೆಣ ಹೂತ ಆರೋಪದ ಕುರಿತಾಗಿ ತನಿಖೆಗೆ ನೇಮಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ ರಾಜ್ಯ ಸರಕಾರ ಫುಲ್ ಪವರ್ ನೀಡಿದೆ. ಎಫ್ಐಆರ್ ದಾಖಲಿಸಿಕೊಳ್ಳುವುದು ಮತ್ತು ಪ್ರಕರಣ ಸಂಬಂಧಿಸಿ ಬಂಧನ, ವಶಕ್ಕೆ ಪಡೆಯುವುದು, ಕೋರ್ಟಿಗೆ ಪ್ರಥಮ ವರ್ತಮಾನ ವರದಿಗಳನ್ನು ಸಲ್ಲಿಸುವುದು, ಚಾರ್ಜ್ ಶೀಟ್ ಸಲ್ಲಿಸುವುದು ಇತ್ಯಾದಿ ಅಧಿಕಾರಗಳನ್ನು ನೀಡುವುದಕ್ಕಾಗಿ ವಿಶೇಷ ತನಿಖಾ ತಂಡಕ್ಕೆ ಪೊಲೀಸ್ ಠಾಣೆಗಿರುವ ಎಲ್ಲ ಅಧಿಕಾರವನ್ನು ನೀಡಲಾಗಿದೆ.
ಈ ಬಗ್ಗೆ ಜುಲೈ 17ರಂದು ರಾಜ್ಯ ಸರಕಾರ ನೇಮಿಸಿರುವ ವಿಶೇಷ ತನಿಖಾ ತಂಡಕ್ಕೆ ಪೊಲೀಸ್ ಠಾಣೆಗಿರುವ ಹೆಚ್ಚುವರಿ ಅಧಿಕಾರ ನೀಡಿ ಆದೇಶ ಮಾಡಲಾಗಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ವಿಶೇಷ ತನಿಖಾ ತಂಡವನ್ನು ಪೊಲೀಸ್ ಠಾಣೆ ಎಂದೂ, ಈ ವಿಶೇಷ ತಂಡಕ್ಕೆ ನೇಮಿಸಲಾದ ಪೊಲೀಸ್ ನಿರೀಕ್ಷಕರ ದರ್ಜೆಯ/ ಮೇಲ್ಪಟ್ಟ ದರ್ಜೆಯ ಅಧಿಕಾರಿಯನ್ನು ಬಿಎನ್ಎಸ್ 2023ರ ಕಲಂ 2(1)ರಡಿ ಪ್ರದತ್ತ ಅಧಿಕಾರದನ್ವಯ ಠಾಣಾಧಿಕಾರಿಯೆಂದು ಘೋಷಿಸಲಾಗಿದೆ. ವಿಶೇಷ ತನಿಖಾ ತಂಡವು ಪೊಲೀಸ್ ಠಾಣೆಗೆ ಪ್ರದತ್ತ ತನಿಖಾ ಕ್ರಮಗಳನ್ನು ಅನುಸರಿಸಿ ಸಂಬಂಧಪಟ್ಟ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸುವ ಅಧಿಕಾರವನ್ನು ಪ್ರತ್ಯಾಯೋಜಿಸಿ ಅಧಿಸೂಚಿಸಿದೆ.
ಇದರಂತೆ, ವಿಶೇಷ ತನಿಖಾ ತಂಡಕ್ಕೆ ಬರುವ ದೂರು ಅರ್ಜಿಗಳ ಬಗ್ಗೆ ಸ್ವತಃ ಎಫ್ಐಆರ್ ದಾಖಲಿಸಿಕೊಳ್ಳುವ ಅಧಿಕಾರ ಇರುತ್ತದೆ. ಈವರೆಗೆ ಧರ್ಮಸ್ಥಳ ಪ್ರಕರಣದಲ್ಲಿ ಅಸ್ಥಿಪಂಜರ ಪತ್ತೆಯಾದ ವಿಚಾರದಲ್ಲಿ ಧರ್ಮಸ್ಥಳ ಅಥವಾ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಬೇಕಿತ್ತು. ಈ ಕುರಿತಾಗಿ ಸಾರ್ವಜನಿಕರು ದೂರು ನೀಡಿದರೂ, ಅಧಿಕಾರ ವ್ಯಾಪ್ತಿಯಿಲ್ಲದೆ ಎಫ್ಐಆರ್ ದಾಖಲಿಸುವಂತೆ ಇರಲಿಲ್ಲ. ಇತ್ತೀಚೆಗೆ ಜಯನ್ ಎಂಬವರು ಪ್ರಕರಣ ಒಂದಕ್ಕೆ ಸಂಬಂಧಿಸಿ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈಗಾಗಲೇ ಸಾರ್ವಜನಿಕರಿಗೆ ಸಹಾಯವಾಣಿ ನಂಬರ್ ನೀಡಲಾಗಿದ್ದು, ಮಂಗಳೂರಿನ ಮಲ್ಲಿಕಟ್ಟೆಯ ಐಬಿಯಲ್ಲಿ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯ ಪಕ್ಕದಲ್ಲಿ ಎಸ್ಐಟಿ ತಂಡಕ್ಕೆ ಪ್ರತ್ಯೇಕ ಕಚೇರಿ ಆರಂಭಿಸಲಾಗಿದೆ.
ಧರ್ಮಸ್ಥಳ ವಿಚಾರಕ್ಕೆ ಸಂಬಂಧಿಸಿ ಸಾರ್ವಜನಿಕರು ದೂರು ನೀಡಿದಲ್ಲಿ ಅವುಗಳನ್ನು ಪರಿಗಣಿಸಿ ತನಿಖಾ ತಂಡವು ಎಫ್ಐಆರ್ ದಾಖಲಿಸಿಕೊಳ್ಳಲು ಮತ್ತು ಆ ಕುರಿತಾಗಿ ತನಿಖೆ ಕೈಗೊಳ್ಳುವುದಕ್ಕೆ ಅವಕಾಶ ಇದೆ. ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕಾದ ಪ್ರಮೇಯ ಬರುವುದಿಲ್ಲ. ಅಥವಾ ದೂರು ನೀಡಲು ಬಂದವರನ್ನು ಸ್ಥಳೀಯ ಠಾಣೆಗೆ ಕಳಿಸಿಕೊಡಬೇಕಾದ ಅಗತ್ಯವೂ ಇರುವುದಿಲ್ಲ. ಯಾವುದೇ ವ್ಯಕ್ತಿಯನ್ನು ಅಧಿಕಾರ ಚಲಾಯಿಸಿ ವಶಕ್ಕೆ ಪಡೆಯುವುದು, ಬಂಧಿಸಿ ಕೋರ್ಟಿಗೆ ಹಾಜರುಪಡಿಸುವುದಕ್ಕೂ ತನಿಖಾ ತಂಡಕ್ಕೆ ಅಧಿಕಾರ ಸಿಕ್ಕಂತಾಗಿದೆ. ಈ ಹಿಂದೆ ಎಸ್ಐಟಿ ತಂಡವನ್ನು ರಚಿಸಿ ನೀಡಿದ ಆದೇಶದಲ್ಲಿ ತನಿಖಾ ಪ್ರಗತಿ ಬಗ್ಗೆ ಡಿಜಿ ಅಥವಾ ಐಜಿಪಿಗೆ ನೀಡಬೇಕು ಮತ್ತು ಅಂತಿಮ ವರದಿಯನ್ನು ಸರಕಾರಕ್ಕೆ ಸಲ್ಲಿಸುವುದೆಂದು ಇತ್ತು. ಮುಂದೆ ಪ್ರಕರಣದ ಬಗ್ಗೆ ನೇರವಾಗಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಬಹುದು. ಇನ್ಸ್ ಪೆಕ್ಟರ್ ದರ್ಜೆಗಿಂತ ಮೇಲಿನವರನ್ನು ಠಾಣಾಧಿಕಾರಿ ಎಂದು ಘೋಷಿಸಿದ್ದು, ಅಧಿಕಾರ ಚಲಾಯಿಸುವ ಪವರ್ ನೀಡಲಾಗಿದೆ.
The Karnataka government has vested the Special Investigation Team (SIT) probing the alleged human remains burial case in Dharmasthala with full powers equivalent to those of a police station.
01-09-25 10:53 pm
Bangalore Correspondent
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
01-09-25 10:01 pm
Mangalore Correspondent
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
01-09-25 09:21 pm
Udupi Correspondent
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm