ಬ್ರೇಕಿಂಗ್ ನ್ಯೂಸ್
10-08-25 12:37 pm Mangalore Correspondent ಕರಾವಳಿ
ಮಂಗಳೂರು, ಆ 10 : ಅನಾಮಿಕ ವ್ಯಕ್ತಿಯೊಬ್ಬ ಧರ್ಮಸ್ಥಳದಲ್ಲಿ ಸಾವಿರಾರು ಹೆಣ ಹೂತಿಟ್ಟಿದ್ದೇನೆ ಎಂದು ನೀಡಿರುವ ದೂರಿನ ಆಧಾರದಲ್ಲಿ ಎಸ್‌ಐಟಿ ತನಿಖೆ ಆರಂಭವಾಗಿದೆ. ಇದೊಂದು ನಕಲಿ ತಂತ್ರ, ಕ್ಷೇತ್ರದ ಪಾವಿತ್ರ್ಯವನ್ನು ನಾಶ ಮಾಡುವ ಷಡ್ಯಂತ್ರವಾಗಿದ್ದು, ಕೂಡಲೇ ಅನಾಮಿಕನನ್ನು ಕಸ್ಟಡಿಗೆ ಪಡೆದು ಮಂಪರು ಪರೀಕ್ಷೆ ಮಾಡುವ ಮೂಲಕ ತನಿಖೆಗೆ ಇತಿಶ್ರೀ ಹಾಡಬೇಕು ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಸರಕಾರವನ್ನು ಆಗ್ರಹಿಸಿದ್ದಾರೆ.
ಈಗಾಗಲೇ ಎಸ್‌ಐಟಿ ತನಿಖೆಯನ್ನು ನಾವು ಸ್ವಾಗತಿಸಿದ್ದು, ಸರಕಾರದ ನಡೆಯನ್ನು ಪ್ರಶಂಶಿಸಿದ್ದೇವೆ. ಆದರೆ ಊರಿಡೀ ಶೋಧ ನಡೆಸುವ ಸಂಚಿನ ಭಾಗವನ್ನು ಬಯಲಿಗೆಳೆಯಬೇಕಾಗಿದೆ. ಅನಾಮಿಕ ಗುಂಡಿ ತೋರಿಸುತ್ತ ಹೋಗುವುದನ್ನೇ ತನಿಖೆ ಎಂದು ವ್ಯಾಖ್ಯಾನಿಸುವುದು ಸಮರ್ಥನೀಯವಲ್ಲ. ಆದ್ದರಿಂದ ಕಾರ್ಯಾಚರಣೆ ಕೊನೆಗೊಳಿಸಿ ಅನಾಮಿಕನ ಷಡ್ಯಂತ್ರವನ್ನು ಬಯಲಿಗೆಳೆದು ಆತನ ಹಿಂದಿರುವ ಶಕ್ತಿಗಳನ್ನೂ ಮಟ್ಟ ಹಾಕಬೇಕು ಎಂದು ಆಗ್ರಹಿಸಿದ್ದಾರೆ.
ಸಂಸದ ಕಾಗೇರಿ ಆಕ್ರೋಶ ;
ಧರ್ಮಸ್ಥಳದಂತಹ ಪುಣ್ಯ ಕ್ಷೇತ್ರದ ಘನತೆಗೆ ಕುಂದುತರುವ ಪ್ರಯತ್ನ ನಡೆಯುತ್ತಿದೆ. ರಾಜ್ಯ ಸರ್ಕಾರವು ಕೂಡಲೇ ಪಾರದರ್ಶಕ ಮತ್ತು ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಕ್ರೋಶವನ್ನು ವ್ಯಕ್ತಪಡಿಸಿದರು. ದೆಹಲಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿ ಮಾತನಾಡಿದ ಅವರು, ಅನಾಮಿಕ ವ್ಯಕ್ತಿಯ ಹಿನ್ನೆಲೆ ಬಹಿರಂಗಪಡಿಸಲು ಆಗ್ರಹಿಸಿದರಲ್ಲದೇ ಮೊದಲು 13 ಸ್ಥಳಗಳ ಬಗ್ಗೆ ಹೇಳಿದ್ದ ಅನಾಮಿಕ ವ್ಯಕ್ತಿ ಈಗ 18 ಸ್ಥಳಗಳ ಬಗ್ಗೆ ಹೇಳುತ್ತಿದ್ದಾನೆ. ಯಾವುದೇ ಮಾಹಿತಿಯಿಲ್ಲದ ವ್ಯಕ್ತಿ ರಾಜ್ಯದ ಜನರಲ್ಲಿ ಗೊಂದಲ ಮೂಡಿಸುತ್ತಿರುವುದು ಸರಿಯಲ್ಲ. ಆರೋಪ ಮಾಡುತ್ತಿರುವ ಅನಾಮಿಕ ವ್ಯಕ್ತಿ ಯಾರು? ಕಳೆದ 15 ವರ್ಷಗಳಿಂದ ಆತ ಎಲ್ಲಿದ್ದ ಮತ್ತು ಏನು ಮಾಡುತ್ತಿದ್ದ? ಅವನ ಹಿಂದಿರುವವರು ಯಾರು? ಎಲ್ಲಾ ಮಾಹಿತಿಯನ್ನು ಸರ್ಕಾರ, ಎಸ್‌ಐಟಿ ಬಹಿರಂಗಪಡಿಸಲಿ ಎಂದರು.
ಎಸ್‌ಐಟಿ ತನಿಖೆ ಸ್ವಾಗತಾರ್ಹ, ಈ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ. ಕಾಂಗ್ರೆಸ್ ಸರ್ಕಾರ ತನ್ನ ಆಡಳಿತ ವೈಫಲ್ಯಗಳನ್ನು ಮುಚ್ಚಿಹಾಕಲು ಎಸ್‌ಐಟಿಯನ್ನು ಬಳಸಿಕೊಳ್ತಿದೆ. ಎಸ್‌ಐಟಿ ತನಿಖೆಯ ದಿಕ್ಕು ತಪ್ಪುತ್ತಿದೆ ಎಂಬ ಅನುಮಾನವೂ ವ್ಯಕ್ತಪಡಿಸಿದ ಕಾಗೇರಿ, ವೀರೇಂದ್ರ ಹೆಗ್ಗಡೆ ಅವರ ಜನಪರ ಕಾರ್ಯ ಎಡಪಂಥೀಯ ವಿಚಾರಧಾರೆಯವರ ನಿದ್ದೆಗೆಡಿಸಿವೆ. ಇದರಿಂದಲೇ ಅವರು ಸುಖಾಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದಾರೆ. ಹಿಂದೂಗಳಾದ ನಾವೆಲ್ಲರೂ ಒಗ್ಗಟ್ಟಾಗಿ ಈ ಷಡ್ಯಂತ್ರ ಖಂಡಿಸಬೇಕು ಎಂದು ಕಾಗೇರಿ ಕರೆ ನೀಡಿದರು.
ಧರ್ಮಸ್ಥಳ ವಿರುದ್ಧ ಷಡ್ಯಂತ್ರ:
ಧರ್ಮಸ್ಥಳ ಗ್ರಾಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಧೇಯ ವ್ಯಕ್ತಿಯ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸುತ್ತಿರುವ ಎಸ್‌ಐಟಿ, ತನಿಖೆಯನ್ನು ಸುಖಾ ಸುಮ್ಮನೆ ಎಳೆಯುತ್ತಿದೆ. ಕ್ಷೇತ್ರದ ವಿರುದ್ಧ ಷಡ್ಯಂತ್ರ ನಡೆಯುತ್ತಿದ್ದು, ಕೆಲ ಪಟ್ಟಭದ್ರ ಹಿತಾಸಕ್ತಿಗಳು ಹಾಗೂ ಕಿಡಿಗೇಡಿಗಳು ಕ್ಷೇತ್ರದ ವಿರುದ್ಧ ವ್ಯವಸ್ಥಿತವಾಗಿ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
The ongoing SIT investigation into allegations by an anonymous individual claiming to have buried thousands of bodies in Dharmasthala is nothing but a fabricated conspiracy to destroy the sanctity of the holy shrine, alleged Sri Rajashekharananda Swamiji of Gokarnanatha Vajradehi Math
10-08-25 01:57 pm
Bangalore Correspondent
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
ಬೆಂಗಳೂರಿನಲ್ಲಿ ಮತ್ತೊಂದು ಹೊಸ ಸ್ಟೇಡಿಯಂ ; 80 ಸಾವಿ...
09-08-25 08:00 pm
ಎರಡು ವಂದೇ ಭಾರತ್, ಮೆಟ್ರೋ ಯಲ್ಲೋ ಲೈನ್ ಅನಾವರಣಕ್ಕೆ...
09-08-25 07:28 pm
Siddaramaiah,Ibrahim: ಸಿದ್ದರಾಮಯ್ಯ ಎರಡು ಬಾರಿ ಮ...
09-08-25 03:32 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 02:26 pm
Mangalore Correspondent
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
Drug’s Mangalore, Police, Arrest: ಡ್ರಗ್ಸ್ ಮುಕ...
09-08-25 09:42 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm