ಬ್ರೇಕಿಂಗ್ ನ್ಯೂಸ್
11-08-25 11:49 am Mangalore Correspondent ಕರಾವಳಿ
ಮಂಗಳೂರು, ಆ.11 : ಧರ್ಮಸ್ಥಳ ಹೆಣ ಹೂತ ಪ್ರಕರಣದಲ್ಲಿ ಶವಗಳ ಶೋಧ ಕಾರ್ಯಾಚರಣೆಗೆ ಆಧುನಿಕ ತಂತ್ರಜ್ಞಾನದ ಗೌಂಡ್ ಪೆನೆಟ್ರೇಟಿಂಗ್ ರಾಡಾರ್ (ಜಿಪಿಆರ್) ಉಪಕರಣ ಬಳಸುವಂತೆ 2003ರಲ್ಲಿ ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ತಾಯಿ ಸುಜಾತ ಭಟ್ ಪರ ವಕೀಲ ಮಂಜುನಾಥ್ ಎನ್ ಆಗ್ರಹಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಮಂಜುನಾಥ್ ಎನ್, ಎಸ್ಐಟಿ ತಂಡದ ಶೋಧ ಕಾರ್ಯಾಚರಣೆಯಲ್ಲಿ ದೂರುದಾರ ಸೂಚಿಸಿದ ಸ್ಥಳಗಳಲ್ಲಿ ಉತ್ಪನನ ನಡೆಸಿದರೂ, ಸರಿಯಾದ ಸಾಕ್ಷ್ಯ ಪತ್ತೆಯಾಗಿಲ್ಲ. ಹಾಗೆಂದು ಅಗೆತ ನಡೆದಿರುವ ಸ್ಥಳದಿಂದ ಆಚೀಚೆ ಅಥವಾ ಅದಕ್ಕಿಂತ ಆಳದಲ್ಲಿ ಶವದ ಕುರುಹು ಸಿಗಲಿಕ್ಕಿಲ್ಲವೆಂದು ಖಚಿತಪಡಿಸಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ತಕ್ಷಣವೇ ಗೌಂಡ್ ಪೆನೆಟ್ರೇಟಿಂಗ್ ರಾಡಾರ್ ಉಪಕರಣದ ಬಳಸಿ, ನೆಲದಡಿಯಲ್ಲಿ ಎಲ್ಲಿ ಹೆಣ ಹೂಳಲಾಗಿದೆ ಎಂಬುದನ್ನು ಪತ್ತೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಭೀಮ ನೀಡಿರುವ ಮಾಹಿತಿಯ ವಿಶ್ವಾಸಾರ್ಹತೆಯ ಪ್ರಶ್ನೆ ಎತ್ತುವವರು, ದಿನದಿಂದ ದಿನಕ್ಕೆ SIT ತನಿಖೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ರೀತಿಯ ವರ್ತನೆ ದೂರುದಾರನ ಹೇಳಿಕೆಗಳ ಪ್ರಾಮಾಣಿಕತೆಯನ್ನು ಪ್ರಶ್ನಿಸುತ್ತದೆ ಎಂದವರು ಹೇಳಿದ್ದು ಎಸ್ಐಟಿ ಈಗಾಗಲೇ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು ಇನ್ನಷ್ಟು ನುರಿತ ತಂತ್ರಜ್ಞಾನ ಬಳಸಿ ಧರ್ಮಸ್ಥಳದಲ್ಲಿ ಹೂತು ಹಾಕಿರುವ ಶವಗಳು ಹಾಗೂ ಅವುಗಳ ಮೇಲೆ ನಡೆದಿರುವ ದೌರ್ಜನ್ಯವನ್ನು ಬಹಿರಂಗಪಡಿಸಬೇಕಾಗಿದೆ ಎಂದು ಹೇಳಿದ್ದಾರೆ.
ದೂರುದಾರ ಭೀಮನ ಹೇಳಿಕೆ ಮುಂದೆ ತೋರಿಸುವ ಎಲ್ಲ ಸ್ಥಳಗಳಲ್ಲೂ ವಿಫಲನಾಗುತ್ತಾನೆಂಬ ವಿಶ್ವಾಸವಿರುವವರು ಎಸ್ಐಟಿ ತನಿಖೆಯನ್ನು ವಿರೋಧಿಸುತ್ತಿರಲಿಲ್ಲ. ಆದರೆ, ದಿನದಿಂದ ದಿನಕ್ಕೆ ಕಾರ್ಯಾಚರಣೆಗೆ ಕೆಲವರು ವಿರೋಧಿಸುತ್ತಿರುವುದನ್ನು ನೋಡಿದಾಗ, ದೂರುದಾರ ಸತ್ಯವನ್ನೇ ಹೇಳುತ್ತಿದ್ದಾನೆಂಬ ನಂಬಿಕೆ ಗಟ್ಟಿಗೊಳ್ಳುತ್ತಿದೆ. ಇದಲ್ಲದೆ, ಧರ್ಮಸ್ಥಳದ ವಿವಿಧೆಡೆ ಶವಗಳನ್ನು ಹೂತು ಹಾಕಿರುವುದನ್ನು ಕಂಡಿದ್ದಾಗಿ ಹಲವು ಗ್ರಾಮಸ್ಥರು ಈಗಾಗಲೇ SIT ಮುಂದೆ ಬಂದಿದ್ದಾರೆ. ಅವರನ್ನು ಕೂಡ ಕಾರ್ಯಾಚರಣೆಯಲ್ಲಿ ಬಳಸಿಕೊಳ್ಳಬೇಕು ಎಂದು ವಕೀಲ ಮಂಜುನಾಥ್ ಹೇಳಿದ್ದಾರೆ.
In the ongoing Dharmasthala human remains investigation, advocate Manjunath N., representing Sujatha Bhatt — mother of medical student Ananya Bhatt who went missing in Dharmasthala in 2003 — has urged the Special Investigation Team (SIT) to use advanced Ground Penetrating Radar (GPR) technology to locate buried bodies.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am