ಬ್ರೇಕಿಂಗ್ ನ್ಯೂಸ್
11-08-25 03:33 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.11 : ಧರ್ಮಸ್ಥಳದಲ್ಲಿ ಹೆಣ ಹೂತಿದ್ದಾರೆ ಎಂಬ ಆರೋಪದ ಬಗ್ಗೆ ಎಸ್ಐಟಿ ತನಿಖೆ ನಡೆಸುತ್ತಿರುವಾಗಲೇ 38 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಕೊಲೆಯಾಗಿದೆ ಎಂದು ಹೇಳಲಾದ ಪದ್ಮಲತಾ ಎಂಬ ಪಿಯುಸಿ ವಿದ್ಯಾರ್ಥಿನಿಯ ಕುಟುಂಬಸ್ಥರು ಮುಂದೆ ಬಂದಿದ್ದು, ಎಸ್ಐಟಿ ತಂಡಕ್ಕೆ ದೂರು ನೀಡಿದ್ದಾರೆ.
ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಸ್ಥಳೀಯ ಸಿಪಿಐಎಂ ಪಕ್ಷದ ನಾಯಕರ ಜೊತೆಗೆ ಪದ್ಮಲತಾ ಅವರ ಅಕ್ಕ ಇಂದ್ರಾವತಿ ಬಂದಿದ್ದು, 38 ವರ್ಷಗಳ ಹಿಂದೆ ನಾಪತ್ತೆಯಾಗಿ ಆಬಳಿಕ ನೇತ್ರಾವತಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪದ್ಮಲತಾ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ ಇಂದ್ರಾವತಿ, ನನ್ನ ತಂಗಿ ಪದ್ಮಲತಾ ಉಜಿರೆ ಎಸ್ಡಿಎಂ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದಳು. 1986ರ ಡಿಸೆಂಬರ್ 12ರಂದು ಉಜಿರೆಯಿಂದ ಧರ್ಮಸ್ಥಳಕ್ಕೆ ಬಸ್ಸಿನಲ್ಲಿ ಬಂದಿದ್ದವಳು ಕಾಣೆಯಾಗಿದ್ದಳು. ಆನಂತರ, ಎರಡು ತಿಂಗಳ ನಂತರ 1987ರ ಫೆಬ್ರವರಿ 17ರಂದು ನೆರಿಯಾ ಹೊಳೆಯ ಬದಿಯಲ್ಲಿ ಆಕೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಶಾಲು ಮತ್ತು ಕೈಗೆ ಕಟ್ಟಿದ ವಾಚ್ ಆಧಾರದಲ್ಲಿ ಶವವನ್ನು ಗುರುತಿಸಲಾಗಿತ್ತು. ನನ್ನ ತಂದೆ ದೇವಾನಂದರು ಆಗ ಕಮ್ಯುನಿಸ್ಟ್ ಪಕ್ಷದಲ್ಲಿ ಸಕ್ರಿಯವಾಗಿದ್ದರು. ಮಗಳನ್ನು ಅತ್ಯಾಚಾರಗೈದು ಕೊಲೆ ಮಾಡಿದ್ದಾರೆಂದು ದೂರು ನೀಡಿದ್ದಲ್ಲದೆ ಅಸಹಜ ಸಾವಿಗೆ ಕಾರಣರಾದ ಆರೋಪಿಗಳ ಬಂಧನಕ್ಕಾಗಿ ಪಕ್ಷದ ಮೂಲಕ ಹೋರಾಟ ನಡೆಸಿದ್ದರು. ಬಳಿಕ ರಾಜ್ಯ ಸರಕಾರ ಸಿಐಡಿ ತಂಡದಿಂದ ತನಿಖೆ ನಡೆಸಿತ್ತು. ಆಗ ವಿಧಾನಸಭೆಯಲ್ಲೂ ಈ ಬಗ್ಗೆ ಚರ್ಚೆಯಾಗಿದ್ದಲ್ಲದೆ, ರಾಜ್ಯ ಸರಕಾರದಲ್ಲಿ ಸಚಿವರಾಗಿದ್ದ ರಾಚಯ್ಯ ಅವರು ನಮ್ಮ ಬೋಳಿಯಾರಿನಲ್ಲಿದ್ದ ಮನೆಗೆ ಬಂದು ನ್ಯಾಯ ಕೊಡಿಸುವ ಭರವಸೆ ನೀಡಿದ್ದರು. ಆದರೆ ಸಿಐಡಿ ಅಧಿಕಾರಿಗಳು ಸರಿಯಾಗಿ ತನಿಖೆ ನಡೆಸದೆ ಪತ್ತೆಯಾಗದ ಪ್ರಕರಣ ಎಂದು ಹಿಂಬರಹ ನೀಡಿದ್ದರು.
ನನ್ನ ತಂಗಿಯನ್ನು ಯೋಜಿತ ರೀತಿಯಲ್ಲಿ ಅಪಹರಿಸಿ ಅತ್ಯಾಚಾರ, ಕೊಲೆ ನಡೆಸಿದ್ದಾರೆಂಬ ಅನುಮಾನಗಳಿದ್ದ ಕಾರಣ ಮುಂದೆಯಾದರೂ ತನಿಖೆ ನಡೆಸಿ ನ್ಯಾಯ ಪಡೆಯಬೇಕೆಂದು ಆಕೆಯ ಶವವನ್ನು ಸುಡದೆ ಹೂಳಲಾಗಿತ್ತು. ಅದನ್ನು ಹೊರ ತೆಗೆದು ತನಿಖೆ ನಡೆಸಿದರೆ ಕೊಲೆಯಾದ ಬಗ್ಗೆ ಖಚಿತತೆ ಸಿಗಲಿದ್ದು, ನನಗೆ ತಿಳಿದ ಸಾಕ್ಷಿ ನುಡಿಯಲು ಸಿದ್ಧಳಿದ್ದೇನೆ. ಪ್ರಕರಣದ ಮರು ತನಿಖೆ ಮಾಡಬೇಕೆಂದು ಎಸ್ಐಟಿ ತಂಡದ ಮುಂದೆ ಕೇಳಿಕೊಂಡಿದ್ದೇನೆ ಎಂದು ಇಂದ್ರಾವತಿ ಹೇಳಿದ್ದಾರೆ.
ಸಿಪಿಐಎಂ ಮುಖಂಡ ಬಿ.ಎಂ.ಭಟ್ ಮತ್ತು ಲಕ್ಷ್ಮಣ ಗೌಡ ಪಾಂಗಾಳ ನೇತೃತ್ವದಲ್ಲಿ ಎಸ್ಐಟಿ ಕಚೇರಿಗೆ ದೂರು ನೀಡಲಾಗಿದ್ದು, ಪೊಲೀಸರು ದೂರನ್ನು ಸ್ವೀಕರಿಸಿದ್ದಾರೆ. ಪದ್ಮಲತಾ ಶವ ಪತ್ತೆ ಪ್ರಕರಣ 38 ವರ್ಷಗಳ ಹಿಂದೆ ಭಾರೀ ಸಂಚಲನ ಎಬ್ಬಿಸಿದ್ದ ಘಟನೆಯಾಗಿದ್ದು, ವಿಧಾನಸಭೆಯಲ್ಲೂ ಪ್ರತಿಧ್ವನಿಸಿತ್ತು.
Even as the Special Investigation Team (SIT) is probing allegations of human remains being buried in Dharmasthala, a new complaint has emerged in a 38-year-old case. The family of Padmalatha, a PUC student allegedly murdered in 1986, has approached the SIT seeking a fresh investigation.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm