ಬ್ರೇಕಿಂಗ್ ನ್ಯೂಸ್
12-08-25 01:09 pm Mangalore Correspondent ಕರಾವಳಿ
ಮಂಗಳೂರು, ಆ.12 : ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭಿಸಿದ್ದು ಈ ಬಾರಿ ಐದು ಲಕ್ಷ ಕಾರ್ಡ್ ನೋಂದಣಿ ಗುರಿ ಇಟ್ಟುಕೊಂಡಿದ್ದೇವೆ ಎಂದು ಮಾಹೆ ಮಂಗಳೂರು ಕ್ಯಾಂಪಸ್‌ನ ಪ್ರೊ ವೈಸ್ ಚಾನ್ಸಲರ್ ಡಾ. ದಿಲೀಪ್ ಜಿ ನ್ಯಾಕ್ ತಿಳಿಸಿದ್ದಾರೆ.
2000 ನೇ ವರ್ಷದಲ್ಲಿ ಪ್ರಾರಂಭಿಸಲಾದ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯು ಈಗ ರಜತ ಮಹೋತ್ಸವದ ಮೈಲಿಗಲ್ಲನ್ನು ತಲುಪಿದೆ. 24 ವರ್ಷಗಳಲ್ಲಿ, ಲಕ್ಷಾಂತರ ಫಲಾನುಭವಿಗಳಿಗೆ ವರದಾನವಾಗಿದೆ. ಆರಂಭದ ವರ್ಷದಲ್ಲಿ 10,500 ಸದಸ್ಯರು ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯಡಿ ನೋಂದಣಿ ಮಾಡಿದ್ದರು. ಕಳೆದ ಹಣಕಾಸು ವರ್ಷದಲ್ಲಿ 3.68 ಲಕ್ಷ ಕುಟುಂಬಗಳು ಯೋಜನೆ ಅಡಿಯಲ್ಲಿ ನೋಂದಾಯಿಸಿದ್ದಾರೆ. ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಪ್ರಯೋಜನ ನೀಡುತ್ತಿದ್ದು ಆರೋಗ್ಯ ಕಾರ್ಡ್ ಮೂಲಕ ಮಿತ ದರದಲ್ಲಿ ಅತ್ಯಾಧುನಿಕ ಸೇವೆಗಳು ಸಿಗಲಿವೆ ಎಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಮಣಿಪಾಲ್ ಹೆಲ್ತ್ ಎಂಟರ್‌ಪ್ರೈಸಸ್ ಮತ್ತು ಮಂಗಳೂರಿನ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಫೀರ್ ಸಿದ್ದಿಕಿ ಮಾತನಾಡಿ, ಈ ಯೋಜನೆಯಡಿ ಒಂದು ವರ್ಷ ಮತ್ತು ಎರಡು ವರ್ಷಗಳ ಸದಸ್ಯತ್ವ ಆಯ್ಕೆಗಳನ್ನು ನೀಡುತ್ತಿದ್ದೇವೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. "ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ' ಎಂಬುದು ಮಣಿಪಾಲ್ ಆರೋಗ್ಯ ಕಾರ್ಡ್ ನ ಧ್ಯೇಯ ವಾಕ್ಯ. ಈ ಯೋಜನೆಯು ಒಂದು ವರ್ಷ ಮತ್ತು ಎರಡು ವರ್ಷದ ಅವಧಿಯನ್ನು ಹೊಂದಿದ್ದು ಈ ಆರೋಗ್ಯ ಕಾರ್ಡ್ ಹೊಂದಿರುವವರು ಮಣಿಪಾಲ್ ಸಮೂಹ ಆಸ್ಪತ್ರೆಗಳಾದ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ, ಕೆ.ಎಂ.ಸಿ. ಆಸ್ಪತ್ರೆ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ, ದುರ್ಗಾ ಸಂಜೀವಿನಿ ಮಣಿಪಾಲ್ ಆಸ್ಪತ್ರೆ ಕಟೀಲು, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಡಾ. ಟಿಎಂಎ ಪೈ ಆಸ್ಪತ್ರೆ ಉಡುಪಿ, ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಹಾಗೂ ಮಣಿಪಾಲ್ ಆಸ್ಪತ್ರೆ ಗೋವಾಗಳಲ್ಲಿ ರಿಯಾಯಿತಿ ಸೌಲಭ್ಯಗಳನ್ನು ಪಡೆಯಬಹುದು. ಈ ಕಾರ್ಡ್ ಸೌಲಭ್ಯಗಳು ದಂತ ಚಿಕಿತ್ಸೆಗೂ ಅನ್ವಯವಾಗಲಿದ್ದು ಕಾರ್ಡುದಾರರು ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್ ಮಂಗಳೂರು ಮತ್ತು ಮಣಿಪಾಲದಲ್ಲಿ ರಿಯಾಯಿತಿ ಸೌಲಭ್ಯಗಳನ್ನು ಪಡೆಯಬಹುದು ಎಂದು ತಿಳಿಸಿದರು.
ದುರ್ಗಾ ಸಂಜೀವಿನಿ ಮಣಿಪಾಲ್ ಆಸ್ಪತ್ರೆ, ಕಟೀಲು ಇಲ್ಲಿನ ಮುಖ್ಯ ಆಡಳಿತಾಧಿಕಾರಿ ಡಾ. ಶಿವಾನಂದ ಪ್ರಭು ಕಾರ್ಡಿನ ಸದಸ್ಯತ್ವದ ಬಗ್ಗೆ ಮಾತನಾಡಿ "ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ರೂ. 350/ ಆಗಿದ್ದು ಕೌಟುಂಬಿಕ ಯೋಜನೆ ಅಂದರೆ ಕಾರ್ಡುದಾರ, ಅವರ ಸಂಗಾತಿ ಮತ್ತು 25 ವರ್ಷದ ಒಳಗಿನ ಮದುವೆಯಾಗದ ಮಕ್ಕಳಿಗೆ ರೂ. 700/- ಮತ್ತು ಕುಟುಂಬ ಪ್ಲಸ್ ಯೋಜನೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ರೂ. 900/- ಆಗಿರುತ್ತದೆ. ಎರಡು ವರ್ಷದ ಯೋಜನೆಯಲ್ಲಿ ಒಬ್ಬರಿಗೆ ರೂ. 600/-, ಕುಟುಂಬಕ್ಕೆ ರೂ. 950/- ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ರೂ. 1100/- ಆಗಿರುತ್ತದೆ. ಈ ರಚನಾತ್ಮಕ ವಿಧಾನವು ವ್ಯಕ್ತಿಗಳಿಗೆ ಮತ್ತು ಕುಟುಂಬಗಳಿಗೆ ಸಮಗ್ರ ಆರೋಗ್ಯ ಸೇವೆ ಸುಲಭವಾಗಿ ಲಭ್ಯವಾಗುವಂತೆ ಮಾಡುತ್ತದೆ ಎಂದು ವಿವರಿಸಿದರು.
ಕೆ.ಎಂ.ಸಿ. ಆಸ್ಪತ್ರೆ, ಅತ್ತಾವರದ ಉಪ ವೈದ್ಯಕೀಯ ಅಧೀಕ್ಷಕ ಡಾ.ದೀಪಕ್ ಮಡಿ, "ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಎಲ್ಲಾ ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಹೊರರೋಗಿ ಸಮಾಲೋಚನೆ ಮೇಲೆ 50% ವರೆಗೆ ರಿಯಾಯಿತಿ, ಪ್ರಯೋಗಾಲಯ ಪರೀಕ್ಷೆಗಳ ಮೇಲೆ 20% ವರೆಗೆ ರಿಯಾಯಿತಿ, ರೇಡಿಯಾಲಜಿ ಪರೀಕ್ಷೆಗಳಾದ ಸಿಟಿ, ಎಂ.ಆರ್.ಐ, ಅಲ್ಟ್ರಾ ಸೌಂಡ್, ಎಕ್ಸ್ ರೇ ಹಾಗೂ ಇನ್ನಿತರ ಪರೀಕ್ಷೆಗಳ ಮೇಲೆ 20% ದ ವರೆಗೆ ರಿಯಾಯಿತಿ, ಆಸ್ಪತ್ರೆಯ ಔಷಧಾಲಯದಿಂದ ಖರೀದಿಸಿದ ಔಷಧಿಗಳ ಮೇಲೆ 10% ವರೆಗೆ ರಿಯಾಯಿತಿ ಇರುತ್ತದೆ. ಒಳರೋಗಿಯಾಗಿ ದಾಖಲಾದಲ್ಲಿ ಬಿಲ್ಲಿನಲ್ಲಿ 25% ವರೆಗೆ ರಿಯಾಯಿತಿ ಸಿಗುತ್ತದೆ. ಈ ಯೋಜನೆಗೆ ಸೇರಲು ವಯಸ್ಸಿನ ಮಿತಿಯಿಲ್ಲದ ಕಾರಣ, ಯೋಜನೆಯು ಹಿರಿಯ ನಾಗರಿಕರಿಗೆ ವರದಾನವಾಗಲಿದ್ದು ಗುಣಮಟ್ಟದ ಆರೋಗ್ಯ ಪಡೆಯಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.
ಮಣಿಪಾಲ ಆರೋಗ್ಯ ಕಾರ್ಡಿನ ಬಗ್ಗೆ ಹಾಗೂ ಜಿಲ್ಲೆಯಾದ್ಯಂತ ಇರುವ ನಮ್ಮ ಅಧಿಕೃತ ಪ್ರತಿನಿಧಿಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ 0824-2285214, 7022078002 ಗೆ ಕರೆ ಮಾಡಬಹುದು. ನಿಮ್ಮ ಮಣಿಪಾಲ ಆರೋಗ್ಯ ಕಾರ್ಡಿನ ಬಗ್ಗೆ ತಿಳಿಯಲು ನೋಂದಾಯಿತ ಮೊಬೈಲ್ ಸಂಖ್ಯೆಯಿಂದ 88675 79797 ಗೆ ಮಿಸ್ಡ್ ಕಾಲ್ ನೀಡಬಹುದು.
The Manipal Academy of Higher Education (MAHE), Manipal, has launched the 2025 registration drive for its Manipal Health Card, setting an ambitious target of five lakh enrolments this year. The scheme, introduced in 2000, has reached its silver jubilee milestone, providing affordable, quality healthcare to millions in Karnataka and neighbouring states.
11-08-25 11:01 pm
Bangalore Correspondent
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
Forced Marriage, Chitradurga: ನನಗಿನ್ನೂ ಹದಿನಾರ...
11-08-25 11:18 am
ಮುಸ್ಲಿಂ ಯುವತಿಯರನ್ನ ಮದುವೆಯಾದ್ರೆ 5 ಲಕ್ಷ ರೂ. ಕೊಡ...
10-08-25 09:12 pm
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 01:49 pm
Mangalore Correspondent
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
Padmalatha Murder Case, Dharmasthala, SIT: 19...
11-08-25 03:33 pm
Ground Penetrating Radar, Dharmasthala: ಧರ್ಮಸ...
11-08-25 11:49 am
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm