ಬ್ರೇಕಿಂಗ್ ನ್ಯೂಸ್
12-08-25 01:49 pm Mangalore Correspondent ಕರಾವಳಿ
ಮಂಗಳೂರು, ಆ.12 : ಮಾಂಸ ಪೂರೈಕೆಯ ಟೆಂಡರ್ ಸಿಗದ ಕಾರಣಕ್ಕೆ ಹಿಂದಿನ ಗುತ್ತಿಗೆದಾರರು ಪಿಲಿಕುಳ ಜೈವಿಕ ಉದ್ಯಾನವನದ ಪ್ರಾಣಿಗಳನ್ನು ಕೊಲ್ಲಲು ವಿಷಪೂರಿತ ಮಾಂಸವನ್ನು ಬೆರೆಸಲು ಹುನ್ನಾರ ನಡೆಸಿದ್ದಾರೆ ಎಂದು ಪಿಲಿಕುಳ ಜೈವಿಕ ಉದ್ಯಾನದ ನಿರ್ದೇಶಕ ಡಾ| ಪ್ರಶಾಂತ್ ಪೈ ಅವರು ಕಾವೂರು ಠಾಣೆಗೆ ದೂರು ನೀಡಿದ್ದಾರೆ.
ಉದ್ಯಾನವನದ ಪ್ರಾಣಿಗಳಿಗೆ ಮಾಂಸ ನೀಡಲು ಹೊಸ ಗುತ್ತಿಗೆದಾರರು ಗುತ್ತಿಗೆ ಪಡೆದಿದ್ದಾರೆ. ಸದ್ರಿ ಮಾಂಸವನ್ನು ತಿರಸ್ಕರಿಸುವ ನಿಟ್ಟಿನಲ್ಲಿ ಹಿಂದಿನ ಟೆಂಡರುದಾರರ ನೌಕರನೊಬ್ಬ ಆಗಸ್ಟ್ 7ರಂದು ಉದ್ಯಾನವನದ ಸಿಬಂದಿಗೆ ಕರೆ ಮಾಡಿ, ಮಾಂಸದಲ್ಲಿ ವಿಷ ಬೆರೆಸುವಂತೆ ತಿಳಿಸಿದ್ದಾನೆ. ಆ ಮೂಲಕ ವಿಷಾಹಾರ ನೀಡಿ ಪ್ರಾಣಿಗಳನ್ನು ಕೊಲ್ಲಲು ಹುನ್ನಾರ ನಡೆಸಿರುವುದು ಗೊತ್ತಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ, ಇದರ ಹಿಂದೆ ಯಾರಿದ್ದಾರೆ ಎಂದು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಅರಣ್ಯಾಧಿಕಾರಿಯೂ ಆಗಿರುವ ಪ್ರಶಾಂತ ಪೈ ಆಗ್ರಹಿದ್ದಾರೆ.
ಘಟನೆ ಬಗ್ಗೆ ಇದೇ ಆ.8ರಂದು ಪಿಲಿಕುಳ ಜೈವಿಕ ಉದ್ಯಾನವನದ ವೈಧ್ಯಾಧಿಕಾರಿ ಡಾ.ದಿವ್ಯಾ ಗಣೇಶ್ ಅವರು ಪ್ರಾಧಿಕಾರದ ನಿರ್ದೇಶಕರಿಗೆ ಈ ಕುರಿತಾಗಿ ದೂರು ನೀಡಿದ್ದರು. ಇದರಂತೆ, ಪಿಲಿಕುಳ ಜೈವಿಕ ಉದ್ಯಾನವನದ ನೌಕರ ಹರೀಶ್ ಅವರನ್ನು ವಿಚಾರಿಸಿದಾಗ, ಈ ಹಿಂದೆ ಮಾಂಸ ಪೂರೈಕೆಗೆ ಟೆಂಡರ್ ಪಡೆದಿದ್ದ ಖಾದರ್ (ಅವರು ಟೆಂಡರುದಾರರೂ ಸಹ ಆಗಿರುತ್ತಾರೆ) ನಿರ್ದೇಶನದ ಮೇರೆಗೆ ಅಬ್ಬಾಸ್ ಹಾಗೂ ಹನೀಫ್ ಎಂಬವರು ಪಿಲಿಕುಳ ಜೈವಿಕ ಉದ್ಯಾನವನದ ವನ್ಯಮೃಗಗಳಿಗೆ ಮಾಂಸವನ್ನು ವಿತರಿಸುತ್ತಿದ್ದರು. ಈ ಬಾರಿ ಬೇರೆಯವರು ಬಿಡ್ ಹಾಕಿದ್ದರಿಂದ ಟೆಂಡರ್ ಬೇರೆಯವರಿಗೆ ಹೋಗಿತ್ತು. ಆ.7ರಂದು ಅಬ್ಬಾಸ್ ಅವರ ನೌಕರ ಹನೀಫ್ ಎಂಬವರು ಪಿಲಿಕುಳದ ನೌಕರ ಹರೀಶ್ ಅವರಿಗೆ ಕರೆ ಮಾಡಿ, ಈಗಿನ ಟೆಂಡರುದಾರರು ಪೂರೈಸುತ್ತಿರುವ ಮಾಂಸಕ್ಕೆ ಕೊಳೆತ ಮಾಂಸ ಅಥವಾ ವಿಷ ಮಾಂಸವನ್ನು ಬೆರೆಸಿ, ಸದ್ರಿ ಟೆಂಡರನ್ನು ತಿರಸ್ಕರಿಸುವಂತೆ ಮಾಡಲು ಹುನ್ನಾರ ಮಾಡಿರುವುದಾಗಿ ಹೇಳಿದ್ದಾರೆ. ಅಲ್ಲದೆ ಈಗಿರುವ ಟೆಂಡರುದಾರರನ್ನು ತಿರಸ್ಕೃತಗೊಳಿಸಲು ಪಿಲಿಕುಳ ಜೈವಿಕ ಉದ್ಯಾನವನದ ವನ್ಯಮೃಗಗಳನ್ನು ಕೊಲ್ಲಲು ಹುನ್ನಾರ ಮಾಡಿರುವುದು ತಿಳಿದುಬಂದಿತ್ತು.
ಈ ವಿಷಯದ ಬಗ್ಗೆ, ಹರೀಶ್ ಮತ್ತು ಹನೀಫ್ ಅವರು ಮಾತನಾಡಿರುವ ಆಡಿಯೋ ರೆಕಾರ್ಡ್ ತುಣುಕನ್ನು ಪೊಲೀಸರಿಗೆ ನೀಡಿದ್ದಾರೆ. ಆದ್ದರಿಂದ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕೋರುತ್ತೇನೆ ಹಾಗೂ ಅಬ್ಬಾಸ್ ಹಾಗೂ ಹನೀಫ್ ಎಂಬವರ ಮೊಬೈಲ್ ಪೋನ್ಗಳನ್ನು ಪರೀಲಿಸಿದರೆ, ಇದರ ಹಿಂದೆ ಯಾರೆಲ್ಲ ಇದ್ದಾರೆ? ಯಾರ ಕೈವಾಡ ಇರುಬಹುದು? ಎಂಬ ಬಗ್ಗೆ, ಕೂಲಂಕುಷವಾಗಿ ತನಿಖೆ ನಡೆಸಬೇಕೆಂದು ದೂರು ಸಲ್ಲಿಸಿದ್ದಾರೆ.
A shocking allegation has surfaced from the Pilikula Biological Park, where the zoo’s director, Dr. Prashanth Pai, has lodged a complaint with Kavoor Police claiming that a former meat supply contractor conspired to poison the park’s animals after losing the latest supply tender.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
02-11-25 05:13 pm
HK News Desk
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
02-11-25 06:57 pm
Mangalore Correspondent
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm