ಬ್ರೇಕಿಂಗ್ ನ್ಯೂಸ್
12-08-25 08:34 pm Mangalore Correspondent ಕರಾವಳಿ
ಮಂಗಳೂರು, ಆ.12 : ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪು ಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ಕುರಿತಂತೆ ಬೆಂಗಳೂರಿನ ವಿಧಾನ ಸೌಧದಲ್ಲಿ ಇಂದು ಸ್ಪೀಕರ್ ಯುಟಿ ಖಾದರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ಗಣಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಸೇರಿದಂತೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಕರಾವಳಿ ಜಿಲ್ಲೆಗಳ ವಿವಿಧ ಕ್ಷೇತ್ರಗಳ ಎಲ್ಲ ಪಕ್ಷಗಳ ಶಾಸಕರು, ಉನ್ನತ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ, ಕರಾವಳಿ ಭಾಗದಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಇರುವ ಅಡೆ ತಡೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆಗಳಲ್ಲಿ ನಡೆದ ಚರ್ಚೆಗಳು ಹಾಗೂ ಪರಿಷ್ಕೃತ ನಿಯಮ ಜಾರಿಗೆ ತರುವ ನಿಟ್ಟಿನಲ್ಲಿ ಕೈಗೊಳ್ಳುತ್ತಿರುವ ಕ್ರಮಗಳ ಕುರಿತಂತೆ ಸಭೆಯಲ್ಲಿ ಗಣಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ಒದಗಿಸಿದರು. ವಾಣಿಜ್ಯ ಉದ್ದೇಶವಲ್ಲದ ಕೆಂಪುಕಲ್ಲು ಕ್ವಾರಿಗಳಿಗೆ ಅಧಿಕೃತವಾಗಿ ಪರವಾನಿಗೆ ಕೊಡುವ ವ್ಯವಸ್ಥೆಯನ್ನು ಸರಳೀಕರಣ ಮಾಡಲಾಗುವುದು. ಈ ನಿಟ್ಟಿನಲ್ಲಿ SOP ಡ್ರಾಫ್ಟ್ ಅನ್ನ ಸಿದ್ಧಪಡಿಸುತ್ತಿರುವ ಬಗ್ಗೆ ಗಣಿ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.


ಸಭೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸಮಯ ಮಿತಿಯೊಳಗೆ ಸುಲಭ ರೀತಿಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಪರವಾನಿಗೆಗಳನ್ನು ನೀಡುವ ವ್ಯವಸ್ಥೆ ಕಲ್ಪಿಸಿ ಎಂದು ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯ ಕಟ್ಟಡ ಕಾಮಗಾರಿಗಳಿಗೆ, ಗೃಹ ನಿರ್ಮಾಣಕ್ಕೆ ಕೆಂಪುಕಲ್ಲು ಅಗತ್ಯವಾಗಿ ಬೇಕಾಗಿದೆ. ಕೆಂಪುಕಲ್ಲು ಗಣಿಗಾರಿಕೆ ಮಾಡುವವರು ಅರ್ಜಿ ಸಲ್ಲಿಸುವವರಿಗೆ ಶೀಘ್ರದಲ್ಲಿ ಅವಕಾಶ ಕಲ್ಪಿಸಿ, ತಿಂಗಳೊಳಗೆ ಪರವಾನಿಗೆ ದೊರಕಿಸಿಕೊಡುವತ್ತ ಹೆಚ್ಚಿನ ಗಮನ ಹರಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ವಿಧಾನ ಸಭಾಧ್ಯಕ್ಷರಾದ ಯು.ಟಿ ಖಾದರ್, ಮಣ್ಣು ಸಮತಟ್ಟು ಸೇರಿದಂತೆ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಡ್ರಿಲ್ ಮಾಡುವ ಕುರಿತಂತೆ ಇರುವ ಸಮಸ್ಯೆಯನ್ನು ಸರಿಪಡಿಸುವತ್ತ ಗಣಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ರಾಯಲ್ಟಿಯನ್ನ ಕಡಿಮೆಗೊಳಿಸಿ ನಿಯಮ ಬದ್ಧವಾಗಿ ಕೆಂಪುಕಲ್ಲು ಗಣಿಗಾರಿಕೆಗೆ ಅವಕಾಶ ಕಲ್ಪಿಸುವಂತೆ ಗಣಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
A high-level meeting was held today at Vidhana Soudha, Bengaluru, under the leadership of Legislative Assembly Speaker U.T. Khader and Dakshina Kannada District In-Charge Minister, to discuss legal provisions for allowing red stone mining in coastal Karnataka, including Dakshina Kannada district.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am