ಬ್ರೇಕಿಂಗ್ ನ್ಯೂಸ್
13-08-25 10:22 pm Mangalore Correspondent ಕರಾವಳಿ
ಬಂಟ್ವಾಳ, ಆ.13 : ಲಂಚದ ಹಣಕ್ಕೆ ಕೈಯೊಡ್ಡಿದ ಬಂಟ್ವಾಳ ಉಪ ತಹಶೀಲ್ದಾರ್ ಹಾಗೂ ಇತರ ಇಬ್ಬರು ಸಿಬಂದಿಯನ್ನು ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ವಶಕ್ಕೆ ಪಡೆದಿದ್ದು ಪ್ರಕರಣ ದಾಖಲಿಸಿದೆ.
ಸಜಿಪ ಮುನ್ನೂರು ಗ್ರಾಮದ ಸರ್ವೇ ನಂಬರ್ 102/1ರಲ್ಲಿ ವ್ಯಕ್ತಿಯೊಬ್ಬರು ತನ್ನ ತಾಯಿ ಹೆಸರಲ್ಲಿ ಪೌತಿ ಖಾತೆ ಮಾಡಿಕೊಡಲು
ಬಂಟ್ವಾಳ ತಾಲೂಕು ಕಚೇರಿಗೆ ಮನವಿ ಸಲ್ಲಿಸಿದ್ದು ಸಹಾಯಕ ಆಯುಕ್ತರ ನ್ಯಾಯಾಲಯ ಆದೇಶ ನೀಡಿತ್ತು. ಆದರೆ ಇದರ ದಾಖಲಾತಿ ಫೈಲನ್ನು ಕಳೆದ ಏಪ್ರಿಲ್ ತಿಂಗಳಿನಿಂದ ಬಂಟ್ವಾಳ ತಹಶೀಲ್ದಾರ್ ಕಚೇರಿಯಲ್ಲೇ ಬಾಕಿ ಇಟ್ಟುಕೊಂಡಿದ್ದು ಈ ಬಗ್ಗೆ ದೂರುದಾರರು ಬಂಟ್ವಾಳ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್ ಮತ್ತು ಕೇಸ್ ವರ್ಕರ್ ಸಂತೋಷ್ ಎಂಬವರಲ್ಲಿ ವಿಚಾರಿಸಿದ್ದರು. ಪೌತಿ ಖಾತೆ ಮಾಡಿಕೊಡಲು 1,500 ರೂ. ನೀಡುವಂತೆ ಕೇಸ್ ವರ್ಕರ್ ಸಂತೋಷ್ ಹಾಗೂ ಪೌತಿ ಖಾತೆ ಮಾಡಿಕೊಡಲು ತಹಶೀಲ್ದಾರ್ ಅವರಿಗೆ 20,000 ರೂ. ನೀಡಬೇಕು ಎಂದು ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್ ಕೇಳಿದ್ದರು ಎಂದು ದೂರುದಾರರು ಸಾಕ್ಷಿಗಳೊಂದಿಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬುಧವಾರ ಮಧ್ಯಾಹ್ನ ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಬ್ರೋಕರ್ ಗಣೇಶ್ ವಾಮದಪದವು ಅವರ ಮೂಲಕ 20,000 ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ, ಉಪ ತಹಶೀಲ್ದಾರ್ ರಾಜೇಶ್ ನಾಯ್ಕ್, ಕೇಸ್ ವರ್ಕರ್ ಸಂತೋಷ್, ಬ್ರೋಕರ್ ಗಣೇಶ್ ವಾಮದಪದವು ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣದಲ್ಲಿ ಬಂಟ್ವಾಳ ತಾಲೂಕು ತಹಶೀಲ್ದಾರ್ ಪಾತ್ರದ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಮಂಗಳೂರು ವಿಭಾಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕ (ಪ್ರಭಾರ) ಕುಮಾರಚಂದ್ರ ಅವರ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕರಾದ ಡಾ.ಗಾನಾ ಪಿ.ಕುಮಾರ್, ಸುರೇಶ್ ಕುಮಾರ್ ಪಿ, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್ ಕೆ.ಎನ್, ಮಂಗಳೂರು ಲೋಕಾಯುಕ್ತ ಸಿಬ್ಬಂದಿಗಳು ಭಾಗವಹಿಸಿದ್ದರು.
In a major anti-corruption operation, Lokayukta officials caught Bantwal Deputy Tahsildar Rajesh Naik red-handed while allegedly accepting a bribe of ₹20,000. Along with him, a case worker and a broker have also been arrested.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm