Mangalore, Thokottu, Police: ತೊಕ್ಕೊಟ್ಟು ಮೊಸರುಕುಡಿಕೆ ಮೆರವಣಿಗೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಮಹಿಳಾ ಪೇದೆಗೆ ಅಶ್ಲೀಲ ಕೈ ಸನ್ನೆ, ಸೊಂಟ ಮುಟ್ಟಿದ ಆರೋಪ, ಇಬ್ಬರು ಯುವಕರ ಬಂಧನ 

17-08-25 05:26 pm       Mangalore Correspondent   ಕರಾವಳಿ

ತೊಕ್ಕೊಟ್ಟಿನಲ್ಲಿ ನಿನ್ನೆ ನಡೆದಿದ್ದ ಮೊಸರುಕುಡಿಕೆ ಉತ್ಸವದ ಶೋಭಾಯಾತ್ರೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಮಹಿಳಾ ಪೊಲೀಸ್ ಪೇದೆಗೆ ಅಶ್ಲೀಲ ಕೈ ಸನ್ನೆ ಮಾಡಿ ಸೊಂಟಕ್ಕೆ ಕೈ ಹಾಕಿ ಮಾನಭಂಗ ಮಾಡಿದ ಆರೋಪದಲ್ಲಿ ಇಬ್ಬರು ಅರೋಪಿಗಳನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಉಳ್ಳಾಲ, ಆ‌.17 : ತೊಕ್ಕೊಟ್ಟಿನಲ್ಲಿ ನಿನ್ನೆ ನಡೆದಿದ್ದ ಮೊಸರುಕುಡಿಕೆ ಉತ್ಸವದ ಶೋಭಾಯಾತ್ರೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಮಹಿಳಾ ಪೊಲೀಸ್ ಪೇದೆಗೆ ಅಶ್ಲೀಲ ಕೈ ಸನ್ನೆ ಮಾಡಿ ಸೊಂಟಕ್ಕೆ ಕೈ ಹಾಕಿ ಮಾನಭಂಗ ಮಾಡಿದ ಆರೋಪದಲ್ಲಿ ಇಬ್ಬರು ಅರೋಪಿಗಳನ್ನ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಅಸೈಗೋಳಿ ನಿವಾಸಿ ದೀಪಕ್ ಮತ್ತು ತೊಕ್ಕೊಟ್ಟು ನಿವಾಸಿ ಕಿರಣ್ ಬಂಧಿತ ಆರೋಪಿಗಳು. ತೊಕ್ಕೊಟ್ಟಿನ ಜೈ ವೀರಮಾರುತಿ ವ್ಯಾಯಾಮ ಶಾಲೆಯ ವತಿಯಿಂದ ನಡೆದ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯ ಸಂದರ್ಭದಲ್ಲಿ ಘಟನೆ ನಡೆದಿದೆ. 

ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದ ನಾಸಿಕ್ ಬ್ಯಾಂಡ್ ನ ಯುವಕರ ತಂಡವೊಂದು ರಾತ್ರಿ 11.50 ರ ವೇಳೆಗೆ ತೊಕ್ಕೊಟ್ಟು ಒಳಪೇಟೆಯ ತಾಜ್ ಸೈಕಲ್ ಶಾಪ್ ಬಳಿ ತಲುಪಿದಾಗ ಮೆರವಣಿಗೆ ಮುಂದೆ ಹೋಗಲು ಅವಕಾಶ ನೀಡದೆ ಕಾಲಹರಣ ಮಾಡಿಕೊಂಡು ಜೋರಾಗಿ ಬ್ಯಾಂಡ್ ಬಾರಿಸುತ್ತಾ ಸಾರ್ವಜನಿಕರಿಗೆ ನಡೆದಾಡಲು ಅವಾಕಶ ನೀಡದೆ ತೊಂದರೆ ನೀಡುತ್ತಿದ್ದರೆನ್ನಲಾಗಿದೆ. ಈ ವೇಳೆ ಉಳ್ಳಾಲ ಠಾಣೆಯ ಮಹಿಳಾ ಪೇದೆ ಪೂರ್ಣಿಮಾ ಮತ್ತು ಲಕ್ಷ್ಮೀ ಎಂಬವರು ಯುವಕರಲ್ಲಿ ಮುಂದಕ್ಕೆ‌ ಹೋಗುವಂತೆ ಹೇಳಿದಾಗ ಆರೋಪಿ ದೀಪಕ್ ಎಂಬಾತ ಮುಂದಕ್ಕೆ ಹೋಗದೆ ಮೆರವಣಿಗೆಯನ್ನ ತಡೆದು ನಿಲ್ಲಿಸಿ ಪೂರ್ಣಿಮ ಅವರಿಗೆ ತನ್ನ ಕೈಬೆರಳುಗಳಲ್ಲಿ ಅಶ್ಲೀಲ ಸನ್ನೆ ಮಾಡಿ, ನೀವು ಯಾರು ಮುಂದಕ್ಕೆ ಹೋಗಿ ಅಂತ ಹೇಳಲು. ಪೊಲೀಸರು ಚಪ್ರಿಗಳು ಅಂತ ಹೇಳಿ ನಿಂದಿಸಿದ್ದಾನೆಂದು ಆರೋಪಿಸಲಾಗಿದೆ. 

ಮತ್ತೋರ್ವ ಆರೋಪಿ ಕಿರಣ್ ಎಂಬಾತ ಪೂರ್ಣಿಮಾ ಅವರ ಸೊಂಟಕ್ಕೆ ಕೈ ಹಾಕಿ ತಳ್ಳಿದ್ದು, ಮೈಗೆ ಕೈ ಹಾಕಿ ಮಾನಭಂಗ ಮಾಡಿರೋದಾಗಿ ಪೂರ್ಣಿಮಾ ಅವರು ಉಳ್ಳಾಲ ಠಾಣೆಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಘಟನೆ ವೇಳೆ ಪೊಲೀಸರು ಮತ್ತು ಶೋಭಾಯಾತ್ರೆ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಯುವಕರ ನಡುವೆ  ತಳ್ಳಾಟ ನಡೆದಿದೆ. ಘಟನೆ ಸಂಬಂಧಿಸಿ ಉಳ್ಳಾಲ ಪೊಲೀಸರು ಆರೋಪಿಗಳಾದ ದೀಪಕ್ ಮತ್ತು ಕಿರಣ್ ಅವರನ್ನ ಬಂಧಿಸಿದ್ದು ಅವರ ವಿರುದ್ಧ ಬಿಎನ್ ಎಸ್ 2023(U/s-126(2), 132, 74, 3(5) ಕಲಂ ಅಡಿ ಪ್ರಕರಣ ದಾಖಲಿಸಿದ್ದಾರೆ.

Tension broke out during the Mosaru Kudike festival procession at Tokkottu last night after two youths allegedly obstructed police duty and misbehaved with a woman constable. The Ullal police have arrested the accused, identified as Deepak from Asaigoli and Kiran from Thokottu