Mangalore Rain, School Holiday: ಚಂಡಮಾರುತಕ್ಕೆ ಭಾರೀ ಮಳೆ ಸಾಧ್ಯತೆ ; ಕರಾವಳಿಗೆ ಆ.18ರಂದು ರೆಡ್ ಅಲರ್ಟ್, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ 

17-08-25 10:50 pm       Mangalore Correspondent   ಕರಾವಳಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತ ಕಾಣಿಸಿಕೊಂಡಿದ್ದು ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಭಾರೀ ಮಳೆಯ ಕಾರಣಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 18ರ ಸೋಮವಾರ ರೆಡ್ ಅಲರ್ಟ್ ಸೂಚನೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. 

ಮಂಗಳೂರು, ಆ.17 : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತ ಕಾಣಿಸಿಕೊಂಡಿದ್ದು ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಭಾರೀ ಮಳೆಯ ಕಾರಣಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 18ರ ಸೋಮವಾರ ರೆಡ್ ಅಲರ್ಟ್ ಸೂಚನೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. 

ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (ಸರ್ಕಾರಿ, ಅನುದಾನಿತ, ಖಾಸಗಿ) ರಜೆ ಘೋಷಣೆ ಮಾಡಲಾಗಿದೆ. ಇದಲ್ಲದೆ, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ. ಚಂಡಮಾರುತ ಕಾರಣ ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ. 

ಕಳೆದ ಒಂದು ವಾರದಿಂದ‌ ಕರಾವಳಿಯಲ್ಲಿ ಆಗಿಂದಾಗ್ಗೆ ಮಳೆಯಾಗುತ್ತಿದ್ದು ಭಾನುವಾರ ಮೂಡುಬಿದ್ರೆ, ಬೆಳ್ತಂಗಡಿ ಭಾಗದಲ್ಲಿ ಭಾರೀ ಮಳೆಯಾಗಿತ್ತು. ಮಂಗಳೂರಿನಲ್ಲಿ ಜಿಟಿ ಜಿಟಿ ಮಳೆ ಮತ್ತು ಮೋಡ ಕವಿದ ವಾತಾವರಣ ಇತ್ತು. ಶಿರಾಡಿ, ಚಾರ್ಮಾಡಿ ಸೇರಿ ಮಲೆನಾಡು ಭಾಗದಲ್ಲಿ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಶಿರಾಡಿ ಭಾಗದಲ್ಲಿ ಮಳೆಯಿಂದಾಗಿ ಸಮಸ್ಯೆ ಆಗಿದ್ದ ರೈಲು ಹಳಿಯಲ್ಲಿ ಮತ್ತೆ ರೈಲು ಸಂಚಾರ ಪುನಾರಂಭವಾಗಿದೆ. ಹೆದ್ದಾರಿಯಲ್ಲಿ ಮಾತ್ರ ಟ್ರಾಫಿಕ್ ಜಾಮ್ ಎಂದಿನಂತೆ ಮುಂದುವರಿದಿದೆ.

A depression over the Bay of Bengal has intensified into a cyclone, prompting the Meteorological Department to issue a red alert for heavy rainfall along the Karnataka coast on August 18 (Monday).