ಬ್ರೇಕಿಂಗ್ ನ್ಯೂಸ್
19-08-25 08:28 pm Mangalore Correspondent ಕರಾವಳಿ
ಉಳ್ಳಾಲ, ಆ.19 : ಉಳ್ಳಾಲ ನಗರಸಭೆಯ ಪ್ರಭಾರ ಪೌರಾಯುಕ್ತರನ್ನಾಗಿ ಪಿಡಿಒ ದರ್ಜೆಯ ಅಧಿಕಾರಿಯೋರ್ವರನ್ನು ನೇಮಿಸಿರುವ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಜರಗದೇ ಇರುವುದು ಆಡಳಿತದಲ್ಲೇ ಲೋಪವಾಗಿರುವುದು ಕಂಡು ಬರುತ್ತದೆ. ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿ ಉಳ್ಳಾಲದಲ್ಲಿ ಪ್ರಭಾರ ಪೌರಾಯುಕ್ತರಾಗಿ ಕರ್ತವ್ಯದಲ್ಲಿ ಮುಂದುವರಿದಿರುವ ಪಿಡಿಓ ಅಧಿಕಾರಿಯನ್ನ ತಕ್ಷಣವೇ ಅವರ ಮಾತೃ ಇಲಾಖೆಗೆ ಕಳುಹಿಸಬೇಕೆಂದು ವಕೀಲರಾದ ಅಫ್ಜಲ್ ಎಂಬವರು ಕರ್ನಾಟಕ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.
ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರಿಂದ ಉಳ್ಳಾಲ ನಗರಸಭೆಯಲ್ಲಿ ಮಂಗಳವಾರ ನಡೆದ ಲೋಕಾಯುಕ್ತ ಅದಾಲತ್ತಲ್ಲಿ ಅಪ್ಝಲ್ ಅವರು ಉಳ್ಳಾಲ ನಗರಸಭೆಯ ಪ್ರಭಾರ ಪೌರಾಯುಕ್ತ ನವೀನ್ ಹೆಗ್ಡೆ ವಿರುದ್ಧ ದೂರು ಸಲ್ಲಿಸಿದ್ದಾರೆ. ಮೂಡಬಿದಿರೆ ತಾಲೂಕಿನ ಹೊಸಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪಿಡಿಒ ಆಗಿರುವ ನವೀನ್ ಹೆಗ್ಡೆ ಸರಕಾರದ ಯಾವುದೇ ಸುತ್ತೋಲೆ, ಆದೇಶ, ಟಿಪ್ಪಣಿಗಳಿಲ್ಲದೆ ಉಳ್ಳಾಲ ನಗರಸಭೆಯ ಪ್ರಭಾರ ಪೌರಾಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕುರಿತಂತೆ ಕಳೆದ ಆಗಸ್ಟ್ 5ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ದೂರು ಅರ್ಜಿಯನ್ನು ಸಲ್ಲಿಸಿದ್ದೆ. ಆದರೆ ಇದುವರೆಗೂ ಆರೋಪಿ ನವೀನ್ ಹೆಗ್ಡೆಯನ್ನ ಮಾತೃ ಇಲಾಖೆಗೆ ಕಳುಹಿಸದೆ ಉಳ್ಳಾಲ ನಗರಸಭೆ ಆಡಳಿತದಲ್ಲೇ ಪ್ರಭಾರ ಪೌರಾಯುಕ್ತರನ್ನಾಗಿಸಿ ಮುಂದುವರಿಸಿರುವುದು ಆಡಳಿತದಲ್ಲಿ ಲೋಪವಾಗಿರುವುದು ಕಂಡುಬರುತ್ತದೆ. ಆದುದರಿಂದ ನ್ಯಾಯಪ್ರತೀಕರಾದ ತಾವುಗಳು ಈ ಪ್ರಕರಣವನ್ನು ಅತೀ ಗಂಭೀರವೆಂದು ಪರಿಗಣಿಸಿ ಆರೋಪಿ ನವೀನ್ ಹೆಗ್ಡೆ ಅವರನ್ನ ತಕ್ಷಣವೇ ಮಾತೃ ಇಲಾಖೆಗೆ ಕಳುಹಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಲೋಕಾಯುಕ್ತಕ್ಕೆ ವಕೀಲರಾದ ಅಫ್ಝಲ್ ಅವರು ಲಿಖಿತ ದೂರು ಸಲ್ಲಿಸಿದ್ದಾರೆ.



ಈ ಹಿಂದೆ ಉಳ್ಳಾಲ ನಗರಸಭೆಯಲ್ಲಿ ಸೋಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಮತ್ತಡಿ ಅವರು ಪ್ರಭಾರ ಪೌರಾಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಜೂನ್ ತಿಂಗಳ ಆರಂಭದಲ್ಲಿ ಮತ್ತಡಿ ಅವರನ್ನ ಪ್ರಭಾರ ಪೌರಾಯುಕ್ತ ಸ್ಥಾನದಿಂದ ವಿಮುಕ್ತಿಗೊಳಿಸಿ ನವೀನ್ ಹೆಗ್ಡೆಯವರನ್ನ ದಿಢೀರನೆ ಪ್ರಭಾರ ಪೌರಾಯುಕ್ತ ಸ್ಥಾನದಲ್ಲಿ ಕುಳ್ಳಿರಿಸಿದ್ದು ಭಾರೀ ಟೀಕೆಗೆ ಕಾರಣವಾಗಿತ್ತು.
ಸರಕಾರದ ಪೌರಾಡಳಿತ ನಿರ್ದೇಶನಾಲಯದ ಸುತ್ತೋಲೆ ಪ್ರಕಾರ ಸ್ಥಳೀಯಾಡಳಿತದ ಪೌರಾಯುಕ್ತರು ವರ್ಗಾವಣೆ ಅಥವಾ ತರಬೇತಿಗೆ ನಿಯೋಜನೆಗೊಂಡಲ್ಲಿ ಪ್ರಭಾರ ಪೌರಾಯುಕ್ತ ಸ್ಥಾನಕ್ಕೆ ಸಹಾಯಕ ಕಾರ್ಯಪಾಲಕ ಅಭಿಯಂತರರು ಅಥವಾ ಸಹಾಯಕ ಅಭಿಯಂತರರನ್ನ ನೇಮಿಸಬೇಕೆಂಬ ಆದೇಶವಿದೆ. ಆದರೆ ಈ ಆದೇಶಗಳನ್ನ ಧಿಕ್ಕರಿಸಿ ಪಿಡಿಒ ದರ್ಜೆಯ ನವೀನ್ ಹೆಗ್ಡೆ ಅವರನ್ನ ಉಳ್ಳಾಲ ನಗರಸಭೆಯ ಪ್ರಭಾರ ಪೌರಾಯುಕ್ತ ಸ್ಥಾನದಲ್ಲಿ ಕುಳ್ಳಿರಿಸಿರೋದು ವ್ಯಾಪಕ ಟೀಕೆಗೆ ಕಾರಣವಾಗಿದೆ.
ನಗರಸಭೆಯಲ್ಲಿ ನಡೆದ ಲೋಕಾಯುಕ್ತ ಅದಾಲತ್ ಗೆ ಜನರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಹದಿನೈದರಷ್ಟು ದೂರುಗಳು ಸಲ್ಲಿಕೆಯಾಗಿವೆ. ಕರ್ನಾಟಕ ಲೋಕಾಯುಕ್ತದ ಪ್ರಭಾರ ಪೊಲೀಸ್ ಅಧೀಕ್ಷಕರಾದ ಕುಮಾರಚಂದ್ರ, ಉಳ್ಳಾಲ ತಾಲೂಕು ದಂಡಾಧಿಕಾರಿ ಪ್ರಶಾಂತ್ ಪಾಟೀಲ್, ಮಂಗಳೂರು ಲೋಕಾಯುಕ್ತ ಪೊಲೀಸ್ ಉಪ ಅಧೀಕ್ಷಕಿ ಗಾನ ಪಿ.ಕುಮಾರ್, ಇನ್ಸ್ ಪೆಕ್ಟರ್ ಭಾರತಿ, ಉಳ್ಳಾಲ ನಗರಸಭೆ ಪ್ರಭಾರ ಪೌರಾಯುಕ್ತ ನವೀನ್ ಹೆಗ್ಡೆ ಲೋಕಾಯುಕ್ತ ಅದಾಲತ್ ನಲ್ಲಿ ಉಪಸ್ಥಿತರಿದ್ದರು.
A major administrative lapse has been alleged in Ullal City Municipality after a Panchayat Development Officer (PDO)-rank official was appointed as in-charge Commissioner without any government notification or order.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm