ಬ್ರೇಕಿಂಗ್ ನ್ಯೂಸ್
20-08-25 01:36 pm Mangalore Correspondent ಕರಾವಳಿ
ಪುತ್ತೂರು, ಆ.20 : ಸುಳ್ಯ, ಕಡಬ ಹಾಗು ಬೆಳ್ತಂಗಡಿ ತಾಲೂಕುಗಳಲ್ಲಿ ಕಾಡಾನೆ ಉಪಟಪಳ ಹೆಚ್ಚುತ್ತಿದ್ದು, ಸ್ಥಳೀಯ ಕೃಷಿಕರು ಆತಂಕದ ಜೀವನ ನಡೆಸುತ್ತಿದ್ದಾರೆ. ಇದರ ಬಗ್ಗೆ ತುರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಭಾರತೀಯ ಕಿಸಾನ್ ಮಜ್ದೂರ್ ಸಂಘದ ನಿಯೋಗದೊಂದಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕರು, “ಕಾಡಾನೆ ದಾಳಿಯಿಂದ ಕೃಷಿಕರ ಬೆಳೆಗಳಿಗೆ ಭಾರೀ ಹಾನಿ ಉಂಟಾಗುತ್ತಿದ್ದು, ಹಲವು ಸಂದರ್ಭಗಳಲ್ಲಿ ಜೀವ ಹಾನಿಯೂ ಸಂಭವಿಸಿದೆ. ರೈತರು ತಮ್ಮ ತೋಟಗಳಿಗೆ ತೆರಳಲು ಸಹ ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಆನೆ ದಾಳಿಯಿಂದ ಪೀಡಿತವಾದ ಪ್ರದೇಶವನ್ನು ಕೇಂದ್ರೀಕರಿಸಿ ವಿಶೇಷ ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು ಎಂದು ಸಚಿವರಿಗೆ ಮನವಿ ಮಾಡಿದರು.
ಇತ್ತೀಚೆಗೆ ಸುಳ್ಯದ ಜಾಲ್ಸೂರಿನಲ್ಲಿ ಕೃಷಿಕರೊಬ್ಬರ ಮೇಲೆ ಕಾಡೆಮ್ಮೆ ದಾಳಿ ನಡೆಸಿದ ಘಟನೆಯನ್ನು ಉಲ್ಲೇಖಿಸಿ, ಈ ಭಾಗದಲ್ಲಿ ಜನಜೀವನ ಕಷ್ಟವಾಗಿದೆ, ಹಳ್ಳಿ ಜನರು ಭೀತಿಯಿಂದ ಕಾಲ ಕಳೆಯುತ್ತಿದ್ದಾರೆ ಎಂದು ಗಮನಕ್ಕೆ ತಂದರು. ಸಮಸ್ಯೆ ಬಗ್ಗೆ ಚರ್ಚಿಸಲು ಶಾಸಕರು, ಸ್ಥಳೀಯ ಜನಪ್ರತಿನಿಧಿಗಳು, ರೈತರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡಂತೆ ವಿಶೇಷ ಸಭೆಯನ್ನು ಆಯೋಜಿಸಿ ಪರಿಹಾರ ಕ್ರಮಕ್ಕೆ ಯೋಜನೆ ರೂಪಿಸಬೇಕು ಎಂದು ಸಚಿವರನ್ನು ವಿನಂತಿಸಿದರು.
ಇದಲ್ಲದೆ, ಕಾಡು ಪ್ರಾಣಿಗಳ ದಾಳಿಯಿಂದಾಗುವ ಮಾನವ ಜೀವಹಾನಿ ಹಾಗೂ ಬೆಳೆ ಹಾನಿಗೆ ನೀಡಲಾಗುತ್ತಿರುವ ಪರಿಹಾರದ ಮೊತ್ತವನ್ನೂ ಹೆಚ್ಚಿಸಬೇಕು ಎಂದು ಕಿಶೋರ್ ಕುಮಾರ್ ಒತ್ತಾಯಿಸಿದರು. ಇದಲ್ಲದೆ, ಕೃಷಿಕರಿಗೆ ಕೋವಿ ಪರವಾನಿಗೆ ನಿಯಮ ಸರಳೀಕೃತಗೊಳಿಸಲು ವಿನಂತಿಸಿದರು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಚಿವರು ಆದಷ್ಟು ಬೇಗ ಜಿಲ್ಲೆಗೆ ಭೇಟಿ ನೀಡುವುದಾಗಿ ಭರವಸೆಯನ್ನು ನೀಡಿದ್ದಾರೆ.
ಈ ಸಂದರ್ಭದಲ್ಲಿ ಭಾರತೀಯ ಕಿಸಾನ್ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿ ಸೋಮಶೇಖರ್, ಭಾ. ಕಿಸಾನ್ ಸಂಘದ ಪ್ರಾಂತ್ಯ ಪ್ರಮುಖ ಸುಬ್ರಾಯ, ಕಾರ್ಯದರ್ಶಿ ರಾಮಪ್ರಸಾದ್, ಪ್ರಚಾರ ಕಾರ್ಯದರ್ಶಿ ಮಹಾಬಲ ರೈ, ಸುನಿಲ್ ಬೋರ್ಕರ್, ಪುನೀತ್ ರೈ, ಚೈತನ್ಯ ದೀಕ್ಷಿತ್, ಜಯರಾಮ್ ಭಟ್ ಉಪಸ್ಥಿತರಿದ್ದರು. ಪುತ್ತೂರು ಬಿಜೆಪಿ ಪ್ರಮುಖರಾದ ಶಶಿಧರ್ ನಾಯಕ್, ನಾಗೇಂದ್ರ ಬಾಳಿಗಾ ಜೊತೆಗಿದ್ದರು.
With the increasing incidents of wild elephant intrusions in the taluks of Sullia, Kadaba, and Belthangady, local farmers are living in constant fear. Seeking urgent intervention, MLC Kishore Kumar Puttur, along with a delegation from the Bharatiya Kisan Mazdoor Sangh, met Forest Minister Eshwar Khandre in Bengaluru and submitted a memorandum.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm