ಬ್ರೇಕಿಂಗ್ ನ್ಯೂಸ್
21-08-25 03:44 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.21 : ಧರ್ಮಸ್ಥಳದಲ್ಲಿ ಸಾವಿರಕ್ಕೂ ಹೆಚ್ಚು ಮಂದಿಯನ್ನು ರೇಪ್ ಮಾಡಿ ಕೊಲೆ ಮಾಡಲಾಗಿದೆ ಎಂದು ಸುದ್ದಿ ಪ್ರಸಾರ ಮಾಡಿದ್ದ ದೂತ ಯೂಟ್ಯೂಬ್ ಚಾನೆಲಿನ ಸಮೀರ್ ಎಂ.ಡಿ. ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಆತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದತ ಬೆನ್ನಲ್ಲೇ ಸಮೀರ್ ಪರ ವಕೀಲರು ಮಂಗಳೂರಿನ ಕೋರ್ಟಿನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
ಧರ್ಮಸ್ಥಳ ಠಾಣೆ ಪಿಎಸ್ಐ ಸಮರ್ಥ್ ಗಾಣಿಗೇರ ದೂರಿನಂತೆ ಕಳೆದ ಜುಲೈ 12ರಂದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮೀರ್ ತನ್ನ ದೂತ ಯೂಟ್ಯೂಬ್ ಚಾನೆಲ್ನಲ್ಲಿ ಧರ್ಮಸ್ಥಳ ಬಗ್ಗೆ ಅವಹೇಳನಕಾರಿ ವಿಡಿಯೋ ಪ್ರಸಾರ ಮಾಡಿದ್ದ. ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣ ಸಂಬಂಧಿಸಿ ಸಾವಿರಾರು ಹೆಣಗಳನ್ನು ಹೂತಿದ್ದಾಗಿ ಅನಾಮಿಕ ವ್ಯಕ್ತಿ ದೂರು ನೀಡಿದ್ದಾನೆಂದು ತಪ್ಪಾಗಿ ಬಿಂಬಿಸಿ ವಿಡಿಯೋ ಪ್ರಸಾರ ಮಾಡಿದ್ದ.
ಎಐ ತಂತ್ರಜ್ಞಾನದಲ್ಲಿ ವಿಡಿಯೋ ಸೃಷ್ಟಿಸಿ, ಆಮೂಲಕ ಜನರ ಭಾವನೆ ಕದಡಿಸಲು ಯತ್ನಿಸಿದ್ದಾಗಿ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿದ್ದರು. ಧರ್ಮಸ್ಥಳ ಠಾಣೆಯಲ್ಲಿ ಆ ರೀತಿ ಕೇಸು ದಾಖಲಾಗಿರದಿದ್ದರೂ, ಸಾವಿರ ಜನರನ್ನು ರೇಪ್ ಮಾಡಿ ಕೊಲೆಗೈದಿದ್ದಾಗಿ ಸುದ್ದಿ ಮಾಡಿ ಜನರ ಭಾವನೆ ಕದಡುವಂತೆ ಮಾಡಿದ್ದ. ಸುಳ್ಳು ಸುದ್ದಿ ಪ್ರಸಾರ ಮಾಡಿದ ಬಗ್ಗೆ ಧರ್ಮಸ್ಥಳ ಠಾಣೆ ಪಿಎಸ್ಐ, ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು ಜುಲೈ 12 ರಂದು ಪ್ರಕರಣ ದಾಖಲಾಗಿತ್ತು. ಇದೀಗ ಹೆಣ ಹೂತ ಪ್ರಕರಣ ಉಲ್ಟಾ ಹೊಡೆಯುತ್ತಲೇ ಸಮೀರ್ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.
ಸಮೀರ್ ಬಂಧನ ಭೀತಿಯಲ್ಲಿರುವುದರಿಂದ ನಾಪತ್ತೆಯಾಗಿದ್ದು ನಿರೀಕ್ಷಣಾ ಜಾಮೀನಿಗಾಗಿ ಸಮೀರ್ ಪರ ವಕೀಲರು ಮಂಗಳೂರಿನ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.
An FIR has been filed against Sameer M.D., associated with the YouTube channel ‘Doota’, for allegedly spreading false and inflammatory news claiming that over a thousand people were raped and murdered in Dharmasthala. Belthangady police have launched a search operation to arrest the accused.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 09:58 pm
HK News Desk
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm