ಬ್ರೇಕಿಂಗ್ ನ್ಯೂಸ್
21-08-25 09:35 pm HK News Desk ಕರಾವಳಿ
ಉಡುಪಿ, ಆ.21 : ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬ್ರಹ್ಮಾವರ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಧರ್ಮಸ್ಥಳದ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರ ಬಗ್ಗೆ ವೈಯಕ್ತಿಕ ವಿಚಾರದ ಬಗ್ಗೆ ಮಹೇಶ್ ಶೆಟ್ಟಿ ತಿಮರೋಡಿ ಟೀಕಿಸಿ ಮಾತನಾಡಿದ್ದಾರೆಂದು ಬ್ರಹ್ಮಾವರ ಠಾಣೆ, ಉಳ್ಳಾಲ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ದೂರು ದಾಖಲಾಗಿತ್ತು. ಉಡುಪಿ ಜಿಲ್ಲೆಯ ಬ್ರಹ್ಮಾವರದ ಠಾಣೆಯಲ್ಲಿ 352 ಸೆಕ್ಷನ್ ಅಡಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ಎರಡು ಬಾರಿ ನೋಟಿಸ್ ಕೊಟ್ಟು ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದಕ್ಕೆ ಸರಿಯಾದ ಉತ್ತರ ನೀಡದೆ ಇರುವುದರಿಂದ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹರಿರಾಮ್ ಶಂಕರ್ ತಿಳಿಸಿದ್ದಾರೆ.

ಇದಲ್ಲದೆ, ಮಹೇಶ್ ಶೆಟ್ಟಿಯವರು ಧರ್ಮಸ್ಥಳ ವಿರುದ್ಧ ನಿರಂತರ ಹೇಳಿಕೆ ನೀಡುತ್ತ ಜನರನ್ನು ಪ್ರಚೋದಿಸಲು ಕಾರಣವಾಗಿದ್ದರು. ಇದರಿಂದಾಗಿ ಧರ್ಮಸ್ಥಳ ಪರ ಇರುವವರು ತಿಮರೋಡಿ ಬಂಧನಕ್ಕೆ ಆಗ್ರಹ ಮಾಡಿದ್ದರು. ಗೃಹ ಸಚಿವ ಪರಮೇಶ್ವರ್ ಕೂಡ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಮಾಜಿ ಸಚಿವ ಅಭಯಚಂದ್ರ ಜೈನ್ ಅವರೂ ತಿಮರೋಡಿ ಬಂಧನಕ್ಕೆ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಪೊಲೀಸರು ಕ್ರಮ ಜರುಗಿಸಿದ್ದು ಸಾರ್ವಜನಿಕ ಶಾಂತಿ ಕದಡುತ್ತಿದ್ದಾರೆಂದು ಹೇಳಿ ಜಾಮೀನು ನಿರಾಕರಿಸಿ ಜೈಲಿಗೆ ತಳ್ಳಿದ್ದಾರೆ. ಇವರ ಜಾಮೀನು ಅರ್ಜಿಯನ್ನು ಆ.23ಕ್ಕೆ ಇಡಲಾಗಿದೆ.
ಬೆಳ್ತಂಗಡಿಗೆ ಬಂದಿದ್ದ ಬ್ರಹ್ಮಾವರ ಪೊಲೀಸರು ತಿಮರೋಡಿಯ ಮನೆಯಿಂದಲೇ ಮಹೇಶ್ ಶೆಟ್ಟಿ ಅವರನ್ನು ವಶಕ್ಕೆ ಪಡೆದಿದ್ದರು. ಖಾಸಗಿ ಕಾರಿನಲ್ಲೇ ತಿಮರೋಡಿ ಅವರನ್ನು ಪೊಲೀಸರು ಹತ್ತಕ್ಕೂ ಹೆಚ್ಚು ಪೊಲೀಸ್ ವಾಹನಗಳ ಭದ್ರತೆಯಲ್ಲಿ ಉಡುಪಿಗೆ ಕರೆದೊಯ್ದಿದ್ದರು. ಠಾಣೆಯಲ್ಲೇ ಜಾಮೀನು ಸಿಗುತ್ತೆ ಎನ್ನುವ ಭರವಸೆಯಿಂದ ಮಹೇಶ್ ಶೆಟ್ಟಿ ತನ್ನ ಬೆಂಬಲಿಗರ ಜೊತೆಗೆ ಉಡುಪಿಗೆ ತೆರಳಿದ್ದರು. ಬೆಂಬಲಿಗರು ಜೈಕಾರ ಕೂಗಿದರೆ, ಮಹೇಶ್ ಶೆಟ್ಟಿ ಕಾರಿನಲ್ಲಿ ಕುಳಿತು ತನ್ನ ಜೀವಕ್ಕೇನಾದರೂ ಆದರೆ ರಾಜ್ಯ ಸರ್ಕಾರವೇ ಕಾರಣ ಎಂದು ಹೇಳಿಕೆ ನೀಡಿದ್ದರು.
Police have arrested activist Mahesh Shetty Timarodi, known for his campaigns in support of Soujanya’s case in Dharmasthala, on charges of making derogatory remarks against BJP National General Secretary (Organization) B.L. Santhosh.
19-01-26 03:33 pm
HK News Desk
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಸರ್ಕಾರ...
18-01-26 03:34 pm
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 03:38 pm
HK News Desk
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm