ಬ್ರೇಕಿಂಗ್ ನ್ಯೂಸ್
24-08-25 02:48 pm Mangalore Correspondent ಕರಾವಳಿ
ಬೆಳ್ತಂಗಡಿ, ಆ 24 : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗ್ತಿರುವ ಅಪರಾಧ ಕೃತ್ಯಗಳ ಆರೋಪ ಬಗ್ಗೆ AI ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ವಿರುದ್ಧ ಕೇಸ್ ದಾಖಲಾಗಿದೆ. ಬಂಧನ ಭೀತಿಯಲ್ಲಿದ್ದ ಯುಟ್ಯೂಬರ್ ಎಂಡಿ ಸಮೀರ್ಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಗುರುವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಜೊತೆಗೆ ಕರೆದಾಗ ವಿಚಾರಣೆಗೆ ಹಾಜರಾಗಲು ಆದೇಶ ನೀಡಿತ್ತು. ಈ ಹಿನ್ನೆಲೆ ಇಂದು ಸಮೀರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆಂದು ಆಗಮಿಸಿದ್ದಾರೆ.
ಸೌಜನ್ಯ ಕೇಸ್ ಹೋರಾಟಗಾರ ಮಹೇಶ್ ತಿಮರೋಡಿ ಅವರ ಕಾರಿನಲ್ಲಿ ನಾಲ್ವರು ವಕೀಲರ ಜೊತೆ ಯೂಟ್ಯೂಬರ್ ಸಮೀರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ನೋಟಿಸ್ ನೀಡಿದ್ದ ಹಿನ್ನೆಲೆ ಸಮೀರ್ ವಿಚಾರಣೆಗೆ ಹಾಜರಾಗಿದ್ದಾರೆ.

ನಾಲ್ವರು ವಕೀಲರ ಜೊತೆ ಬಂದ ಸಮೀರ್ :
ತಿಮರೋಡಿಯ ಕಾರಿನಲ್ಲಿ ನಾಲ್ವರು ವಕೀಲರ ಜೊತೆ ಬಂದ ಸಮೀರ್ ವಿಚಾರಣೆಗೆಂದು ಠಾಣೆ ಒಳಗೆ ಹೋಗಿದ್ದಾರೆ. ಕಳೆದೆರಡು ದಿನಗಳಿಂದ ಧರ್ಮಸ್ಥಳ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಪೊಲೀಸರು ಆತನ ಮನೆಗೆ ನೋಟಿಸ್ ಅಂಟಿಸಿ ಬಂದಿದ್ರು.
ಕ್ರೈಮ್ ನಂ 42/2025 ಕೇಸ್ ಸಂಬಂಧಿಸಿದಂತೆ ಇಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈಗಾಗಲೇ ಮೂರು ಬಾರಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ರು. ಸಮೀರ್ ಹಾಜರಾಗಿರಲಿಲ್ಲ.
ಬಂಧನ ಭೀತಿಯಲ್ಲಿದ್ದ ಸಮೀರ್ಗೆ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ವಿಚಾರಣೆಗೆ ಸಹಕರಿಸುವಂತೆ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ.
YouTuber M.D. Sameer, who had created an AI-generated video related to alleged criminal incidents in Dharmasthala, appeared for police inquiry today at the Beltangady Police Station, accompanied by four lawyers. A case had been registered against him in connection with the video, and he was recently granted anticipatory bail by the Dakshina Kannada District Sessions Court.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 11:22 am
HK News Staffer
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm