ಬ್ರೇಕಿಂಗ್ ನ್ಯೂಸ್
27-08-25 09:19 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.27 : ಧರ್ಮಸ್ಥಳ ನೂರಾರು ಹೆಣಗಳನ್ನು ಹೂತ ಪ್ರಕರಣ ದೂರುದಾರನಿಗೇ ಉಲ್ಟಾ ಹೊಡೆದಿದೆ. ಮಹತ್ವದ ಬೆಳವಣಿಗೆಯಲ್ಲಿ ಎಸ್ಐಟಿ ಅಧಿಕಾರಿಗಳು, ದೂರುದಾರ ಚಿನ್ನಯ್ಯನನ್ನು ಎ 1 ಆರೋಪಿಯನ್ನಾಗಿಸಿ ಬಿಎನ್ಎಸ್ ಹಲವು ಸೆಕ್ಷನ್ ಗಳಡಿ ಹೊಸ ಎಫ್ಐಆರ್ ದಾಖಲಿಸಿದೆ ಎಂದು ತಿಳಿದುಬಂದಿದೆ.
ನಾಲ್ಕು ದಿನಗಳ ಹಿಂದೆ ದೂರುದಾರ ವ್ಯಕ್ತಿಯನ್ನು ಬಂಧಿಸಿದ ಬಳಿಕ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ಕೋರ್ಟಿಗೆ ಹಾಜರುಪಡಿಸಿ, ಹತ್ತು ದಿನ ಕಸ್ಟಡಿಗೆ ಪಡೆದಿದ್ದರು. ಈ ವೇಳೆ, ಚಿನ್ನಯ್ಯನನ್ನೇ ಆರೋಪಿಯನ್ನಾಗಿಸಿ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸಿದ್ದು ಷಡ್ಯಂತ್ರದ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ ಎನ್ನಲಾಗುತ್ತಿದೆ. ಅಲ್ಲದೆ, ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಎಸಗುವ ಉದ್ದೇಶದಿಂದಲೇ ಇದೆಲ್ಲವನ್ನೂ ಮಾಡಿದ್ದಾಗಿ ಹೇಳಿಕೆ ನೀಡಿದ್ದಾನೆಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ಚಿನ್ನಯ್ಯನನ್ನು ಆಶ್ರಯ ನೀಡಿದ್ದಾರೆ ಎನ್ನಲಾದ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಗೆ ಕರೆತಂದು ಮಹಜರು ನಡೆಸಿದ್ದಾರೆ.

ಆದರೆ ಈ ವೇಳೆ, ಮಹೇಶ ಶೆಟ್ಟಿ ತನ್ನ ಮನೆಯಲ್ಲಿ ಉಳಿಯದೆ ತಪ್ಪಿಸಿಕೊಂಡಿದ್ದಾರೆ. ಪೊಲೀಸರು ಮನೆಯನ್ನು ಶೋಧ ನಡೆಸಿದ್ದು ಚಿನ್ನಯ್ಯನಿಗೆ ಸೇರಿದ ಮೊಬೈಲ್ ಸಿಕ್ಕಿದೆ ಎನ್ನಲಾಗುತ್ತಿದೆ. ಇದಲ್ಲದೆ, ಮನೆಯಲ್ಲಿದ್ದ ಮಹೇಶ್ ಶೆಟ್ಟಿ ಪತ್ನಿ, ಇಬ್ಬರು ಮಕ್ಕಳ ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಮನೆಯ ಸಿಸಿಟಿವಿ ಡಿವಿಆರ್ ಅನ್ನೂ ವಶಕ್ಕೆ ಪಡೆದಿದ್ದಾರೆಂಬ ಮಾಹಿತಿ ಇದೆ. 2-3 ತಿಂಗಳಲ್ಲಿ ಮನೆಗೆ ಯಾರೆಲ್ಲ ಬಂದಿದ್ದಾರೆ, ಇವರ ಮನೆಯಲ್ಲೇ ಷಡ್ಯಂತ್ರ ಮಾಡಲಾಗಿತ್ತೇ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇದಾಗುತ್ತಿದ್ದಂತೆ ಎಸ್ಐಟಿ, ಷಡ್ಯಂತ್ರ ಹೆಣೆದ ಆರೋಪದಲ್ಲಿ ಮತ್ತಷ್ಟು ಸೆಕ್ಷನ್ ಗಳನ್ನು ದಾಖಲಿಸಿದೆ.
ಮೂಲಗಳಿಂದ ದೊರೆತ ಮಾಹಿತಿಗಳ ಪ್ರಕಾರ ಎಸ್‌ಐಟಿ ದಾಖಲಿಸಿರುವ ಎಫ್ಐಆರ್ ನಲ್ಲಿ ಹೆಚ್ಚುವರಿಯಾಗಿ BNS 336 (ಸುಳ್ಳು ಮಾಹಿತಿ ನೀಡಿ ಸಾರ್ವಜನಿಕರನ್ನು ಭೀತಿಗೊಳಿಸುವುದು), 230 (ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವುದು), 231 (ನ್ಯಾಯಾಲಯದ ಕಾರ್ಯಕ್ಕೆ ಅಡ್ಡಿಪಡಿಸುವುದು) 229 (ಸುಳ್ಳು ಸಾಕ್ಷ್ಯ ನೀಡುವುದು), 227 (ಸಾರ್ವಜನಿಕ ಶಾಂತಿ ಕದಡುವುದು), 228 (ನ್ಯಾಯಾಲಯಕ್ಕೆ ಅಪಮಾನ ಮಾಡುವುದು), 240 (ತಪ್ಪು ಮಾಹಿತಿ ನೀಡಿ ತನಿಖೆ ದಿಕ್ಕು ತಪ್ಪಿಸುವುದು), 236 (ಪಿತೂರಿ), 233 (ತಪ್ಪಾಗಿ ಜನರನ್ನು ಪ್ರೇರೇಪಿಸುವುದು) ಮತ್ತು 248 (ಸುಳ್ಳು ದೂರು ನೀಡಿ ಸಮಯ ಹಾಳು ಮಾಡುವುದು) ಇತ್ಯಾದಿ ಸೆಕ್ಷನ್ಗಳ ಅಡಿಯಲ್ಲಿ ದೂರು ದಾಖಲಿಸಿಕೊಂಡಿದೆ.
ಹೊಸ ಎಫ್ಐಆರ್ ನಲ್ಲಿ ಸರ್ಕಾರಕ್ಕೆ ತಪ್ಪು ಮಾಹಿತಿ, ಷಡ್ಯಂತ್ರ ಇತ್ಯಾದಿ ಆರೋಪಗಳಿದ್ದು ಇತರರು ಎಂದು ಆರೋಪಿಗಳನ್ನು ಹೆಸರಿಸಿರುವ ಸಾಧ್ಯತೆಯಿದೆ. ಮಹೇಶ್ ತಿಮರೋಡಿ, ಗಿರೀಶ್ ಮಟ್ಟೆಣ್ಣನವರ್ ಅವರನ್ನೂ ಕೇಸಿನಲ್ಲಿ ಸೇರಿಸಿದ್ದರೆ ಬಂಧನಕ್ಕೆ ಬಲೆ ಬೀಸುವುದು ಖಚಿತವಾಗಿದೆ. ಈ ಬಗ್ಗೆ ಎಸ್ಐಟಿ ಖಚಿತ ಮಾಹಿತಿ ನೀಡಿಲ್ಲ.
In a dramatic twist in the high-profile Dharmasthala case involving alleged mass burials, the investigation has taken a turn against the original complainant. Sources reveal that the Special Investigation Team (SIT) has now named the complainant, Chinnayya, as Accused No. 1 in a fresh FIR, citing conspiracy and misinformation under several sections of the Bharatiya Nyaya Sanhita (BNS).
19-01-26 05:04 pm
Bangalore Correspondent
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
88 ಅಪರಾಧ ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಸರ್ಕಾರ...
18-01-26 03:34 pm
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 04:16 pm
HK News Desk
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm