ಬ್ರೇಕಿಂಗ್ ನ್ಯೂಸ್
01-09-25 10:01 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.1 : ಎಸ್ಐಟಿ ತನಿಖೆ, ಧರ್ಮಸ್ಥಳ ಪ್ರಕರಣದ ಹಿನ್ನೆಲೆಯಲ್ಲಿ ಕ್ಷೇತ್ರಕ್ಕೆ ಅಪಚಾರ ಆಗಿದೆಯೆಂದು ಧರ್ಮಸ್ಥಳ ಚಲೋ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಮಾವೇಶ ಬೆನ್ನಲ್ಲೇ 12 ವರ್ಷಗಳ ಹಿಂದೆ ಕೊಲೆಯಾದ ಸೌಜನ್ಯಾ ಮನೆಗೆ ಭೇಟಿ ನೀಡಿ, ತಾಯಿ ಕುಸುಮಾವತಿ ಅವರಿಗೆ ಸಾಂತ್ವನ ಹೇಳಿದರು. ಅಲ್ಲದೆ, ಸೌಜನ್ಯಾ ಕೊಲೆ ಪ್ರಕರಣದ ತನಿಖೆಯಲ್ಲಿ ನಾವು ನಿಮ್ಮ ಜೊತೆಗಿದ್ದೇವೆ ಎಂದು ಹೇಳಿದ್ದಾರೆ.
ಬಿಜೆಪಿ ಸಮಾವೇಶ ಮುಗಿಯುತ್ತಿದ್ದಂತೆ ಸಂಜೆ 5 ಗಂಟೆಗೆ ಪಾಂಗಾಳದ ಸೌಜನ್ಯಾ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಬಿಜೆಪಿ ನಾಯಕರು ಭೇಟಿ ನೀಡಿದ್ದಾರೆ. ಸೌಜನ್ಯ ತಾಯಿ ಕುಸುಮಾವತಿ, ಬಿಜೆಪಿ ನಾಯಕರ ಜೊತೆ ಮಾತನಾಡುತ್ತ ಕಣ್ಣೀರು ಹಾಕಿದ್ದಾರೆ. ನನ್ನ ಮಗಳ ಸಾವಿಗೆ ಇನ್ನೂ ನ್ಯಾಯ ಸಿಕ್ಕಿಲ್ಲ. ಅತ್ಯಾಚಾರಿಗಳಿಗೆ ಶಿಕ್ಷೆ ಆಗಲೇಬೇಕೆಂದು ಒತ್ತಾಯಿಸಿದ್ದಾರೆ. ಇದೇ ಸಂದರ್ಭದಲ್ಲಿ ಸೌಜನ್ಯಾ ಹೋರಾಟದಲ್ಲಿ ಜೊತೆಗಿರುವುದಾಗಿ ವಿಜಯೇಂದ್ರ ಭರವಸೆ ನೀಡಿದ್ದಾರೆ.



ಇದಕ್ಕು ಮುನ್ನ ಧರ್ಮಸ್ಥಳ ವಿರುದ್ಧದ ಪಿತೂರಿ ಮತ್ತು ಅಪಪ್ರಚಾರ ಅಭಿಯಾನವನ್ನು ಖಂಡಿಸಿ ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಬಿಜೆಪಿ ಶಾಸಕರು ಮತ್ತು ಹಲವು ನಾಯಕರು 'ಧರ್ಮಸ್ಥಳ ಚಲೋ' ಪ್ರತಿಭಟನೆ ನಡೆಸಿದ್ದಾರೆ. ಅದಕ್ಕು ಮೊದಲು, ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರಲ್ಲದೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಜಾತಿ, ಧರ್ಮ ಲೆಕ್ಕಿಸದೆ ಎಲ್ಲರೂ ಸಿಬಿಐ ಅಥವಾ ಎನ್ಐಎಯಿಂದ ಸಮಗ್ರ ತನಿಖೆಗೆ ಒತ್ತಾಯಿಸುತ್ತಿದ್ದಾರೆ. ಧರ್ಮಸ್ಥಳ ಪ್ರಸಂಗದಲ್ಲಿ ಇದು ಅತ್ಯಗತ್ಯ. ಇದು ಧರ್ಮಸ್ಥಳದ ಮಂಜುನಾಥನ ಎಲ್ಲಾ ಭಕ್ತರ ಬೇಡಿಕೆಯಾಗಿದೆ ಎಂದು ವಿಜಯೇಂದ್ರ ಇದೇ ವೇಳೆ ಹೇಳಿದರು.
ಧರ್ಮಸ್ಥಳ ಪ್ರಕರಣದ ಹಿಂದೆ 'ಬಹಳ ದೊಡ್ಡ ಪಿತೂರಿ' ನಡೆದಿದೆ ಎಂದು ಬಿ.ವೈ. ವಿಜಯೇಂದ್ರ ಆರೋಪಿಸಿದ್ದು ಪ್ರಕರಣವನ್ನು NIA ಅಥವಾ CBIಗೆ ವಹಿಸಬೇಕೆಂದು ಒತ್ತಾಯಿಸಿದರು. ರಾಜ್ಯ ಸರ್ಕಾರವು ಯಾವುದೇ ವಿಳಂಬವಿಲ್ಲದೆ, ಆದಷ್ಟು ಬೇಗ ತನಿಖೆಗೆ ಆದೇಶಿಸುತ್ತದೆ ಎಂದು ನಾನು ಭಾವಿಸಿದ್ದೇನೆ ಎಂದರು.
Following the 'Dharmasthala Chalo' protest rally organized by the BJP, Karnataka BJP State President B.Y. Vijayendra visited the home of Soujanya, the young girl who was brutally murdered 12 years ago, and offered condolences to her mother, Kusumavati. He assured the grieving family that the BJP stands with them in their long struggle for justice.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 04:21 pm
HK News Staffer
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm