ಬ್ರೇಕಿಂಗ್ ನ್ಯೂಸ್
05-09-25 05:09 pm Mangalore Correspondent ಕರಾವಳಿ
ಮಂಗಳೂರು, ಸೆ.5 : ರಾತ್ರಿ ಗಸ್ತು ನಿರತರಾಗಿದ್ದ ಕಂಕನಾಡಿ ನಗರ ಠಾಣೆ ಎಎಸ್ಐ ಅಶೋಕ್ ಮತ್ತು ಸಿಬ್ಬಂದಿ ಸುರೇಂದ್ರ ಕುಮಾರ್ ಅವರಿಗೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹಲ್ಲೆ ನಡೆಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಹಾಸನ ಜಿಲ್ಲೆ ಸಕಲೇಶಪುರದ ಹಲಸೋಗೆ ಗ್ರಾಮದ ನಿವಾಸಿ ಸುಲೈಮಾನ್ (42) ಬಂಧಿತ ಆರೋಪಿ. ಸೆ.2 ರಂದು ತಡರಾತ್ರಿ ಅಶೋಕ್ ಅವರು ಸಿಬ್ಬಂದಿಯೊಂದಿಗೆ ರೌಂಡ್ಸ್ ನಲ್ಲಿದ್ದಾಗ ನಾಗುರಿಯಲ್ಲಿ ಚಿಕನ್ ಗ್ರಿಲ್ ಎಂಬ ಅಂಗಡಿ ಬಳಿ ಓಣಿಯಲ್ಲಿ ಐದಾರು ದ್ವಿಚಕ್ರ ವಾಹನಗಳ ಜತೆ ಏಳೆಂಟು ಮಂದಿ ನಿಂತಿದ್ದರು. ಅಲ್ಲಿದ್ದವರನ್ನು ಯಾಕೆ నింತಿದ್ದೀರಿ ಎಂದು ಪ್ರಶ್ನಿಸಿದಾಗ ಹಿಂದುಗಡೆಯ ಅಡುಗೆ ಕೋಣೆಯಿಂದ ಏಕಾಏಕಿ ಬಂದ ಸುಲೈಮಾನ್, ನಮ್ಮನ್ನು ಕೇಳಲು ನೀವು ಯಾರು? ನಾನು ಏನು ಬೇಕಾದರೂ ಮಾಡಿಯೇನು, ನಿನ್ನನ್ನು ಬಿಡುವುದಿಲ್ಲ ಎಂದು ಅಶೋಕ್ ಅವರ ಮೇಲೆ ಕೈಯಿಂದ ಹಲ್ಲೆ ನಡೆಸಲು ಬಂದಿದ್ದಾನೆ. ಆಗ ಅವರು ತಪ್ಪಿಸಿಕೊಂಡಿದ್ದು, ಈ ವೇಳೆ ಅವರ ಕೈಯಲ್ಲಿದ್ದ ಮೊಬೈಲ್ಗೆ ಅಳವಡಿಸಿದ್ದ ಫಿಂಗರ್ ಪ್ರಿಂಟ್ ಸ್ಕ್ಯಾನರನ್ನು ಆರೋಪಿ ಹಿಡಿದು ಎಳೆದು ತುಂಡು ಮಾಡಿ ನೆಲಕ್ಕೆ ಎಸೆದಿದ್ದಾನೆ.
ಇದನ್ನು ನೋಡಿದ ವಾಹನದಲ್ಲಿ ಚಾಲಕನಾಗಿದ್ದ ಸುರೇಂದ್ರ ಕುಮಾರ್ ಅವರು ಸಹಾಯಕ್ಕೆ ಬಂದು ಸಮಾಧಾನ ಪಡಿಸಲು ಹೋದಾಗ ಅವರ ಹೊಟ್ಟೆಗೆ ಮತ್ತು ಸೊಂಟಕ್ಕೆ ಸುಲೈಮಾನ್ ಕಾಲಿನಿಂದ ಒದ್ದು ನೆಲಕ್ಕೆ ಬೀಳಿಸಿ ಕೈಯಿಂದ ಬೆನ್ನಿಗೆ ಮತ್ತು ಕುತ್ತಿಗೆಗೆ ಹಲ್ಲೆ ಮಾಡಿದ್ದಾನೆ. ಆಗ ಅಶೋಕ್ ಅವರು ಸಹಾಯಕ್ಕೆ ಹೋಗಿ ಬಿಡಿಸಿದ್ದಾರೆ. ಸುರೇಂದ್ರ ಕುಮಾರ್ ಅವರ ಹೊಟ್ಟೆ, ಸೊಂಟದ ಭಾಗ, ಬೆನ್ನು ಮತ್ತು ಕುತ್ತಿಗೆಗೆ ಗುದ್ದಿದ ಹಲ್ಲೆ ಮಾಡಿದ್ದಾನೆ.
ಸುಲೈಮಾನ್ ಮತ್ತೆ ಹಲ್ಲೆ ಮಾಡುವ ಉದ್ದೇಶದಿಂದ ಹತ್ತಿರದಲ್ಲಿ ಬೇರೆ ವಸ್ತುವಿಗೆ ಹುಡುಕಾಡುತ್ತಿದ್ದಾಗ ಆತನನ್ನು ಹಿಡಿದಿಟ್ಟು ಠಾಣೆಗೆ ಕರೆ ಮಾಡಿ ಸಹಾಯಕ್ಕೆ ಬರುವಂತೆ ಕೇಳಿಕೊಂಡಿದ್ದರು. ರಾತ್ರಿ ಕರ್ತವ್ಯದಲ್ಲಿದ್ದ ರಾಯಣ್ಣ ಮತ್ತು ಪುರುಷೋತ್ತಮ ಅವರು ಸ್ಥಳಕ್ಕೆ ಧಾವಿಸಿ, ಆತನನ್ನು ಹಿಡಿದು ಠಾಣೆಗೆ ಕರೆತಂದಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಆಕ್ರಮಣಕಾರಿಯಾಗಿ ವರ್ತಿಸಿ ಪೊಲೀಸ್ ಅಧಿಕಾರಿ ಸಿಬಂದಿಗೆ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿ, ಹಲ್ಲೆ ನಡೆಸಿ, ಇಲಾಖಾ ಸೊತ್ತನ್ನು ತುಂಡು ಮಾಡಿ ಸರ್ಕಾರಕ್ಕೆ ನಷ್ಟ ಉಂಟು ಮಾಡಿದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.
A man was arrested in Mangaluru after allegedly assaulting police personnel on night patrol duty near a fast-food outlet in Naguri. The accused, identified as Sulaiman (42), a resident of Halasoge village in Sakleshpur, Hassan district, has been booked for assault, obstruction of duty, and damaging government property.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
31-10-25 10:57 pm
Mangalore Correspondent
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm