ಬ್ರೇಕಿಂಗ್ ನ್ಯೂಸ್
08-09-25 12:08 pm Udupi Correspondent ಕರಾವಳಿ
ಉಡುಪಿ, ಸೆ 08 : ಸಮುದ್ರಕ್ಕೆ ಈಜಲು ಹೋದ ನಾಲ್ವರ ಪೈಕಿ ಮೂವರು ಮೃತಪಟ್ಟಿದ್ದು, ಓರ್ವ ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ಕುಂದಾಪುರ ತಾಲೂಕಿನ ಗೋಪಾಡಿ ಬೀಚ್‌ನಲ್ಲಿ ಸಂಭವಿಸಿದೆ.
ಬೆಂಗಳೂರಿನಿಂದ 10 ಮಂದಿ ಯುವಕರ ತಂಡ ಗೋಪಾಡಿಗೆ ಬಂದಿದ್ದು, ಅದರಲ್ಲಿ ಏಳು ಮಂದಿ ಸಮುದ್ರಕ್ಕೆ ಇಳಿದು ನೀರಿನಲ್ಲಿ ಆಡುತ್ತಿದ್ದರು. ಈ ವೇಳೆ ನಾಲ್ವರು ಅಲೆಗಳಿಗೆ ಸಿಲುಕಿ ನೀರು ಪಾಲಾಗಿದ್ದು, ಅವರಲ್ಲಿ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.


ಓರ್ವನನ್ನು ಸ್ಥಳೀಯರು ರಕ್ಷಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಮತ್ತು ಪೊಲೀಸರು ಆಗಮಿಸಿದ್ದರು. ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಹಾಗೂ ಸ್ಥಳೀಯರಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.
ಮುಳುಗು ತಜ್ಞ ಈಶ್ವರ್ ಮಲ್ಪೆ, ಘಟನೆ ನಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ್ದು ಓರ್ವನನ್ನು ರಕ್ಷಣೆ ಮಾಡಿದ್ದೇವೆ. ಪ್ರಾರಂಭದಲ್ಲಿ ಇಬ್ಬರು ಸಾವಿಗೀಡಾಗಿ ಓರ್ವ ಕಣ್ಮರೆಯಾಗಿದ್ದ. ಬಳಿಕ ಆತನ ಮೃತದೇಹ ಸಿಕ್ಕಿತು. ರಕ್ಷಣೆ ಮಾಡಲ್ಪಟ್ಟ ಯುವಕನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದರು.
ವಾರಾಂತ್ಯದ ರಜೆಯ ಮೋಜು ಕಳೆಯಲೆಂದು ಬೆಂಗಳೂರಿನ ಪಿ.ಎಸ್. ಹಾಗೂ ಇತರ ಕಾಲೇಜಿನ ಒಟ್ಟು 10 ವಿದ್ಯಾರ್ಥಿಗಳು ಒಟ್ಟಾಗಿ ರೈಲಿನ ಮೂಲಕ ಶುಕ್ರವಾರ ಬೆಂಗಳೂರಿನಿಂದ ಉಡುಪಿಗೆ ಬಂದಿದ್ದರು. ಶನಿವಾರ ಸಂಜೆ ವೇಳೆಗೆ ಕುಂಭಾಸಿಗೆ ಬಂದಿದ್ದ ವಿದ್ಯಾರ್ಥಿಗಳ ತಂಡ, ಖಾಸಗಿ ಲಾಡ್ಜ್‌ನಲ್ಲಿತಂಗಿದ್ದರು. ಭಾನವಾರ ಬೆಳಗ್ಗೆ 7.30 ರ ವೇಳೆಗೆ ನಾಲ್ಕೈದು ವಿದ್ಯಾರ್ಥಿಗಳು ಮೊಬೈಲ್ ಲೊಕೇಶನ್ ಬಳಸಿ ಕಾಲ್ನಡಿಗೆಯಲ್ಲಿಯೇ ಸಮೀಪದ ಗೋಪಾಡಿಯ ಚರ್ಕಿಕಡು ಅರಬ್ಬಿ ಸಮುದ್ರ ಕಿನಾರೆಗೆ ಬಂದಿದ್ದರು. ಬಳಿಕ ವಸತಿಗೃಹದಲ್ಲಿತಂಗಿದ್ದ ಉಳಿದ ಸಂಗಡಿಗರನ್ನೂ ಅಲ್ಲಿಗೆ ಕರೆಸಿಕೊಂಡಿದ್ದರು.
ಒಬ್ಬ ವಿದ್ಯಾರ್ಥಿಯನ್ನು ಬಿಟ್ಟು ಉಳಿದ 9 ಮಂದಿ ವಿದ್ಯಾರ್ಥಿಗಳು ಸಮುದ್ರದಲ್ಲಿನೀರಿನಾಟದಲ್ಲಿನಿರತರಾಗಿದ್ದರು. ಭಾನುವಾರ ಮಧ್ಯಾಹ್ನ ಸುಮಾರು 1.30ರ ವೇಳೆಗೆ ವಿದ್ಯಾರ್ಥಿಗಳ ಬೊಬ್ಬೆ ಕೇಳಿ ಸ್ಥಳೀಯ ಮೀನುಗಾರ ಉಮೇಶ್ ಎನ್ನುವವರು ಕಡಲ ಕಿನಾರೆಗೆ ಧಾವಿಸಿ ಬಂದಾಗ ಕೆಲವು ವಿದ್ಯಾರ್ಥಿಗಳು ನೀರುಪಾಲಾಗುತ್ತಿರುವುದು ಗಮನಕ್ಕೆ ಬಂದಿದೆ. ತಕ್ಷಣ ನಿರೂಪ್ (20) ಹಾಗೂ ಇನ್ನೊಬ್ಬನನ್ನು ರಕ್ಷಣೆ ಮಾಡಿ ದಡಕ್ಕೆ ಸೇರಿಸಿದ್ದಾರೆ. ಬಳಿಕ ಸ್ಥಳೀಯ ಇತರರನ್ನು ಕರೆಸಿ ರಕ್ಷಣಾ ಕಾರ್ಯಕ್ಕೆ ಮುಂದಾದರೂ ಮೂವರು ವಿದ್ಯಾರ್ಥಿಗಳು ಸಮುದ್ರದ ನೀರಿನಲ್ಲಿಯೇ ಪ್ರಾಣ ಕಳೆದುಕೊಂಡಿದ್ದಾರೆ.
ಸಮುದ್ರದ ಅಲೆಗಳಲ್ಲಿ ಮೋಜಿನಾಟದಲ್ಲಿನಿರತರಾಗಿದ್ದ ವಿದ್ಯಾರ್ಥಿಗಳಿಗೆ ಸ್ಥಳೀಯರು ಸಮುದ್ರದ ಅಪಾಯದ ಬಗ್ಗೆ ಎಚ್ಚರಿಕೆ ನೀಡಿದ್ದರೂ ಅದನ್ನು ನಿರ್ಲಕ್ಷಿಸಿ ಮೋಜಿನಾಟದಲ್ಲಿನಿರತರಾಗಿದ್ದುದೇ ದುರಂತಕ್ಕೆ ಕಾರಣ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಶಾಸಕರ ಭೇಟಿ;
ದುರಂತದ ಮಾಹಿತಿ ಪಡೆದು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಸ್ಥಳಕ್ಕೆ ಆಗಮಿಸಿ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಪೊಲೀಸ್ ಅಕಾರಿಗಳೊಂದಿಗೆ ಮುಂದಿನ ಕಾನೂನು ಕ್ರಮಗಳ ಕುರಿತು ಸಮಾಲೋಚನೆ ನಡೆಸಿದರು.
Sept 8 – A tragic incident unfolded at Gopadi Beach in Kundapura on Sunday, where three students drowned while swimming in the sea, despite prior warnings from locals. A fourth student was rescued in critical condition and is currently receiving treatment at Manipal Hospital. A group of 10 students fromvarious colleges in Bengaluru had arrived in Gopadi on Friday by train, hoping to enjoy a weekend getaway.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
19-01-26 04:16 pm
HK News Desk
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm