ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ ಈಡೇರಿಸದ ಬಗ್ಗೆ ಕಾರ್ಯಕರ್ತರ ಆಕ್ರೋಶ, ಮುಂದಿನ ನಡೆ ಬಗ್ಗೆ ಪುತ್ತೂರಿನಲ್ಲಿ ತುರ್ತು ಸಭೆ

11-09-25 01:40 pm       Mangalore Correspondent   ಕರಾವಳಿ

ಬಿಜೆಪಿ ಮತ್ತು ಪುತ್ತಿಲ ಪರಿವಾರದ ಕಾರ್ಯಕರ್ತರ ನಡುವಿನ ಅಸಮಾಧಾನ ಮತ್ತೆ ಹೊಗೆಯಾಡಿದೆ. ಪಕ್ಷದಲ್ಲಿ ವಿಲೀನ ಮಾಡಿದರೂ, ಪ್ರಮುಖ ಹುದ್ದೆ ನೀಡದೆ ಸತಾಯಿಸಲಾಗುತ್ತಿದೆ ಎಂಬ ನೋವು ಕಾಡಲಾರಂಭಿಸಿದೆ.

ಪುತ್ತೂರು, ಸೆ.11 : ಬಿಜೆಪಿ ಮತ್ತು ಪುತ್ತಿಲ ಪರಿವಾರದ ಕಾರ್ಯಕರ್ತರ ನಡುವಿನ ಅಸಮಾಧಾನ ಮತ್ತೆ ಹೊಗೆಯಾಡಿದೆ. ಪಕ್ಷದಲ್ಲಿ ವಿಲೀನ ಮಾಡಿದರೂ, ಪ್ರಮುಖ ಹುದ್ದೆ ನೀಡದೆ ಸತಾಯಿಸಲಾಗುತ್ತಿದೆ ಎಂಬ ನೋವು ಕಾಡಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಗುರುತಿಸಿಕೊಂಡಿರುವ ಪ್ರ‌ಮುಖರು ಮತ್ತು ಪುತ್ತಿಲ ಪರಿವಾರ ಟ್ರಸ್ಟ್‌ ಪ್ರಮುಖರು, ಕಾರ್ಯಕರ್ತರ ಸಭೆ ಪುತ್ತೂರಿನಲ್ಲಿ ನಡೆಯಿತು.‌

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಬಿಜೆಪಿ ಪದಾಧಿಕಾರಿಗಳಾಗಿ ಕೆಲಸ ನಿರ್ವಹಿಸುತ್ತಿರುವ ಪ್ರಮುಖರ ಸಭೆಯು ಪುತ್ತಿಲ ಸೇವಾ ಟ್ರಸ್ಟ್ ಕಚೇರಿಯಲ್ಲಿ ನಡೆಯಿತು. ಪುತ್ತಿಲ ಪರಿವಾರ ಭಾರತೀಯ ಜನತಾ ಪಾರ್ಟಿ ಜೊತೆ ವಿಲೀನವಾದ ಸಂದರ್ಭದಲ್ಲಿ ಪಕ್ಷದ ಮತ್ತು ಸಂಘದ ಪ್ರಮುಖ ನಾಯಕರು ಅರುಣ್ ಪುತ್ತಿಲರಿಗೆ ನೀಡಿದ ಭರವಸೆಯನ್ನು ಈಡೇರಿಸದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪಕ್ಷದ ಪದಾಧಿಕಾರಿಗಳು ತಮ್ಮ ಮುಂದಿನ ನಡೆಯ ಬಗ್ಗೆ ಅಭಿಪ್ರಾಯ ಮಂಡಿಸಿದರು. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಂಸದರು, ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ನೀಡಿದ ಭರವಸೆ ಈಡೇರಿಸದಿರುವುದು ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಕೆರಳಿಸಿದೆ. 

ಕೇಸರಿ ಶಾಲನ್ನು ಹಾಕುವ ದೇವ ದುರ್ಲಭ ಕಾರ್ಯಕರ್ತರನ್ನು ಅವಮಾನಿಸಿ ಹೇಳಿಕೆ ನೀಡುವ ಸಂಘ ಮತ್ತು ಪಕ್ಷದ ನಾಯಕರ ನಡೆಗೆ ಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಯಿತು. ತಕ್ಷಣ ಪಕ್ಷದ ಮತ್ತು ಸಂಘದ ಹಿರಿಯರು ಸಮನ್ವಯ ಸಾಧಿಸಿ ಪರಿಹಾರ ಮಾಡಬೇಕೆಂದು ಈ ಸಭೆಯಲ್ಲಿ ನಿರ್ಣಯಿಸಲಾಯಿತು. ಮುಂದಿನ ಕೆಲಸ ಕಾರ್ಯಗಳ ಬಗ್ಗೆಯೂ ಚರ್ಚೆಗಳು ನಡೆದು ಟ್ರಸ್ಟಿನ ಅಧ್ಯಕ್ಷರು ಮತ್ತು ತಂಡ ತೆಗೆದುಕೊಳ್ಳುವ ನಿರ್ಣಯಕ್ಕೆ ಬದ್ದರಾಗಿರುವುದಾಗಿ ತಿಳಿಸಿದರು. ಸಂಘದ ಶತಾಬ್ದಿಯ ನಿಮಿತ್ತ ನವಂಬರ್ ತಿಂಗಳಿನಲ್ಲಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ 
ಯಶಸ್ವಿಗೆ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕೆಂದು ನಿರ್ಣಯಿಸಲಾಯಿತು.

Fresh dissatisfaction has surfaced between the BJP and Puthila Parivara workers, with party cadres expressing anger over unfulfilled promises and lack of recognition. Although the group merged with the BJP, senior leaders allege that no key positions have been offered, leaving workers frustrated.