ಬ್ರೇಕಿಂಗ್ ನ್ಯೂಸ್
14-09-25 10:55 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.14 : ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆ ನಡೆಸುತ್ತಿರುವಾಗಲೇ ಸೌಜನ್ಯಾಳನ್ನು ಆಕೆಯ ಮಾವ ವಿಠಲ ಗೌಡನೇ ಕೊಲೆ ಮಾಡಿರುವುದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದ ಮೈಸೂರಿನ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧವೇ ಬೆಳ್ತಂಗಡಿ ಪೊಲೀಸ್ ಠಾಣೆಗೆ ಇಂದಬೆಟ್ಟು ಗ್ರಾಮದ ವೆಂಕಪ್ಪ ಕೋಟ್ಯಾನ್ ಎಂಬವರು ದೂರು ನೀಡಿದ್ದಾರೆ.
ಇತ್ತೀಚೆಗೆ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಬಂದಿದ್ದ ಮೈಸೂರಿನ ಸ್ನೇಹಮಯಿ ಕೃಷ್ಣ, ವಿಠಲ ಗೌಡನ ಬಗ್ಗೆ ಅನುಮಾನ ಇದೆ. ಆತನೇ ಸೌಜನ್ಯಾಳನ್ನು ಕೊಲೆಗೈದಿರುವ ಶಂಕೆಯಿದೆ ಎಂದು ಹೇಳಿ ಹಲವು ಅನುಮಾನಗಳನ್ನು ಪಟ್ಟಿ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಅಲ್ಲದೆ, ಮಾಧ್ಯಮಕ್ಕೂ ಅದೇ ರೀತಿಯ ಹೇಳಿಕೆ ನೀಡಿದ್ದರು. 12 ವರ್ಷಗಳ ಬಳಿಕ ಈ ರೀತಿಯ ಆರೋಪ ಮಾಡಿ ಸೌಜನ್ಯಾ ಪರ ಹೋರಾಟದ ಕಿಚ್ಚನ್ನು ಕುಂದಿಸುವ ಯತ್ನ ಮಾಡಿದ್ದರು.
ಇದೀಗ ಸ್ನೇಹಮಯಿ ವಿರುದ್ಧವೇ ಪೊಲೀಸರಿಗೆ ದೂರು ಕೊಟ್ಟಿದ್ದು, ಈ ರೀತಿ ದೂರು ಕೊಟ್ಟು ಸೌಜನ್ಯಾ ಕೊಲೆಗಾರರನ್ನು ಪತ್ತೆ ಹಚ್ಚಬೇಕು ಎಂದು ನಡೆಯುತ್ತಿರುವ ಹೋರಾಟವನ್ನು ದಾರಿ ತಪ್ಪಿಸುವ ಯತ್ನ ಮಾಡಿದ್ದಾರೆ. ಪಿತೂರಿ, ದುರುದ್ದೇಶ ಇಟ್ಟುಕೊಂಡು ದೂರು ನೀಡಿದ್ದಾರೆ. ಅವರನ್ನು ಠಾಣೆಗೆ ಕರೆಸಿ ಕೂಲಂಕಷವಾಗಿ ವಿಚಾರಣೆ ನಡೆಸಬೇಕು ಹಾಗೂ ದೂರು ನೀಡಲು ಪ್ರೇರೇಪಿಸಿದವರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ವೆಂಕಪ್ಪ ಕೋಟ್ಯಾನ್ ದೂರಿನಲ್ಲಿ ಒತ್ತಾಯಿಸಿದ್ದಾರೆ. ಪಿಯುಸಿ ವಿದ್ಯಾರ್ಥಿನಿ ಸೌಜನ್ಯಾಳನ್ನು 2012ರ ಅಕ್ಟೋಬರ್ 9ರಂದು ಸಂಜೆ ವೇಳೆಗೆ ಅಪಹರಿಸಿ ಅತ್ಯಾಚಾರಗೈದು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಆಕೆಯ ಶವ ಮರುದಿನ ಬೆಳಗ್ಗೆ ಮಣ್ಣಸಂಕ ಎಂಬಲ್ಲಿನ ಕಾಡಿನಲ್ಲಿ ಪತ್ತೆಯಾಗಿತ್ತು.
ಇದೀಗ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತ ಆರೋಪದ ಬಗ್ಗೆ ಎಸ್ಐಟಿ ತನಿಖೆ ನಡೆಸುತ್ತಿದ್ದು ಅಧಿಕಾರಿಗಳು ಘಟನೆ ಬಗ್ಗೆ ಹಲವು ಆಯಾಮದಲ್ಲಿ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ. ಕಳೆದೊಂದು ವಾರದಿಂದ ಗಿರೀಶ್ ಮಟ್ಟಣ್ಣವರ್, ಜಯಂತ ಟಿ., ವಿಠಲ ಗೌಡ, ಪ್ರದೀಪ್ ಗೌಡ ಹಾಗೂ ಯೂಟ್ಯೂಬರ್ ಅಭಿಷೇಕ್ ಅವರ ವಿಚಾರಣೆ ನಡೆಸಲಾಗಿದೆ. ವಿಠಲ ಗೌಡ ಜೊತೆಗೆ ಕಾಡಿನಿಂದ ತಲೆಬುರುಡೆ ತಂದಿದ್ದ ಎನ್ನಲಾದ ಪ್ರದೀಪ್ ಗೌಡ ಕೋರ್ಟಿನಲ್ಲಿ ಸಾಕ್ಷಿ ಹೇಳಿಕೆಯನ್ನೂ ನೀಡಿದ್ದಾರೆ.
In a surprising twist in the ongoing investigation into the Sowjanya murder case, a police complaint has been filed against Mysuru-based social activist Snehamayi Krishna, who had recently accused Sowjanya’s uncle Vittal Gowda of being involved in the crime.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm