ಬ್ರೇಕಿಂಗ್ ನ್ಯೂಸ್
20-09-25 10:39 pm Mangalore Correspondent ಕರಾವಳಿ
ಮಂಗಳೂರು, ಸೆ.20 : ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸೆ.22ರಂದು ಮೊದಲ್ಗೊಂಡು ಅಕ್ಟೋಬರ್ 3ರ ವರೆಗೆ ವೈಭವದ ದಸರಾ ಮಹೋತ್ಸವ ಜರುಗಲಿದೆ. ಸೆ.22ರಂದು ಪೂರ್ವಾಹ್ನ 12 ಗಂಟೆಗೆ ನವದುರ್ಗೆಯರು, ಮಹಾಗಣಪತಿ ಹಾಗೂ ಶ್ರೀ ಶಾರದಾ ಮಾತೆಯ ಪ್ರತಿಷ್ಠಾಪನೆಯೊಂದಿಗೆ ಅದ್ದೂರಿ ದಸರಾ ಉದ್ಘಾಟನೆಗೊಳ್ಳಲಿದೆ ಎಂದು ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಪೂಜಾರಿ ತಿಳಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಸೆ.22ರಂದು ಬೆಳಗ್ಗೆ 11.30ಕ್ಕೆ ಮಂಗಳೂರು ರಾಮಕೃಷ್ಣ ಮಿಶನ್ ಅಧ್ಯಕ್ಷ ಜಿತಕಾಮಾನಂದಜಿ ಮಹಾರಾಜ್, ಮಂಗಳೂರು ಬ್ರಹ್ಮಕುಮಾರೀಸ್ ಸಂಸ್ಥೆ ಮುಖ್ಯಸ್ಥೆ ಬಹ್ಮಕುಮಾರಿ ವಿಶ್ವೇಶ್ವರಿ ಜೀ ಅವರು ಡಬಿ.ಜನಾರ್ದನ ಪೂಜಾರಿಯವರ ಸಮ್ಮುಖದಲ್ಲಿ ಚಾಲನೆಗೊಳ್ಳಲಿದೆ ಎಂದರು.
ಈ ಬಾರಿ ದೇವಸ್ಥಾನದ ಒಳಾಂಗಣದ ಮೇಲ್ಛಾವಣಿಯನ್ನು ಜಿಲ್ಲೆಯಲ್ಲಿಯೇ ವಿಶೇಷ ಎನ್ನುವಂತೆ ಹೊಸ ಮಾದರಿಯಲ್ಲಿ ನವೀಕರಿಸಲಾಗಿದ್ದು, ಸೆ.21ರಂದು ಸಂಜೆ ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಉದ್ಘಾಟಿಸಲಿದ್ದಾರೆ. ಸೆ.22ರಂದು ಸಾಂಸ್ಕೃತಿಕ ಕಾರ್ಯಕ್ರಮವನ್ನು ಎನ್‌ಎಂಪಿಎ ಚೇರ್ಮನ್ ಡಾ.ವೆಂಕಟರಮಣ್ ಅಕ್ಕಚ್ಚುರಾಜು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ವಲಯ ಮುಖ್ಯಸ್ಥ ರಾಜೇಂದರ್ ಕುಮಾರ್ ಉದ್ಘಾಟಿಸಲಿದ್ದಾರೆ. ಇದೇ ವೇಳೆ ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ಸಾನಿಧ್ಯ ವಿಶೇಷ ಶಾಲೆ ಮಂಗಳೂರು, ವೈಟ್‌ಡೌಸ್ ಮಂಗಳೂರು, ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್‌ನ ಸೇವೆಯನ್ನು ಗುರುತಿಸಿ ಪುರಸ್ಕರಿಸಲಾಗುವುದು. ಭರತ ನಾಟ್ಯದಲ್ಲಿ ಗೊಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸಾಧನೆಗೈದ ರೆಮೋನಾ ಎವೆಟ್ಟೆ ಮತ್ತು ದೀಕ್ಷಾ ಸುವರ್ಣ ಅವರನ್ನು ಗೌರವಿಸಲಾಗುವುದು ಎಂದರು.
25ರಂದು ಸಂಜೆ 6 ಗಂಟೆಗೆ ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಲೋಕಸಭೆ ಸದಸ್ಯ, ಎಐಸಿಸಿ ಸೆಕ್ರೆಟರಿ ಕೆ.ಸಿ.ವೇಣುಗೋಪಾಲ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಜನಪ್ರತಿನಿಧಿಗಳು, ಗಣ್ಯರ ಉಪಸ್ಥಿತಿಯಲ್ಲಿ ಜನಾರ್ದನ ಪೂಜಾರಿಯವರ ಅಧ್ಯಕ್ಷತೆಯಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ ಎಂದರು. ಸೆ.28ರಂದು ಬೆಳಗ್ಗೆ 9ಕ್ಕೆ ವಿಶ್ವ ಬಿಲ್ಲವ ಮಹಿಳಾ ಸಂಘದ ನೇತೃತ್ವದಲ್ಲಿ ಸಾಮೂಹಿಕ ಚಂಡಿಕಾ ಹೋಮ ನೆರವೇರಲಿದೆ ಎಂದರು.
ಸಾಂಸ್ಕೃತಿಕ ಕಲಾ ವೈಭವ
ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ತಂಡಗಳನ್ನು ಆಯ್ಕೆ ಸಮಿತಿ ಮೂಲಕ ಆಯ್ಕೆ ಮಾಡಲಾಗಿದೆ. 40 ತಂಡಗಳ ಸುಮಾರು 1500ಕ್ಕೂ ಅಧಿಕ ಕಲಾವಿದರಿಗೆ ಕಲಾಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೇರೆ ಬೇರೆ ಕಲಾಸಕ್ತ ಮನಸ್ಸುಗಳಿಗಾಗಿ ಭರತನಾಟ್ಯ, ಜಾನಪದ ಸಂಭ್ರಮ, ಭಕ್ತಿ ಪ್ರಧಾನ ನೃತ್ಯರೂಪಕ, ಯಕ್ಷಗಾನ, ಗಾನ ನಾಟ್ಯ ವೈಭವ, ತಾಳಮದ್ದಲೆ, ಹರಿಕಥೆ, ಸಂಗೀತ ಪರಿಕರಗಳ ಜುಗಲ್‌ಬಂದಿ, ಸಪ್ತ ವೀಣಾವಾದನ, ಜಾದೂ ಪ್ರದರ್ಶನ, ನವರಸಗಳ ಸಮ್ಮಿಲನ ಈ ಬಾರಿಯ ವಿಶೇಷತೆ.
23ರಂದು ಬಹುಭಾಷಾ ಕವಿಗೋಷ್ಟಿ
23ರಂದು ಸಂಜೆ 4ರಿಂದ 6ರ ವರೆಗೆ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು ಇದರ ಸಹಯೋಗದದಲ್ಲಿ ಬಹುಭಾಷಾ ಕವಿಗೋಷ್ಠಿ ಆಯೋಜಿಸಲಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅಧ್ಯಕ್ಷತೆಯಲ್ಲಿ ನಡೆಯುವ ಬಹುಭಾಷಾ ಕವಿಗೋಷ್ಠಿಯಲ್ಲಿ ಬಿ.ಮುರಾರಿ ತಂತ್ರಿ (ಸಂಸ್ಕೃತ), ಮನೋಜ್ ಕುಮಾರ್ (ಕನ್ನಡ), ವಿನೋದ ಮೂಡುಗದ್ದೆ (ಅರೆಭಾಷೆ), ಹಂಝ ಮಲಾರ್ (ಬ್ಯಾರಿ), ಜೊನ್ಸಿ ಪಿಂಟೋ (ಕೊಂಕಣಿ), ವೆಂಕಟೇಶ್ ನಾಯಕ್ (ಕೊಂಕಣಿ), ಡಾ. ಸುರೇಶ್ ನೆಗಳಗುಳಿ (ಹವ್ಯಕ), ಡಾ.ಅಣ್ಣಯ್ಯ ಕುಲಾಲ್ (ಕುಂದಗನ್ನಡ), ಬಾಬು ಕೊರಗ ಪಾಂಗಾಳ (ಕೊರಗ ಭಾಷೆ), ಶ್ರೀಮತಿ ಕವಿತಾ ಅಡೂರು (ಶಿವಳ್ಳಿ ತುಳು), ಶ್ರೀಮತಿ ಗೀತಾ ಲಕ್ಷ್ಮೀಶ ಶೆಟ್ಟಿ(ತುಳು) ಕವನ ವಾಚಿಸಲಿದ್ದಾರೆ. ಹಂಪಿ ವಿವಿ ವಿಶ್ರಾಂತ ಕುಲಪತಿ ಡಾ.ಕೆ.ಚಿನ್ನಪ್ಪ ಗೌಡ ಅಧ್ಯಕ್ಷತೆಯಲ್ಲಿ ನಡೆಯುವ ತುಳು ಭಾಷಾ ಕವಿಗೋಷ್ಠಿಯಲ್ಲಿ ರೂಪಕಲಾ ಆಳ್ವ, ಗಣೇಶ್ ಪ್ರಸಾದ್ ಪಾಂಡೇಲು, ಅಶೋಕ ಎನ್. ಕಡೇಶಿವಾಲಯ. ಸದಾನಂದ ನಾರಾವಿ, ದೊಂಬಯ್ಯ ಇಡ್ಕಿದು, ಶಶಿಕಲಾ ಭಾಸ್ಕರ್ ಬಾಕ್ರಬೈಲ್, ಪ್ರಮೀಳಾ ದೀಪಕ್ ಪೆರ್ಮುದೆ ಕವನ ವಾಚಿಸಲಿದ್ದಾರೆ. ಅಂಚೆ ಮುಖೇನ ನಡೆಸಲಾದ ಕವನ ಸ್ಪರ್ಧೆಗೆ ಅತ್ಯುತ್ತಮ ಬೆಂಬಲ ದೊರೆತಿತ್ತು. ಆಯ್ದ ಕವನಗಳನ್ನು ಒಳಗೊಂಡ ಕವನ ಸಂಕಲನ ಮುದ್ರಣಗೊಂಡು ಈ ಸಂದರ್ಭ ಬಿಡುಗಡೆಯಾಗಲಿದೆ.
ಮಕ್ಕಳಿಗೆ ಮುದ್ದು ಶಾರದೆ, ಯುವಕರಿಗೆ ದೇಹದಾರ್ಢ್ಯ, ಮ್ಯಾರಥಾನ್ ಓಟ
24ರಂದು ಮಕ್ಕಳಿಗಾಗಿ ಮೂರು ವಿಭಾಗದಲ್ಲಿ ಮುದ್ದು ಶಾರದೆ ಮತ್ತು ನವದುರ್ಗೆಯರ ಸ್ಪರ್ಧೆ ಬೆಳಗ್ಗೆ 9ರಿಂದ ಸಂಜೆಯ ವರೆಗೆ ನಡೆಯಲಿದೆ. 26ರಂದು ಯುವಕರಿಗೆ ಪ್ರೋತ್ಸಾಹ ನೀಡುವ ದೃಷ್ಟಿಯಿಂದ ಮಿಸ್ಟರ್ ಮಂಗಳೂರು ದಸರಾ ಕ್ಲಾಸಿಕ್ ರಾಜ್ಯ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ಆಯೋಜಿಸಲಾಗಿದೆ. ದಸರಾ ಅಂಗವಾಗಿ 3ನೇ ವರ್ಷದ ದಸರಾ ಮ್ಯಾರಥಾನ್ 28ರಂದು ಬೆಳಗ್ಗೆ 4 ಗಂಟೆಯಿಂದ ನಡೆಯಲಿದೆ. 21ಕೆ ರನ್, 10ಕೆ ರನ್, 5ಕೆ ರನ್, 2ಕೆ ಸ್ಯಾರಿ ರನ್ ಆಯೋಜಿಸಲಾಗಿದೆ. ಒಟ್ಟು 1,00,000 ರೂ. ಬಹುಮಾನ ಘೋಷಿಸಲಾಗಿದೆ. ಮಕ್ಕಳ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸೆ.28ರಂದು ‘ಮಕ್ಕಳ ದಸರಾ’ ಪರಿಕಲ್ಪನೆಯಡಿ ಮಕ್ಕಳಿಗೋಸ್ಕರ ಕಿನ್ನಿಪಿಲಿ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಸಂಗೀತ ಸ್ಪರ್ಧೆಯನ್ನು ಆಕರ್ಷಕ ಬಹುಮಾನದೊಂದಿಗೆ ಆಯೋಜಿಸಲಾಗಿದೆ.
ಪ್ರತಿ ದಿನ ಅಸಾಮಾನ್ಯ ಸ್ತ್ರೀ ಪುರಸ್ಕಾರ
ನವದುರ್ಗೆಯರ ಆರಾಧನೆಯ ಪ್ರತೀಕವಾಗಿ ಪ್ರತಿದಿನ ಒಬ್ಬರಿಗೆ ಸಂಜೆ 7.30ಕ್ಕೆ ಒಟ್ಟು 9 ಸಾಧಕಿಯರಿಗೆ ಅಸಾಮಾನ್ಯ ಸ್ತ್ರೀ ಪುರಸ್ಕಾರ -2025 ನೀಡಿ ಗೌರವಿಸಲಾಗುವುದು. ವನಜಾ ಪೂಜಾರಿ (ಸಾಮಾಜಿಕ- ಮೋಕ್ಷಧಾಮ), ವೆಂಕಮ್ಮ ಕುಡಂಬೆಟ್ಟು (ಪ್ರಸೂತಿ ತಜ್ಞೆ), ಶಾಲೆಟ್ (ಸಾಮಾಜಿಕ- ಮೂಕಪ್ರಾಣಿಗಳ ಆರೈಕೆ), ಸುಶೀಲಾ ಪಾಣಾರ (ಪಾರ್ದನ), ಯೋಗಾಕ್ಷಿ ಗಣೇಶ್ (ತೆಂಕುತಿಟ್ಟು ಮಹಿಳಾ ಯಕ್ಷಗಾನ ಮೇಳದ ಸಂಚಾಲಕಿ), ಜಾನಕಿ ಕೊಡ್ಯಡ್ಕ (ನಾಟಿ ವೈದ್ಯೆ), ತಬಸ್ಸುಮ್ (ಸಾಮಾಜಿಕ-ಅನಾಥ ಎಚ್.ಐ.ವಿ ಪೀಡಿತ ಮಕ್ಕಳ ಆರೈಕೆ), ಬಿ.ಎಂ.ರೋಹಿಣಿ (ಕನ್ನಡ ಮತ್ತು ತುಳು ಸಾಹಿತ್ಯ ಕ್ಷೇತ್ರ), ರೋಹಿಣಿ ಜಗರಾಮ್ (ತುಳು ರಂಗಭೂಮಿ ಮತ್ತು ಚಲನಚಿತ್ರ ರಂಗ) ಇವರ ಅಪ್ರತಿಮ ಸಾಧನೆ ಗುರುತಿಸಿ ಅಸಾಮಾನ್ಯ ಸ್ತ್ರೀ ಪುರಸ್ಕಾರ ನೀಡಲಾಗುವುದು ಎಂದು ಪದ್ಮರಾಜ್ ಮತ್ತು ಟ್ರಸ್ಟಿ ಹರಿಕೃಷ್ಣ ಬಂಟ್ವಾಳ್ ಉತ್ಸವದ ವಿಶೇಷಗಳ ಬಗ್ಗೆ ವಿವರ ನೀಡಿದರು.
ಈ ಬಾರಿ ಯಾವುದೇ ಕಾರಣಕ್ಕು ಡಿಜೆ ಬ್ಯಾಂಡ್ ಮಾದರಿ ಟ್ಯಾಬ್ಲೊಗಳಿಗೆ ಅವಕಾಶ ನೀಡುವುದಿಲ್ಲ. ಅಲ್ಲದೆ, ಟ್ಯಾಬ್ಲೋ ತರುವವರು ಮುಂಚಿತವಾಗಿ ತಮ್ಮ ಸ್ತಬ್ಧಚಿತ್ರದ ಕುರಿತ ಮಾಹಿತಿ ನೀಡಬೇಕು. ಇದರ ಬಗ್ಗೆ ನಾವು ಪೊಲೀಸ್ ಇಲಾಖೆಗೂ ಮಾಹಿತಿ ನೀಡಬೇಕಾಗುತ್ತದೆ ಎಂದು ಈ ಕುರಿತ ಪ್ರಶ್ನೆಗೆ ಪದ್ಮರಾಜ್ ಮಾಹಿತಿ ನೀಡಿದರು. ಪ್ರತಿ ದಿನವೂ ಬೆಳಗ್ಗೆ ದುರ್ಗಾ ಹೋಮ, 30ರಂದು ಚಂಡಿಕಾ ಹೋಮ ನಡೆಯಲಿದೆ. ಅ.2ರಂದು ಸಂಜೆ ನಾಲ್ಕರಿಂದ ವೈಭವದ ದಸರಾ ಶೋಭಾಯಾತ್ರೆ ಏಳು ಕಿಮೀ ಉದ್ದಕ್ಕೂ ನಡೆದು ಕ್ಷೇತ್ರದ ಕೆರೆಯಲ್ಲಿ ವಿಸರ್ಜನೆಯಾಗಲಿದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಟಿಯಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷ ಜೈರಾಜ್ ಸೋಮಸುಂದರಂ ಸೇರಿದಂತೆ ಇತರ ಟ್ರಸ್ಟಿಗಳು ಉಪಸ್ಥಿತರಿದ್ದರು.
Mangaluru Dasara 2025 at Kudroli Shri Gokarnanath Temple runs from September 22 to October 3, featuring grand cultural programs, multi-lingual poetry sessions, children’s contests, fitness competitions, a marathon, and daily ‘Extraordinary Woman’ awards honoring outstanding achievements in social service, arts, and literature.
20-09-25 10:57 pm
HK News Desk
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
20-09-25 05:11 pm
Mangalore Correspondent
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm