ಬ್ರೇಕಿಂಗ್ ನ್ಯೂಸ್
22-09-25 01:51 pm Mangalore Correspondent ಕರಾವಳಿ
ಮಂಗಳೂರು, ಸೆ.22 : ದೋಷಯುಕ್ತ ಎಲೆಕ್ಟ್ರಿಕ್ ವಾಹನ ಮಾರಾಟ ಮಾಡಿದ್ದ ಓಲಾ ಕಂಪೆನಿ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕ ನ್ಯಾಯಾಲಯ ತೀರ್ಪು ನೀಡಿದ್ದು ವಾಹನ ಸರಿಪಡಿಸಿ ಕೊಡದಿದ್ದರೆ ಅದರ ಪೂರ್ತಿ ಮೊತ್ತವನ್ನು ಬಡ್ಡಿ ಸಹಿತ ಪಾವತಿಸಲು ಸೂಚಿಸಿದೆ.
ಮಂಗಳೂರಿನ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದರ ಉದ್ಯೋಗಿ ಉದಯ ಕುಮಾರ್ ಬಿ.ಸಿ. ಅವರು ಓಲಾ ಎಲೆಕ್ಟ್ರಿಕ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನಿಂದ ವಾಹನವನ್ನು ಖರೀದಿಸಿದ್ದರು. ಓಲಾ ಸ್ಕೂಟರ್‌ಗೆ ಅವರು 1.17 ಲಕ್ಷ ರೂ.ಗಳನ್ನು ಪಾವತಿಸಿದ್ದರು. ಖರೀದಿಸಿದ ಒಂದು ತಿಂಗಳಿಗೆ ಸ್ಕೂಟರ್ ರಸ್ತೆ ಮಧ್ಯದಲ್ಲಿ ಹಠಾತ್ತಾಗಿ ನಿಲ್ಲುತ್ತಿತ್ತು. ಈ ಬಗ್ಗೆ ಗ್ರಾಹಕರು ದೂರು ನೀಡಿದಾಗ ಮೊದಲ ಬಾರಿಗೆ ಓಲಾ ಸಂಸ್ಥೆಯೇ ವಾಹನದ ದುರಸ್ತಿ ಮಾಡಿತ್ತು.
ಆದರೆ, ಸ್ಕೂಟರ್ ಇದೇ ಸಮಸ್ಯೆಯಿಂದ ಪದೇ ಪದೇ ರಸ್ತೆ ಮಧ್ಯೆ ನಿಲ್ಲುತ್ತಿದ್ದರಿಂದ ಗ್ರಾಹಕರು ತೀವ್ರ ಸಮಸ್ಯೆಗೆ ಗುರಿಯಾಗಿದ್ದರು. ರಿಪೇರಿ ನೆಪದಲ್ಲಿ ಓಲಾ ಸಂಸ್ಥೆ ಸ್ಕೂಟರ್‌ನ್ನು ತನ್ನ ಬಳಿ ಇರಿಸಿತ್ತಾದರೂ, ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಲೀಗಲ್ ನೋಟಿಸ್ ಜಾರಿಗೊಳಿಸಿದ ಗ್ರಾಹಕರು ಗ್ರಾಹಕರ ಪರಿಹಾರ ಆಯೋಗಕ್ಕೆ ಮೊರೆ ಹೋಗಿದ್ದರು. ಉದಯ್ ಕುಮಾರ್ ಸಲ್ಲಿಸಿದ ದೂರನ್ನು ವಿಚಾರಣೆ ನಡೆಸಿದ ಗ್ರಾಹಕರ ನ್ಯಾಯಾಲಯ, ಓಲಾ ಸಂಸ್ಥೆ ಸೇವಾ ನ್ಯೂನ್ಯತೆ ತೋರಿದೆ ಮತ್ತು ದೋಷಯುಕ್ತ ಉತ್ಪನ್ನವನ್ನು ಮಾರಾಟ ಮಾಡಿದೆ ಎಂದು ತೀರ್ಪು ನೀಡಿತು.
ಪ್ರಮಾದ ಎಸಗಿದ ಓಲಾ ಕಂಪೆನಿ 45 ದಿನದಲ್ಲಿ ಸ್ಕೂಟರ್‌ನ್ನು ಸಂಚಾರ ಯೋಗ್ಯವಾಗಿ ರಿಪೇರಿ ಮಾಡಿಕೊಡಬೇಕು. ತಪ್ಪಿದ್ದಲ್ಲಿ, 45 ದಿನದೊಳಗೆ ಶೇಕಡಾ 6ರ ಬಡ್ಡಿಯೊಂದಿಗೆ 1.17 ಲಕ್ಷ ರೂ. ಮರು ಪಾವತಿಸಲು ಆದೇಶ ನೀಡಿದೆ. ಇದರ ಜೊತೆಗೆ ಸೇವಾ ನ್ಯೂನತೆಗಾಗಿ ರೂ. 10,000/- ದಂಡ ಹಾಗೂ ಪ್ರಕರಣದ ವೆಚ್ಚವಾಗಿ ರೂ. 5000/-ವನ್ನು 45 ದಿನದೊಳಗೆ ಪಾವತಿಸಲು ಆದೇಶ ನೀಡಿದೆ. ಗ್ರಾಹಕರ ಪರವಾಗಿ ಮಂಗಳೂರಿನ ವಕೀಲರಾದ ತೇಜಕುಮಾರ್ ಡಿ.ಎಂ. ವಾದ ಮಂಡಿಸಿದ್ದರು.
The Dakshina Kannada District Consumer Court has ruled against Ola Electric Technologies Pvt. Ltd. for selling a defective electric scooter and failing to provide a permanent solution to repeated issues.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm