ಬ್ರೇಕಿಂಗ್ ನ್ಯೂಸ್
22-09-25 10:08 pm Mangalore Correspondent ಕರಾವಳಿ
ಮಂಗಳೂರು, ಸೆ.22 : ದಸರಾ ಹಬ್ಬ ಮಾತ್ರವಲ್ಲ, ನಂಬಿಕೆ, ಸಂಸ್ಕೃತಿ ಹಾಗು ಒಗಟ್ಟಿನ ಪ್ರತೀಕ. ಕುದ್ರೋಳಿಯಲ್ಲಿ ನಡೆಯುತ್ತಿರುವ ಈ ಉತ್ಸವ ಮಂಗಳೂರನ್ನು ಮತ್ತಷ್ಟು ವಿಭಿನ್ನವಾಗಿಸಿದೆ ಎಂದು ನವ ಮಂಗಳೂರು ಬಂದರು ಪ್ರಾಧಿಕಾರ (ಎನ್ಎಂಪಿಎ) ಅಧ್ಯಕ್ಷ ಡಾ.ಎ.ವೆಂಕಟರಮಣ ಅಕ್ಕರಾಜು ಹೇಳಿದರು.
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಮಾತನಾಡಿದರು. ಮಂಗಳೂರು ದಸರಾ ಮೈಸೂರು ದಸರಾದಷ್ಟೇ ಪ್ರಸಿದ್ಧಿ ಪಡೆದಿದೆ. ಭಾರತೀಯ ಧರ್ಮ, ಸಂಸ್ಕೃತಿಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂದರು.

ತಾಸೆ ಮತ್ತು ಡೋಲು ಬಡಿಯುವ ಮೂಲಕ ತುಳುನಾಡಿನ ಶೈಲಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಜನರಲ್ ಮ್ಯಾನೇಜರ್ ಹಾಗೂ ಮಂಗಳೂರು ವಲಯ ಮುಖ್ಯಸ್ಥ ರಾಜೇಂದರ್ ಕುಮಾರ್, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ಪ್ರಾದೇಶಿಕ ಕಚೇರಿ ಮುಖ್ಯಸ್ಥ ಆರ್. ನರಸಿಂಹ ಕುಮಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಟ್ರಸ್ಟಿಗಳಾದ ಸಂತೋಷ್ ಜೆ. ಪೂಜಾರಿ, ಕಿಶೋರ್ ದಂಡೆಕೇರಿ, ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸದಸ್ಯರಾದ ಲೀಲಾಕ್ಷ ಕರ್ಕೇರ, ರಮಾನಾಥ ಕಾರಂದೂರು, ವಾಸುದೇವ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು. ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್.ಪೂಜಾರಿ ಸ್ವಾಗತಿಸಿದರು. ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು.
ದಸರಾ ಸೇವಾ ಸಿರಿ ಪ್ರಶಸ್ತಿ
ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ಸಾನಿಧ್ಯ ವಿಶೇಷ ಶಾಲೆ ಮಂಗಳೂರು, ವೈಟ್ ಡೌಸ್ ಮಂಗಳೂರು, ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್‌ನ ಸೇವೆಯನ್ನು ಗುರುತಿಸಿ ದಸರಾ ಸೇವಾ ಸಿರಿ ಪ್ರಶಸ್ತಿ-2025 ನೀಡಿ ಗೌರವಿಸಲಾಯಿತು. ಸೋಮವಾರ ವಿದುಷಿ ವಿನುತಾ ಲಕ್ಷ್ಮೀಕಾಂತ್ ಜೋಗಿ ಕದ್ರಿ ಮತ್ತು ಬಳಗದವರಿಂದ ಭರತನಾಟ್ಯ, ಕಲಾಮೃತ ಮಂಗಳೂರು ತಂಡದಿಂದ ನಾಟ್ಯಸಂಭ್ರಮ, ಉಡುಪಿಯ ವಿದ್ವಾನ್ ಸುಧೀರ್ ರಾವ್, ವಿದುಷಿ ಮಾನಸಿ ಸುಧೀರ್ ನೇತೃತ್ವದ ನೃತ್ಯನಿಕೇತನ ಕೊಡವೂರು ಕಲಾವಿದರಿಂದ ನೃತ್ಯರೂಪಕ ನಾರಸಿಂಹ (ಒಳಿತಿನ ವಿಜಯದ ಕಥನ) ಜರುಗಿತು.
Dasara is not just a festival, but a symbol of faith, culture, and unity. The celebrations at Kudroli have made Mangaluru truly unique, said Dr. A. Venkataraman Akkaraju, Chairman of the New Mangalore Port Authority (NMPA).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm