ಬ್ರೇಕಿಂಗ್ ನ್ಯೂಸ್
24-09-25 10:48 pm Mangalore Correspondent ಕರಾವಳಿ
ಮಂಗಳೂರು, ಸೆ.24: ಮಹಾನಗರ ಪಾಲಿಕೆಯ ಸುರತ್ಕಲ್ ವಲಯ ಹಾಗೂ ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಯೋಜನೆ (ಯು.ಜಿ.ಡಿ)ಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು ಎಂದು ವಿಧಾನ ಪರಿಷತ್ತಿನ ಸರಕಾರಿ ಭರವಸೆಗಳ ಸಮಿತಿ ಜಿಲ್ಲಾಡಳಿತಕ್ಕೆ ಸೂಚಿಸಿದೆ.
ಅಧ್ಯಕ್ಷ ಶರವಣ ಟಿ.ಎ. ಅವರ ನೇತೃತ್ವದ ಸಮಿತಿಯು ಬುಧವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಭರವಸೆಗಳನ್ನು ಪರಿಶೀಲಿಸಿತು. ಉಳ್ಳಾಲ ನಗರಸಭೆ ವ್ಯಾಪ್ತಿಯಲ್ಲಿ ಯು.ಜಿ.ಡಿ. ಕಾಮಗಾರಿ ಆರಂಭಗೊಂಡು 6 ವರ್ಷ ಕಳೆದರೂ, ಯೋಜನೆ ಇನ್ನೂ ಪೂರ್ಣಗೊಳ್ಳದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಮಿತಿ ಸದಸ್ಯರು, ಇದಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗಳನ್ನು ಇತ್ಯರ್ಥ ಪಡಿಸಿ ಮುಂದಿನ 6 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಿತು. ಯೋಜನೆ ಜಾರಿಗೊಳಿಸಲು ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ತಿಳಿಸಿತು.
ಕೆ.ಯು.ಐ.ಡಿ.ಎಫ್.ಸಿ. ಅಧಿಕಾರಿಗಳು ಸಭೆಯಲ್ಲಿ ಸಮಿತಿ ಮುಂದೆ ಯೋಜನೆ ವಿಳಂಬದ ಕಾರಣ ವಿವರಿಸಿತು. ಒಳಚರಂಡಿ ಮನೆ ಮನೆ ಸಂಪರ್ಕಕ್ಕೆ ಹೆಚ್ಚುವರಿ 22 ಕೋಟಿ ರೂಪಾಯಿ ಅನುದಾನಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಸುರತ್ಕಲ್ ವಲಯದಲ್ಲಿ ಒಳಚರಂಡಿ ಕಾಮಗಾರಿಯಲ್ಲಿ 116 ಕಿ.ಮೀ. ಪೈಪ್ ಲೈನ್ ಹಾಗೂ 824 ಮ್ಯಾನ್ ಹೋಲ್ ಗಳನ್ನು ಮಾಡಲಾಗಿದೆ. ಇಲ್ಲಿನ ಬಹುತೇಕ ಪ್ರದೇಶಗಳಲ್ಲಿ ಸಂಪರ್ಕ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಸಮಿತಿಗೆ ವಿವರಿಸಿದರು. ಈ ಎರಡೂ ಒಳಚರಂಡಿ ಕಾಮಗಾರಿಗಳನ್ನು ಸಮರ್ಪಕ ಅನುಷ್ಠಾನಗೊಳಿಸಲು ಗಮನಹರಿಸಿ, ಮುಂದಿನ 15 ದಿನಗಳೊಳಗೆ ವರದಿ ನೀಡುವಂತೆ ಸಮಿತಿ ಅಧ್ಯಕ್ಷ ಶರವಣ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಮಾಲಿನ್ಯ ನಿಯಂತ್ರಣ ಮಂಡಳಿಯು ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳೊಂದಿಗೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಕೆರೆಗಳ ಸಂರಕ್ಷಣೆ, ನೀರು ಮಾಲಿನ್ಯದಂತಹ ವಿಷಯಗಳಲ್ಲಿ ಕಟ್ಟುನಿಟ್ಟಾಗಿ ವ್ಯವಹರಿಸಲು ಸಮಿತಿಯು ಮಂಡಳಿಗೆ ಸೂಚಿಸಿತು.
ನ್ಯಾಯಾಲಯದಲ್ಲಿರುವ ಪ್ರಕರಣಗಳಲ್ಲಿ ಸಮರ್ಥವಾಗಿ ದಾಖಲೆಗಳನ್ನು ಮಂಡಿಸಬೇಕು ಎಂದು ಸೂಚಿಸಿತು. ಮಾಲಿನ್ಯ ಮಂಡಳಿಗೆ ಪ್ರತ್ಯೇಕ ಕಾನೂನು ಕೋಶ ಒದಗಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದೂ ಅಧ್ಯಕ್ಷರು ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆಗೆ ಸಂಬಂಧಿಸಿದ 3 ಪ್ರಕರಣ ಹಾಗೂ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದ 1 ಪ್ರಕರಣವು ರಾಷ್ಟ್ರೀಯ ಹಸಿರು ಪೀಠ(ಎನ್.ಜಿ.ಟಿ)ದ ಮುಂದೆ ಇದೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಸಮಿತಿಗೆ ವಿವರಿಸಿದರು. ಕೈಗಾರಿಕಾ ಪ್ರದೇಶದಲ್ಲಿ ಅಗ್ನಿಶಾಮಕ ಠಾಣೆ ತೆರೆಯಲು ಅಗತ್ಯ ಜಾಗ ಒದಗಿಸಲು ಅಧ್ಯಕ್ಷರು ಮಹಾನಗರ ಪಾಲಿಕೆಗೆ ಸೂಚಿಸಿದರು.
ಸಭೆಯಲ್ಲಿ ವಿಧಾನ ಪರಿಷತ್ತಿನ ಸರಕಾರಿ ಭರವಸೆಗಳ ಸಮಿತಿಯ ಸದಸ್ಯರಾದ ಮಂಜುನಾಥ ಭಂಡಾರಿ, ಪ್ರತಾಪಸಿಂಹ ನಾಯಕ್, ಡಿ.ಎಸ್. ಅರುಣ್, ಕೆ.ಎಸ್.ನವೀನ್, ತಿಪ್ಪಣ್ಣಪ್ಪ ಕಮಕನೂರ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮತ್ತಿತರರು ಇದ್ದರು. ಇದಕ್ಕೂ ಮೊದಲು ಸಮಿತಿಯು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿ, ಸರಕಾರಿ ಭರವಸೆಗಳಿಗೆ ಸಂಬಂಧಿಸಿದ ವಿವಿಧ ವಿಷಯಗಳ ಅನುಷ್ಠಾನ ಕುರಿತು ಸಭೆ ನಡೆಸಿತು.
The Legislative Council’s Committee on Government Assurances, headed by chairman T.A. Sharavana, has directed officials to expedite the implementation of underground drainage (UGD) projects in Surathkal zone of Mangaluru City Corporation and Ullal City Municipality.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 10:48 pm
Mangalore Correspondent
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am