ಬ್ರೇಕಿಂಗ್ ನ್ಯೂಸ್
25-09-25 08:35 pm Mangalore Correspondent ಕರಾವಳಿ
ಮಂಗಳೂರು, ಸೆ.25: ಕುದ್ರೋಳಿ ದೇವಸ್ಥಾನದಲ್ಲಿ ದಸರಾ ಹಿನ್ನೆಲೆ ಜನಜಂಗುಳಿ ಇರುವಾಗ ಆಟೋ ಚಾಲಕನೊಬ್ಬ ಮುಖ್ಯ ದ್ವಾರದ ಬಳಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾನೆಂದು ಆರೋಪಿಸಿ ಟ್ರಾಫಿಕ್ ಪೊಲೀಸರು ಆತನನ್ನು ತಡೆದು ದಂಡ ವಿಧಿಸಿದ್ದು ಸ್ಥಳದಲ್ಲಿ ಆಟೋ ಚಾಲಕರ ಆಕ್ರೋಶಕ್ಕೂ ಕಾರಣವಾಗಿ ಇದರ ವಿಡಿಯೋ ವೈರಲ್ ಆಗಿದೆ.
ಸೆ.24ರಂದು ರಾತ್ರಿ 9.30 ಗಂಟೆ ಸಮಯದಲ್ಲಿ ಆಟೋ ಚಾಲಕ ಶೈಲೇಶ್ (28) ಎಂಬವರು ಕುದ್ರೋಳಿ ದೇವಸ್ಥಾನದ ಮುಖ್ಯದ್ವಾರದ ಸಾರ್ವಜನಿಕ ರಸ್ತೆಯಲ್ಲಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾರೆಂದು ಪೊಲೀಸ್ ಸಿಬ್ಬಂದಿ ದಂಡ ವಿಧಿಸಿದ್ದಾರೆ. ಆದರೆ ಇದರಿಂದ ಸಿಟ್ಟಿಗೆದ್ದ ಆಟೋ ಚಾಲಕ 500 ರೂ. ಮಾಡಲು ಎಷ್ಟು ಕಷ್ಟ ಇದೆ ಗೊತ್ತಾ, ನೀವು ದಂಡ ಹಾಕ್ತೀರಿ, ನಾನು ಏನು ತಪ್ಪು ಮಾಡಿದ್ದೇನೆ, ನಿಮಗೆ ಏನೂ ತಪ್ಪು ಮಾತಾಡಿಲ್ಲ ಅಲ್ವಾ ಎಂದು ಹೇಳಿ ಒಂದು ಕೈಯಲ್ಲಿ ವಿಡಿಯೋ ಮಾಡುತ್ತ ಸಾಗಿದ್ದಾನೆ. ಆದರೆ ಪೊಲೀಸ್ ಎಎಸ್ಐ ಒಬ್ಬರು, ಚಾಲಕನ ಸೊಂಟದ ಬೆಲ್ಟ್ ಹಿಡಿದು ನಿನ್ನನ್ನು ಬಿಡುವುದಿಲ್ಲ ಎನ್ನುತ್ತ ಹಿಡಿದುಕೊಂಡು ಹೋಗಿದ್ದಾರೆ.



ಈ ವೇಳೆ, ಇತರ ಆಟೋ ಚಾಲಕರು ಕೂಡ ಸೇರಿದ್ದು ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಟಾಪಟಿ ನಡೆಸುವ ವಿಡಿಯೋ ವೈರಲ್ ಆಗಿದ್ದು ಪೊಲೀಸರು ಕೇಸು ಹಾಕೋದಾಗಿ ಹೇಳುತ್ತಿರುವುದು ವಿಡಿಯೋದಲ್ಲಿದೆ. ಪೊಲೀಸರ ಮಾಹಿತಿ ಪ್ರಕಾರ, ನಂತರ ಆಟೋ ಚಾಲಕ ಶೈಲೇಶ್ ಸ್ವಇಚ್ಚೆಯಿಂದ ಕ್ಷಮೆ ಯಾಚಿಸಿದ್ದು ಜೊತೆಯಲ್ಲಿ ಘಟನೆ ಬಗ್ಗೆ ಬೇಸರ ವ್ಯಕ್ತ ಪಡಿಸಿದ್ದಾರೆ. ಸದ್ರಿ ಆಟೋ ಚಾಲಕನಿಗೆ ರಸ್ತೆ ಸಂಚಾರಕ್ಕೆ ಅಡೆ ತಡೆ ಮತ್ತು ಪೊಲೀಸ್ ಅಧಿಕಾರಿ ನೀಡಿದ ಸೂಚನೆಯನ್ನು ಪಾಲಿಸದೇ ಇರುವ ಬಗ್ಗೆ ಐಎಂವಿ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.
During the Kudroli Dasara celebrations at Kudroli Temple, an altercation between traffic police and an auto driver created a scene near the temple’s main entrance and has since gone viral on social media.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm