ಬ್ರೇಕಿಂಗ್ ನ್ಯೂಸ್
26-09-25 08:25 pm Mangalore Correspondent ಕರಾವಳಿ
ಬೆಳ್ತಂಗಡಿ, ಸೆ.26 : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಮಾತನಾಡಿದ್ದು, ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ವಹಿಸಿದ್ದಕ್ಕೆ ಸತ್ಯ ಬಯಲಾಗುತ್ತಿದೆ ಎಂದು ಹೇಳಿದ್ದಾರೆ. ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ವಿಶೇಷ ಪ್ರಾರ್ಥನೆ ಜೊತೆಗೆ ಲಲಿತಾಸಹಸ್ರನಾಮ ಪಾರಾಯಣ ನಡೆಯುತ್ತಿದ್ದು, ಈ ವೇಳೆ ಮಾತನಾಡಿದ ವೀರೇಂದ್ರ ಹೆಗ್ಗಡೆ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ಯಾಕೆ ಇಷ್ಟು ದ್ವೇಷ ನನ್ನ ಮೇಲೆ ಇದೆ ಅಂತ ನನಗೆ ಗೊತ್ತಾಗಿಲ್ಲ. ಈಗ ಮನಸ್ಸು ಸ್ವಲ್ಪ ಹಗುರವಾಗಿದೆ, ಎತ್ತರದ ಬೆಟ್ಟದಿಂದ ನೀರು ಹರಿದಿದೆ ಎಂದು ಹೇಳಿದ ಹೆಗ್ಗಡೆ. ನಮ್ಮ ಮೇಲೆ ದೃಢವಾದ ನಂಬಿಕೆ ಇಟ್ಟ ಎಲ್ಲರಿಗೂ ನಾನು ಆಭಾರಿ ಎಂದು ಹೇಳಿದರು. ಈಗಾಗಲೇ ಲಕ್ಷಾಂತರ ಜನರು ಇಲ್ಲಿಗೆ ಬಂದು ಹೋಗಿದ್ದಾರೆ, ನಿಮ್ಮ ಧರ್ಮ ಸೋತರೆ, ನಮ್ಮ ಧರ್ಮ ಸೋತ ಹಾಗೆ ಅಂತ ಹೇಳಿದ್ದಾರೆ.
ಎಲ್ಲರು ನನ್ನನ್ನು ಈ ಶತ್ರುತ್ವ ಯಾಕೆ ಅಂತ ಕೇಳ್ತಾರೆ, ನನಗೂ ಈ ದ್ವೇಷ ಯಾಕೆ ಬೇಕು ಎಂದು ಪ್ರಶ್ನೆ ಮೂಡುತ್ತೆ. ನಾವು ಯಾರನ್ನೂ ಹೀಯಾಳಿಸಿಲ್ಲ, ದ್ವೇಷ ಕೂಡ ಮಾಡಿಲ್ಲ. ನಾವು ತಪ್ಪು ಮಾಡದ ಕಾರಣ ನಮಗೆ ಆತ್ಮವಿಶ್ವಾಸ ಇದೆ ಎಂದು ಧೈರ್ಯ ತೋರಿಸಿದರು. ಬೆಂಗಳೂರು ಆಥವಾ ಎಲ್ಲೋ ಕೂತು ಟೀಕೆ ಮಾಡೋರು ನಮಗೆ ಬೇಡ. ನಮಗೆ ನಮ್ಮವರು ಬೇಕು, ನಮ್ಮ ಜೊತೆ ನಿಲ್ಲೋರು ಬೇಕು ಎಂದು ಹೇಳುತ್ತ, ನಮ್ಮ ಮೇಲೆ ಪ್ರೀತಿ ತೋರಿದ ಎಲ್ಲಾ ಹೆಣ್ಮಕ್ಕಳಿಗೂ ನಾನು ಆಭಾರಿ ಎಂದು ಕೃತಜ್ಞತೆ ವ್ಯಕ್ತಪಡಿಸಿದರು. ಎಸ್‌ಐಟಿ ವರದಿ ಅರ್ಧ ಬಂದ ಕಾರಣ ನಾನು ಇಷ್ಟು ಧೈರ್ಯವಾಗಿ ಮಾತನಾಡ್ತಾ ಇದೀನಿ ಎಂದೂ ಹೇಳಿದರು. ನಮ್ಮ ಹೊಳಪು ಹಾಗೇ ಉಳಿದಿದೆ, ಇದಕ್ಕೆ ನಾನು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸ್ತೇನೆ ಎಂದರು.
ನಾವು ಸೇವೆ ಮಾಡುತ್ತೇವೆ, ಆದರೆ ಸೇವೆ ಪ್ರಚಾರದ ವಸ್ತುವಲ್ಲ. ಇಷ್ಟು ವರ್ಷ ನಾವು ಆರೋಗ್ಯವಾಗಿರಲು ನಮ್ಮ ನಿಸ್ವಾರ್ಥ ಸೇವೆಯೇ ಕಾರಣ ಎಂದು ವೀರೇಂದ್ರ ಹೆಗ್ಗಡೆ ಹೇಳಿದರು. ಈ ಸಂದರ್ಭದಲ್ಲಿ ಹೆಗ್ಗಡೆ, ನಮ್ಮ ಎಲ್ಲಾ ಕಾರ್ಯಕ್ರಮಗಳನ್ನು ನೀವು ಎಲ್ಲರೂ ಗಮನಿಸಿದ್ದೀರಿ, ನಾವು ಇಲ್ಲಿ ನಿಮಿತ್ತ ಮಾತ್ರ, ಆದರೆ ಮುಂದುವರೆಸಿಕೊಂಡು ಹೋಗಿದ್ದು ಅದಕ್ಕೆ ಸಂಬಂಧಪಟ್ಟ ಇಲಾಖೆಯವರು ಎಂದರು. ಕೆಲವರು ಪ್ರೀತಿಯಲ್ಲಿ ಟೀಕೆ ಮಾಡಿದ್ದಾರೆ, ಆದರೆ ಇವರ ಹಾಗೆ ಟೀಕೆ ಮಾಡಿಲ್ಲ ಎಂದು ಟೀಕಾಕಾರರ ಬಗ್ಗೆ ಟಾಂಗ್ ನೀಡಿದರು. ನಿಮಗೆ ನಾನು ಎಷ್ಟು ಕೃತಜ್ಞತೆ ಸಲ್ಲಿಸಿದ್ರೂ ಕಡಿಮೆಯೇ. ಧರ್ಮಸ್ಥಳ ಬೇರೆ, ಧರ್ಮಸ್ಥಳದ ಊರಿನವರು ಬೇರೆ ಅಲ್ಲ. ಎಷ್ಟು ನಿಷ್ಠುರವಾಗಿ ನಮ್ಮ ಮೇಲೆ ದಬ್ಬಾಳಿಕೆ ನಡೆದಿದೆ ಅಂತ ನೀವು ನೋಡಿದ್ದೀರಿ ಎಂದರು.
ಮಿಕ್ಕಿದ್ದೆಲ್ಲಾ ಮಂಜುನಾಥ ಸ್ವಾಮಿ, ಅಣ್ಣಪ್ಪ ಸ್ವಾಮಿ ನೋಡಿಕೊಳ್ತಾರೆ. ನಾವು ಸತ್ಯದಿಂದ ಇದ್ದೇವೆ, ಹಾಗೆಯೇ ಮುಂದೆಯೂ ಇರ್ತೇವೆ ಎಂದು ಉತ್ತಮ ಭವಿಷ್ಯಕ್ಕಾಗಿ ಪ್ರಾರ್ಥಿಸಿದರು. ಮುಂದಿನ ದಿನಗಳು ಉತ್ತಮವಾಗಿರಲಿ, ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿ ಸಭೆಯನ್ನು ಮುಗಿಸಿದರು.
Dharmasthala Dharmadhikari Dr. D. Veerendra Heggade has expressed gratitude to the state government for handing over the case to the SIT, saying that the truth is now coming out. Speaking at a special prayer and Lalitha Sahasranama recitation held at the Amruthavarshini Hall in Dharmasthala, Heggade said the government’s action has helped restore faith.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm