ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿಸ್ತು ಕ್ರಮಕ್ಕೆ ಜಿಲ್ಲಾಧಿಕಾರಿ ಎಚ್ಚರಿಕೆ 

02-10-25 11:05 pm       Mangalore Correspondent   ಕರಾವಳಿ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಕಾರ್ಯವು ಈಗಾಗಲೇ ಪ್ರಾರಂಭವಾಗಿದ್ದು,  ಜಿಲ್ಲಾದ್ಯಂತ ಗಣತಿದಾರರು ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ ಮನೆ ಮನೆ ಸಮೀಕ್ಷೆ ನಿರ್ವಹಿಸುತ್ತಿದ್ದಾರೆ.

ಮಂಗಳೂರು, ಅ.2: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2025 ಕಾರ್ಯವು ಈಗಾಗಲೇ ಪ್ರಾರಂಭವಾಗಿದ್ದು,  ಜಿಲ್ಲಾದ್ಯಂತ ಗಣತಿದಾರರು ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ ಮನೆ ಮನೆ ಸಮೀಕ್ಷೆ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಈ ಸಮೀಕ್ಷಾ ಕಾರ್ಯವನ್ನು ನಿರ್ವಹಿಸಲು ಜಿಲ್ಲಾಡಳಿತದಿಂದ ಮಂಗಳೂರು ತಾಲೂಕಿನಲ್ಲಿ 1414 ಗಣತಿದಾರರನ್ನು ನೇಮಕ ಮಾಡಲಾಗಿದ್ದು, ಇದುವರೆಗೆ 425 ಗಣತಿದಾರರು  ಸಮೀಕ್ಷೆ ಕಾರ್ಯಕ್ಕೆ ಹಾಜರಾಗದೆ ಕರ್ತವ್ಯಲೋಪ ತೋರಿಸಿರುವುದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದೆ.

ಈ ಗಣತಿ ಕಾರ್ಯವನ್ನು ಸರ್ಕಾರವು ನಿಗದಿಪಡಿಸಿ ಆದೇಶಿಸಿದಂತೆ ದಿನಾಂಕ 07-10-2025ರ ಒಳಗಾಗಿ ಮುಕ್ತಾಯಗೊಳಿಸಲು ಸರ್ಕಾರದ ನಿರ್ದೇಶನ ಇರುತ್ತದೆ. ಆದುದರಿಂದ  ಸಮೀಕ್ಷೆ ಕಾರ್ಯಕ್ಕೆ ಹಾಜರಾಗದೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಗಣತಿದಾರರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಕುರಿತು ಜಿಲ್ಲಾಡಳಿತದ ತೀರ್ಮಾನವಾಗಿದೆ. ಈ ನಿಟ್ಟಿನಲ್ಲಿ ಗೈರು ಹಾಜರಾಗಿರುವ ಎಲ್ಲಾ ಗಣತಿದಾರರು ಈ ಕೂಡಲೇ ಸಮೀಕ್ಷೆ ಕಾರ್ಯಕ್ಕೆ ಹಾಜರಾಗುವಂತೆ, ತಪ್ಪಿದಲ್ಲಿ ಶಿಸ್ತುಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿಯವರು ಎಚ್ಚರಿಕೆ ನೀಡಿದ್ದಾರೆ ಎಂದು ವಾರ್ತಾ ಇಲಾಖೆಯ ಪ್ರಕಟಣೆ ತಿಳಿಸಿದೆ.

In Mangaluru taluk, 425 out of 1,414 enumerators assigned for the Karnataka State Backward Classes Commission’s Social and Educational Survey 2025 have failed to report for duty. District authorities have taken this lapse seriously, noting that the government has directed the survey to be completed by October 7, 2025.