ಬ್ರೇಕಿಂಗ್ ನ್ಯೂಸ್
07-10-25 05:04 pm Mangalore Correspondent ಕರಾವಳಿ
ಉಳ್ಳಾಲ, ಅ.7 : ಮರದ ರೆಂಬೆಗೆ ಹಗ್ಗದಿಂದ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮಾನವನ ತಲೆ ಬುರುಡೆ, ಅಸ್ಥಿಪಂಜರ ಮತ್ತು ಇತರೆ ಅವಶೇಷಗಳು ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದ ಅಕ್ಷಯ ಫಾರ್ಮ್ ನೊಳಗಡೆ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ.
ಅಕ್ಷಯ ಫಾರ್ಮ್ ಒಳಗಡೆಯ ಮರದ ಕೆಳಗಡೆ ಮಾನವನ ಅಸ್ಥಿ, ತಲೆಬುರುಡೆ ಮತ್ತು ಅವಶೇಷಗಳು ಪತ್ತೆಯಾಗಿವೆ. ಫಾರ್ಮ್ ನೊಳಗಡೆ ತೋಟದ ಕೆಲಸ ಮಾಡುತ್ತಿದ್ದ ಸ್ಥಳೀಯ ಕಾರ್ಮಿಕರಿಗೆ ಇಂದು ಬೆಳಗ್ಗೆ ಅಸ್ಥಿಗಳು ಕಾಣಸಿಕ್ಕಿವೆ. ಸ್ಥಳದಲ್ಲಿ ಹಸಿರು ಬರ್ಮುಡ ಚಡ್ಡಿ, ಹಸಿರು ಟೀ ಶರ್ಟ್ ಪತ್ತೆಯಾಗಿದ್ದು ಮೇಲ್ನೋಟಕ್ಕೆ ಇದು ಗಂಡಸಿನ ದೇಹದ ಅವಶೇಷಗಳಂತೆ ಕಾಣುತ್ತದೆ. ಮರದ ಗೆಲ್ಲಿನಲ್ಲಿ ನೈಲಾನ್ ಹಗ್ಗದ ನೇಣಿನ ಕುಣಿಕೆ ಇದ್ದು ಅದರಲ್ಲಿ ಹೆಡ್ ಫೋನ್ ಮತ್ತು ಎಲುಬುಗಳು ನೇತಾಡುತ್ತಿವೆ. ಮತ್ತೊಂದು ಗೆಲ್ಲಲ್ಲಿ ಕೇಸರಿ ಶಾಲು ಜೋತು ಬಿದ್ದಿದೆ. ಬರ್ಮುಡಾದಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆಯೆಂದು ಹೇಳಲಾಗಿದೆ.




ಸ್ಥಳಕ್ಕೆ ಉಳ್ಳಾಲ ಪೊಲೀಸರು ಮತ್ತು ಸೋಕೊ (ಸೀನ್ ಆಫ್ ಕ್ರೈಂ ಆಫೀಸರ್ಸ್) ತಂಡವು ಭೇಟಿ ನೀಡಿದ್ದು ಬುರುಡೆ, ಎಲುಬುಗಳು ಮತ್ತು ಇತರ ಅವಶೇಷಗಳನ್ನ ಸಂಸ್ಕರಿಸಿ ಪರಿಶೀಲನೆಗೆ ಕಳಿಸಲಾಗಿದೆ. ದೇಹವು ಸಂಪೂರ್ಣ ಕೊಳೆತು ಹೋಗಿದ್ದು ಎಲುಬು ಬುರುಡೆಯ ಅವಶೇಷಗಳು ಮಾತ್ರ ಉಳಿದಿದ್ದು ಅನೇಕ ತಿಂಗಳ ಹಿಂದೆ ಘಟನೆ ನಡೆದಿರುವ ಸಾಧ್ಯತೆಯಿದೆ.
ಅಕ್ಷಯ ಫಾರ್ಮ್ ಸುತ್ತಲೂ ಆವರಣ ಗೋಡೆಯಿದ್ದು ಇದರೊಳಗೆ ಘಟನೆ ಹೇಗೆ ನಡೆಯಿತೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ಅನೇಕ ಮರದ ಮಿಲ್ಲುಗಳಿದ್ದು, ಇಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಹೊರ ರಾಜ್ಯದ ವಲಸೆ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಫ್ಯಾಕ್ಟರಿಗಳಿಂದ ಬರುವ ರಾಸಾಯನಿಕ ದುರ್ವಾಸನೆಯ ಮಧ್ಯೆ ಶವ ಕೊಳೆತ ವಾಸನೆ ಯಾರಿಗೂ ತಿಳಿದು ಬಂದಿಲ್ಲವೆಂದು ಸ್ಥಳೀಯರು ಹೇಳಿದ್ದಾರೆ.
A shocking discovery was made at Akshaya Farm in Deevipura, Thalapady, under Ullal Police Station limits on Tuesday morning, where a human skull, skeleton, and other remains were found hanging from a tree. Local workers spotted the skeletal remains while working on the farm and alerted authorities.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm