ಬ್ರೇಕಿಂಗ್ ನ್ಯೂಸ್
09-10-25 01:59 pm Udupi Correspondent ಕರಾವಳಿ
ಉಡುಪಿ, ಅ.9 : 13 ವರ್ಷಗಳ ಹಿಂದೆ ಪಿಯುಸಿ ಕಲಿಯುತ್ತಿದ್ದಾಗ ಕಾಣೆಯಾಗಿದ್ದ ಯುವಕನನ್ನು ಉಡುಪಿ ಪೊಲೀಸರು ಹುಡುಕಾಡಿ ಬೆಂಗಳೂರಿನಲ್ಲಿ ಪತ್ತೆ ಮಾಡಿದ್ದು ಯುವಕನನ್ನು ಮತ್ತೆ ಮನೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ.
ಕಾರ್ಕಳ ತಾಲೂಕಿನ ಮುಂಡ್ಕೂರು ಬಳಿಯ ನಿವಾಸಿ ಪ್ರಭಾಕರ ಪ್ರಭು ಎಂಬವರ ಮಗ ಅನಂತಕೃಷ್ಣ ಪ್ರಭು(16) 13 ವರ್ಷಗಳ ಬಳಿಕ ಮರಳಿ ಗೂಡು ಸೇರಿದ ಯುವಕ. 2012 ಡಿಸೆಂಬರ್ 6ರಂದು ಮುಂಡ್ಕೂರು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಾಗ ಮನೆಯಿಂದ ದೇವಸ್ಥಾನಕ್ಕೆಂದು ಹೋಗಿ ಬರುವುದಾಗಿ ಹೇಳಿ ಹೋದವನು ವಾಪಸ್ ಮನೆಗೆ ಬಾರದೆ ಕಾಣೆಯಾಗಿದ್ದ. ಈ ಬಗ್ಗೆ ಅವರ ತಂದೆ ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.
ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದರಿಂದ ಮನೆಯವರಿಗೆ ಹೆದರಿ ಮತ್ತು ಮುಖ ತೋರಿಸಲಾಗದೆ ಮನೆಯಿಂದ ತಪ್ಪಿಸಿಕೊಂಡಿದ್ದ. ಯಾವುದೇ ಸುಳಿವು ಲಭಿಸದ ಕಾರಣ ಪೊಲೀಸರು ಹುಡುಕಾಟ ಕೈಬಿಟ್ಟಿದ್ದರು. ವಿಶೇಷ ತನಿಖಾ ತಂಡ ರಚಿಸಿ, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗಿತ್ತು. ಇತ್ತೀಚೆಗೆ ಯುವಕ ಬೆಂಗಳೂರಿನಲ್ಲಿ ವಾಸವಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ತೆರಳಿ, ಅನಂತಕೃಷ್ಣ (29) ನನ್ನು ಭೇಟಿ ಮಾಡಿದ್ದರು. ಅಲ್ಲಿಂದ ಉಡುಪಿಗೆ ಕರೆತಂದು ಪೋಷಕರ ಸುಪರ್ದಿಗೆ ಒಪ್ಪಿಸಿದ್ದಾರೆ. 13 ವರ್ಷಗಳಿಂದ ಪತ್ತೆಯಾಗದೇ ಇರುವ ಹಳೆ ಪ್ರಕರಣವನ್ನು ಉಡುಪಿ ಎಸ್ಪಿ ಹರಿರಾಮ್ ಶಂಕರ್ ಸೂಚನೆಯಂತೆ, ಡಿವೈಎಸ್‌ಪಿ ಪ್ರಭು ಡಿ.ಟಿ, ಬ್ರಹ್ಮಾವರ ಎಸ್‌ಐ ಸುದರ್ಶನ್ ದೊಡ್ಮನಿ, ಉಡುಪಿ ನಗರ ಎಸ್‌ಐ ಈರಣ್ಣ ಶಿರಗುಂಪಿ, ಹೆಡ್ ಕಾನ್ಸ್‌ಟೇಬಲ್ ಗಳಾದ ಇಮ್ರಾನ್, ಚೇತನ್, ಸಂತೋಷ್ ದೇವಾಡಿಗ ಮತ್ತು ಮಲ್ಲಯ್ಯ ಹಿರೇಮಠ ಅವರನ್ನೊಳಗೊಂಡ ತಂಡ ಭೇದಿಸಲು ಯಶಸ್ವಿಯಾಗಿದೆ.
ಪತ್ತೆಯಾಗದ ಹಳೆ ಪ್ರಕರಣಗಳನ್ನು ಕೆದಕಿ, ಕೇಸ್ ಪತ್ತೆ ಮಾಡುವ ಬಗ್ಗೆ ಎಸ್ಪಿ ಹರಿರಾಮ್ ಟಾಸ್ಕ್ ನೀಡಿದ್ದಾರೆ.
A young man who went missing 13 years ago while studying in PUC has finally been reunited with his family, thanks to the efforts of the Udupi police who traced him in Bengaluru.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm