ಬ್ರೇಕಿಂಗ್ ನ್ಯೂಸ್
09-10-25 07:23 pm Mangalore Correspondent ಕರಾವಳಿ
ಮಂಗಳೂರು, ಅ.9 : ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾದ ಪ್ರಕರಣದಲ್ಲಿ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪರವಾಗಿ ನಿರೀಕ್ಷಣಾ ಜಾಮೀನು ಕೋರಿ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸೆಶನ್ಸ್ ಕೋರ್ಟಿನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಧೀಶ ಬಸವರಾಜು ವಜಾಗೊಳಿಸಿದ್ದಾರೆ.
ಸೆ.27ರಿಂದ ನಿರಂತರವಾಗಿ ಮಹೇಶ್ ಶೆಟ್ಟಿ ಪರವಾಗಿ ಹಿರಿಯ ವಕೀಲ ದಿನೇಶ್ ಹೆಗ್ಡೆ ಉಳೆಪಾಡಿ ವಾದ ಮಂಡಿಸಿದ್ದರು. ಸರ್ಕಾರದ ಪರವಾಗಿ ಜುಡಿತ್ ಮಸ್ಕರೇನಸ್ ಅವರು ವಾದಿಸಿದ್ದರು. ಎರಡೂ ಕಡೆಯ ವಾದ ಆಲಿಸಿದ್ದ ನ್ಯಾಯಾಧೀಶರು ಅ.9ರಂದು ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದರು.
ಇದೀಗ ಸಂಜೆಯ ವೇಳೆಗೆ, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಮಾಡಿದ್ದಾರೆ. ಯಾವ ಆಧಾರದಲ್ಲಿ ಅರ್ಜಿಯನ್ನು ವಜಾ ಮಾಡಲಾಗಿದೆ ಎನ್ನುವ ಬಗ್ಗೆ ಆದೇಶದ ಪ್ರತಿಯನ್ನು ನೋಡಿಯೇ ಹೇಳಬೇಕು ಎಂದು ವಕೀಲ ದಿನೇಶ್ ಹೆಗ್ಡೆ ಪ್ರತಿಕ್ರಿಯಿಸಿದ್ದಾರೆ. ಎಸ್ಐಟಿ ಪೊಲೀಸರು ಸೆ.16ರಂದು ಮಹೇಶ್ ಶೆಟ್ಟಿ ಮನೆಯಲ್ಲಿ ಶೋಧ ನಡೆಸಿದ್ದಾಗ ಎರಡು ತಲವಾರು ಮತ್ತು ಏರ್ ಗನ್ ಪತ್ತೆಯಾಗಿತ್ತು. ಈ ಕಾರಣದಿಂದ ವಿಚಾರಣೆಗೆ ಹಾಜರಾಗಬೇಕೆಂದು ಎಸ್ಐಟಿ ನೋಟಿಸ್ ಮಾಡಿತ್ತು.
ಇದರ ನೆಪದಲ್ಲಿ ಮಹೇಶ್ ಶೆಟ್ಟಿ ಅವರನ್ನು ಬಂಧಿಸುವ ಸಾಧ್ಯತೆ ಇದ್ದುದರಿಂದ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಸುದೀರ್ಘ ವಾದ ಆಲಿಸಿದ ಬಳಿಕ ನ್ಯಾಯಾಧೀಶರು ಅರ್ಜಿಯನ್ನು ವಜಾ ಮಾಡಿದ್ದು, ಹೋರಾಟಗಾರರ ತಂಡಕ್ಕೆ ನಿರಾಸೆ ಮೂಡಿಸಿದೆ. ಈಗಾಗಲೇ ಗಡೀಪಾರು ಆದೇಶ ಪ್ರಶ್ನಿಸಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಶಸ್ತ್ರಾಸ್ತ್ರ ಪ್ರಕರಣದಲ್ಲಿಯೂ ಇನ್ನು ಹೈಕೋರ್ಟಿನಲ್ಲೇ ಜಾಮೀನಿಗೆ ಅರ್ಜಿ ಸಲ್ಲಿಸಬೇಕಿದೆ. ಇಲ್ಲದಿದ್ದರೆ ಕೋರ್ಟಿಗೆ ಶರಣಾಗಬೇಕಾಗುತ್ತದೆ.
In a major setback for activist Mahesh Shetty Timarodi, the Dakshina Kannada District and Sessions Court has rejected his anticipatory bail plea in connection with the illegal arms case. The order was delivered by Judge Basavaraju after hearing arguments from senior advocate Dinesh Hegde Ulepady, representing Mahesh Shetty, and government prosecutor Judith Mascarenhas.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am