ಬ್ರೇಕಿಂಗ್ ನ್ಯೂಸ್
28-12-20 12:36 pm Mangalore Correspondent ಕರಾವಳಿ
ಉಡುಪಿ, ಡಿಸೆಂಬರ್ 28 ; ಹನಿಮೂನ್ ತೆರಳುವ ಬದಲು ಸಮುದ್ರ ಕಿನಾರೆ ಸ್ವಚ್ಛಗೊಳಿಸಿದ ಕುಂದಾಪುರದ ನವಜೋಡಿಯನ್ನು ಪ್ರಧಾನಿ ನರೇಂದ್ರ ಮೋದಿ ತಮ್ಮ ಮನ್ ಕಿ ಬಾತ್ ನಲ್ಲಿ ಶ್ಲಾಘಿಸಿದ್ದಾರೆ.
ಬೈಂದೂರು ಮೂಲದ ನವ ಜೋಡಿ ಅನುದೀಪ್ ಹೆಗ್ಡೆ ಮತ್ತು ವಿನುಷಾ ಮದುವೆಯ ಬಳಿಕ ಹನಿಮೂನ್‌ಗೆ ತೆರಳದೆ ಸೋಮೇಶ್ವರ ಕಡಲ ಕಿನಾರೆಯನ್ನು ಸ್ವಚ್ಛಗೊಳಿಸಿ ಸುದ್ದಿಯಾಗಿದ್ದರು. ನವಜೋಡಿಯ ಸಾಮಾಜಿಕ ಕೈಂಕರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.

ನವೆಂಬರ್ 27ರಿಂದ ಡಿಸೆಂಬರ್ 7ರ ವರೆಗೆ ನವಜೋಡಿಯು ಸಮುದ್ರ ತೀರವನ್ನು ಸ್ವಚ್ಛಗೊಳಿಸುವ ಕಾರ್ಯ ಮಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಹೊಸ ದಂಪತಿಗಳ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿತ್ತು.

ಈಗ ದೇಶದ ಪ್ರಧಾನಿಯಿಂದ ಹೊಗಳಿಸಿಕೊಂಡಿರುವ ಕುಂದಾಪುರದ ನವ ಜೋಡಿ ತುಂಬ ಖುಷಿಯಲ್ಲಿದ್ದಾರೆ. ಈ ನವ ವಧುವರರು ಯುವ ಪೀಳಿಗೆಗೆ ದಾರಿದೀಪ ಎಂದು ಪ್ರಧಾನಿ ಮೋದಿ ಹೊಗಳಿದ್ದು, ಅನುದೀಪ್ ಹೆಗ್ಡೆ, ವಿನುಷಾ ದಂಪತಿ ಮತ್ತೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದಾರೆ.
ಅನುದೀಪ್ ಹೆಗ್ಡೆ ವೃತ್ತಿಯಲ್ಲಿ ಡಿಜಿಟಲ್ ಮಾರ್ಕೆಟಿಂಗ್ ಉದ್ಯೋಗಿ. ಮಿನುಷಾ ಫಾರ್ಮಾಸುಟಿಕಲ್ ಕಂಪನಿ ಉದ್ಯೋಗಿ. ಇಬ್ಬರೂ ಸಹ ಪ್ರಕೃತಿ ಪ್ರಿಯರು. ಭಾನುವಾರ ಪ್ರಧಾನಿ ನರೇಂದ್ರ ಮೋದಿಯ 'ಮನ್ ಕೀ ಬಾತ್' ತಿಂಗಳ ರೇಡಿಯೋ ಕಾರ್ಯಕ್ರಮದಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದರು. ಮನ್ ಕೀ ಬಾತ್ ಸರಣಿಯ 2020ನೇ ವರ್ಷದ ಕೊನೆಯ ಕಾರ್ಯಕ್ರಮ ಇದಾಗಿತ್ತು.
To celebrate their wedding, Anudeep and Minusha Hegde from Karnataka decided to roll up their sleeves, get some garbage bags and clean a beach near their homes. The couple cleaned over 500 kg of garbage from the Someshwara Beach located at Byndoor in Udupi district and received Appreciation from PM Modi for their work.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm