ಮೈಸೂರು, ಬೆಂಗಳೂರು, ಶಿವಮೊಗ್ಗ ಕಂಬಳಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ; ಹೋರಾಟಕ್ಕೆ ಸಂದ ಜಯ, ಬೆಳಪು ದೇವಿಪ್ರಸಾದ್ ಶೆಟ್ಟಿ ಹೇಳಿಕೆ 

14-10-25 10:36 pm       Mangalore Correspondent   ಕರಾವಳಿ

ಕಂಬಳ ಆಯೋಜನೆಗೆ ಪೇಟಾದವರು ತಕರಾರು ಮಾಡಿದ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಸರಕಾರಿ ಮಾನ್ಯತೆ ಹೊಂದಿದ ರಾಜ್ಯ ಕಂಬಳ ಅಸೋಸಿಯೇಷನ್ ಗೆ ಮೊದಲ ಜಯ ಸಿಕ್ಕಂತಾಗಿದೆ.

ಮಂಗಳೂರು, ಅ.14 : ಕಂಬಳ ಆಯೋಜನೆಗೆ ಪೇಟಾದವರು ತಕರಾರು ಮಾಡಿದ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಸರಕಾರಿ ಮಾನ್ಯತೆ ಹೊಂದಿದ ರಾಜ್ಯ ಕಂಬಳ ಅಸೋಸಿಯೇಷನ್ ಗೆ ಮೊದಲ ಜಯ ಸಿಕ್ಕಂತಾಗಿದೆ.

ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ಕಂಬಳ ಅಸೋಸಿಯೇಶನ್‌ ಅಧ್ಯಕ್ಷ ಬೆಳಪು ಡಾ.ದೇವಿಪ್ರಸಾದ್ ಶೆಟ್ಟಿ, ಇದು ನಮ್ಮ ಹೋರಾಟಕ್ಕೆ ಸಂದ ಜಯ. ಕೋಣಗಳ ಸಾಗಾಟದ ವೇಳೆ ಕೋಣಗಳಿಗೆ ಹಿಂಸೆಯಾಗುತ್ತದೆ ಎಂದು ಪೇಟಾ ಪರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದರು. ಕರ್ನಾಟಕ ಸರಕಾರದ ಅಡ್ವಕೇಟ್ ಜನರಲ್ ಶಶಿಕಕಿರಣ್ ಶೆಟ್ಟಿ, ವಿನೋದ್ ಕುಮಾರ್ ಮಧೂರು, ಧನಂಜಯ್ ಕುಮಾ‌ರ್ ದೊಡ್ಡಗುತ್ತು ಕಂಬಳದ ಪರ ವಾದ ಮಂಡಿಸಿದ್ದರು.

ಕರಾವಳಿ ಜಿಲ್ಲೆಯ ಕಂಬಳವು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತದೆ. ಸರಕಾರ ಕೂಡ ಇದಕ್ಕೆ ಮಾನ್ಯತೆ ನೀಡಿದೆ ಎಂದು ಕೋರ್ಟ್ ನಮ್ಮ ಬೇಡಿಕೆಯನ್ನು ಪುರಸ್ಕರಿಸಿದೆ. ಆಯಾ ಕಂಬಳಗಳ ಸಮಿತಿಯವರ ಹೋರಾಟ ಫಲ ನೀಡಿದೆ. ಆದರೆ, ಪಿಲಿಕುಳ ಕಂಬಳ ನಡೆಸುವ ಕುರಿತು ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ಮಾಹಿತಿ ನೀಡಿದರು.

ಕಂಬಳ ಅಸೋಸಿಯೇಷನ್ ಕೋಶಾಧಿಕಾರಿ ಮುಚ್ಚೂರು ಲೋಕೇಶ್ ಶೆಟ್ಟಿ ಮಾಹಿತಿ ನೀಡಿ, ಇದೊಂದು ಐತಿಹಾಸಿಕ ದಿನ. ಕಂಬಳ ಅಸೋಸಿಯೇಶನ್ ಗೆ ಸಂದ ಜಯ ಎಂದು ಬಣ್ಣಿಸಿದ್ದು, ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

The Karnataka High Court has granted permission to conduct Kambala events in Mysuru, Bengaluru, and Shivamogga, marking a major victory for the state’s traditional buffalo race and the Karnataka Kambala Association. The events had been halted following objections raised by PETA, which alleged cruelty to animals.