ಬ್ರೇಕಿಂಗ್ ನ್ಯೂಸ್
16-10-25 10:37 pm Mangalore Correspondent ಕರಾವಳಿ
ಮಂಗಳೂರು, ಅ.16 : 1971ರ ಭಾರತ - ಪಾಕ್ ಯುದ್ಧದಲ್ಲಿ ಭಾಗವಹಿಸಿದ ಯುದ್ಧ ವೀರ ಗರೋಡಿ ತಿಮ್ಮಪ್ಪ ಆಳ್ವ(85) ಗುರುವಾರ ಸಂಜೆ ನಗರದ ಕುಂಟಿಕಾನ ಬಳಿಯ ಲೋಹಿತ್ ನಗರದ ತಮ್ಮ ನಿವಾಸದಲ್ಲಿ ನಿಧನ ಹೊಂದಿದರು.
ಮೃತರ ದೇಹವನ್ನು ಅವರ ಇಚ್ಛೆಯಂತೆ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾನ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅವರ ಪುತ್ರ ಮೃತರಾಗಿದ್ದು ಪತ್ನಿ, ಒಬ್ಬರು ಮಗಳು ಆಯುರ್ವೇದಿಕ್ ವೈದ್ಯರಾಗಿದ್ದು ಮತ್ತು ಮೊಮ್ಮಕ್ಕಳು ಇದ್ದಾರೆ. ಜಿಟಿ ಆಳ್ವರು ಭೂಸೇನೆಯಲ್ಲಿ ಸೇವೆ ನಿರ್ವಹಿಸಿದ್ದು 1971ರ ಯುದ್ಧದಲ್ಲಿ ತೀವ್ರ ಗಾಯಗೊಂಡು ಚೇತರಿಕೆ ಕಂಡ ಬಳಿಕವೂ ಹತ್ತು ವರ್ಷ ಕಾಲ ದೇಶ ಸೇವೆಯಲ್ಲಿ ತೊಡಗಿದ್ದರು. 1982ರಲ್ಲಿ ಸೇನೆಯಿಂದ ಸ್ವಯಂ ನಿವೃತ್ತರಾಗಿ ಬಳಿಕ ಮಂಗಳೂರಿಗೆ ಬಂದು ಫುಡ್ ಇನ್ಸ್ ಪೆಕ್ಟರ್ ಆಗಿದ್ದರು. ಬೆಳ್ತಂಗಡಿ, ಬಂಟ್ವಾಳದಲ್ಲಿ ಕರ್ತವ್ಯ ನಿರ್ವಹಿಸಿ 2000ನೇ ಇಸವಿಯಲ್ಲಿ ನಿವೃತ್ತರಾಗಿದ್ದರು.
ಇತ್ತೀಚೆಗೆ ಅವರ ಅನುಭವ ಕಥನ 'ಗರೋಡಿ ಮನೆಯಿಂದ ಸೇನಾ ಗರಡಿಗೆ' ಪ್ರಕಟವಾಗಿತ್ತು. ತುಳುನಾಡಿನ ಸಾಮಾನ್ಯ ಕೃಷಿ ಕುಟುಂಬ ಒಂದರಲ್ಲಿ ಜನಿಸಿದ ಯುವಕ ದೇಶ ಕಾಯುವ ಸೈನಿಕನಾಗಿದ್ದಲ್ಲದೆ, 1971ರ ಪಾಕಿಸ್ತಾನ ಜೊತೆಗಿನ ಯುದ್ಧದಲ್ಲಿ ಪಾಲ್ಗೊಂಡು ಜೀವನ್ಮರಣ ಸ್ಥಿತಿಗೆ ಒಳಗಾಗಿದ್ದರು. ಹೆಲಿಕಾಫ್ಟರ್ ನಲ್ಲಿ ಯುದ್ಧ ಶಿಬಿರಕ್ಕೆ ಪ್ರಯಾಣಿಸುವ ವೇಳೆ ಪಾಕ್ ಸೈನಿಕರ ಫಿರಂಗಿ ದಾಳಿಗೆ ತುತ್ತಾಗಿ ಚಿತ್ತಗಾಂಗ್ ಪ್ರದೇಶದ ಕಾಡಿನಲ್ಲಿ ಬಿದ್ದು ಜೀವನ್ಮರಣ ಹೋರಾಟ ನಡೆಸಿ ಬದುಕಿ ಉಳಿದಿದ್ದರು. ಇವೆಲ್ಲದರ ಅನುಭವ ಕಥನ ಕಿರು ಪುಸ್ತಕವಾಗಿ ಪ್ರಕಟವಾಗಿದೆ.
1971ರ ಭಾರತ -ಪಾಕ್ ಯುದ್ಧದಲ್ಲಿ ಭಾರತ ಜಗತ್ತು ಬೆರಗಾಗುವ ರೀತಿಯಲ್ಲಿ ಜಯ ಗಳಿಸಿತ್ತು. ದೇಶದ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿಯವರ ದಿಟ್ಟ ನಿರ್ಧಾರ, ಅಂತಾರಾಷ್ಟ್ರೀಯ ಸಂಬಂಧಗಳನ್ನು ನಿಭಾಯಿಸಿದ ಚಾಣಾಕ್ಷತೆ, ಸೇನಾ ದಂಡನಾಯಕ ಮಾಣೆಕ್ ಶಾ ರೂಪಿಸಿದ ಯುದ್ಧ ತಂತ್ರ ಬೆರಗಿನದ್ದು. ಪಾಕ್ ವಿರುದ್ಧದ ಮೂರೂ ಯುದ್ಧದಲ್ಲಿ ಭಾಗವಹಿಸಿದ್ದ ಹಿರಿಮೆ ಜಿ.ಟಿ ಆಳ್ವ ಅವರದ್ದು. ಡೆಹ್ರಾಡೂನ್, ನಾಗಾಲ್ಯಾಂಡ್, ಉತ್ತರ ಪ್ರದೇಶ, ಅಸ್ಸಾಂ ಇನ್ನಿತರ ಕಡೆಗಳಲ್ಲಿ ಅವರು ಸೇವೆಗೈದಿದ್ದರು.
Former Indian Army soldier Garodi Thimmappa Alva (85), a veteran of the 1971 India–Pakistan war, passed away on Thursday evening at his residence in Lohit Nagar near Kuntikana, Mangaluru. A native of a farming family, Alva served in the Army for over a decade and miraculously survived after falling from a helicopter during enemy shelling in the Chittagong region.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm