ಬ್ರೇಕಿಂಗ್ ನ್ಯೂಸ್
30-10-25 08:06 pm Mangalore Correspondent ಕರಾವಳಿ
ಮಂಗಳೂರು, ಅ.30 : ಧರ್ಮಸ್ಥಳದಲ್ಲಿ ಶವ ಹೂತಿದ್ದಾರೆಂಬ ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ತಂಡಕ್ಕೆ ಎಸ್ಐಟಿ ಮತ್ತೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದೆ. ವಿಠಲ ಗೌಡ ಅವರಿಗೆ 31ಕ್ಕೆ, ಉಳಿದಂತೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್ ಹಾಗೂ ಜಯಂತ್ ಟಿ ಅವರಿಗೆ ನವೆಂಬರ್ 3ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.
ಮಟ್ಟೆಣ್ಣನವರ್ ಮತ್ತು ಜಯಂತ್ ಅವರ ಬೆಂಗಳೂರು ಹಾಗೂ ಬೆಳ್ತಂಗಡಿಯಲ್ಲಿರುವ ಮನೆಗಳಿಗೆ ಖುದ್ದು ತೆರಳಿ ನೋಟಿಸ್ ನೀಡಲಾಗಿದೆ. ವಾಟ್ಸಾಪ್, ಮೈಲ್ ಮೂಲಕ ನೋಟಿಸ್ ಕೊಡುತ್ತಾರೆ, ಇದನ್ನೆಲ್ಲಾ ರದ್ದು ಮಾಡಬೇಕೆಂದು ತಿಮರೋಡಿ ಗ್ಯಾಂಗ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ ಬೆನ್ನಲ್ಲೇ ಮನೆಗೇ ತೆರಳಿ ನೋಟಿಸ್ ನೀಡಲಾಗಿದೆ. ನೋಟಿಸಿನಲ್ಲಿ ಬೆಳ್ತಂಗಡಿ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.
ಮೊದಲ ನೋಟಿಸ್ಗೆ ನಾಲ್ವರು ಗೈರಾದ ಕಾರಣ, ಪೊಲೀಸ್ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಮೊನ್ನೆ ಸುಜಾತ ಭಟ್ ಮಾತ್ರ ವಿಚಾರಣೆಗೆ ಹಾಜರಾಗಿದ್ದರು. ಬೆಂಗಳೂರಿನ ಸಹಕಾರ ನಗರದಲ್ಲಿರುವ ಗಿರೀಶ್ ಮಟ್ಟಣ್ಣವರ್, ಬೆಂಗಳೂರು ಹಾಗೂ ಮಂಗಳೂರಿನಲ್ಲಿರುವ ಜಯಂತ್ ಟಿ ನಿವಾಸ, ಧರ್ಮಸ್ಥಳದ ವಿಠಲ ಗೌಡ ನಿವಾಸ ಹಾಗೂ ಉಜಿರೆ ಬಳಿಯ ತಿಮರೋಡಿಯ ಮಹೇಶ್ ಶೆಟ್ಟಿ ಅವರ ಮನೆಗೆ ತೆರಳಿ, ಮನೆಯಲ್ಲಿ ಇಲ್ಲದ ಕಾರಣ ಗೋಡೆಗೆ ಅಂಟಿಸಿ ತೆರಳಿದ್ದಾರೆ.
ನೊಟಿಸ್ ನಲ್ಲಿ ವಿಠಲ ಗೌಡರಿಗೆ ಅ.31 ರಂದೇ ವಿಚಾರಣೆಗೆ ಹಾಜರಾಗಲು ಷರತ್ತು ಹಾಕಲಾಗಿದೆ. ಕಳೆದ ಸೋಮವಾರ ಐವರಿಗೂ ಒಂದೇ ದಿನ ಹಾಜರಾಗುವಂತೆ ಹೇಳಲಾಗಿತ್ತು. ಆಗ ವಕೀಲರ ಮೂಲಕ ಕಾಲಾವಕಾಶ ಕೇಳಿದ್ದರು. ಆದರೆ ಈ ನಡುವೆ, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿ ನೋಟಿಸ್ ರದ್ದು ಮಾಡುವಂತೆ ಮತ್ತು ತಮ್ಮ ಮೇಲಿನ ಪ್ರಕರಣ ರದ್ದುಪಡಿಸುವಂತೆ ಅರ್ಜಿ ಸಲ್ಲಿಸಿದ್ದಾರೆ. ಇದರ ನಡುವೆ ಮತ್ತೆ ಎಸ್ಐಟಿ 39/2025 ಕೇಸ್ ನಡಿ ವಿಚಾರಣೆಗೆ ಬರಲು ಎರಡನೇ ನೋಟಿಸ್ ನೀಡಿದೆ. ಈ ನೋಟಿಸ್ ತಪ್ಪಿಸಿದರೆ ವಶಕ್ಕೆ ಪಡೆದು ಕರೆತರುವ ಸಾಧ್ಯತೆಯಿದೆ.
In the case related to the alleged burial of a body in Dharmasthala, the Special Investigation Team (SIT) has once again issued summons to Mahesh Shetty Timarodi and his associates to appear for questioning.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm