ಬ್ರೇಕಿಂಗ್ ನ್ಯೂಸ್
01-11-25 11:02 pm Mangalore Correspondent ಕರಾವಳಿ
ಮಂಗಳೂರು, ನ.1 : ಉಡುಪಿ -ಕಾಸರಗೋಡು 440 ಕೆ.ವಿ. ವಿದ್ಯುತ್ ಲೈನ್ ಕಾಮಗಾರಿಯ ಸಂದರ್ಭದಲ್ಲಿ ರೈತರ ಕೃಷಿ ನಾಶ ಮಾಡಿದ್ದಲ್ಲದೆ ಪೊಲೀಸ್ ಬಲವನ್ನು ಬಳಸಿಕೊಂಡು ರೈತರ ಮೇಲೆ ದೌರ್ಜನ್ಯವೆಸಗಿದ್ದಾರೆಂದು ಸ್ಟಾರ್ ಲೈಟ್ ವಿದ್ಯುತ್ ಕಂಪೆನಿ ವಿರುದ್ಧ ಬೃಹತ್ ಸಂಖ್ಯೆಯಲ್ಲಿ ಸೇರಿದ ರೈತರು ಶನಿವಾರ ಮೂಡುಬಿದ್ರೆ ಬಳಿಯ ಅಶ್ವತ್ಥಪುರದಲ್ಲಿ ಪ್ರತಿಭಟನಾ ಜಾಥಾ, ಸಭೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಶ್ವತ್ಥಪುರ ಸೀತಾರಾಮ ದೇವಸ್ಥಾನದ ಬಳಿ ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿದ ರೈತರು ಕಂಪೆನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಒಂಟಿಮಾರ್ ಪ್ರದೇಶದಲ್ಲಿ ಬೆಳೆ ಹಾನಿಗೆ ಒಳಗಾದ ರೈತ ಭಾಸ್ಕರ ಶೆಟ್ಟಿ ಅವರ ಜಮೀನಿನ ವರೆಗೂ ಜಾಥಾ ನಡೆಸಿದರು. ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಕೇಮಾರು ಸಾಂದೀಪನಿ ಮಠದ ಈಶ ವಿಠಲದಾಸ ಸ್ವಾಮೀಜಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ಸರ್ಕಾರಗಳು ಕಸದ ಬುಟ್ಟಿಯಂತೆ ಭಾವಿಸಿದ್ದು ಇಲ್ಲಿನ ಜನರಿಗೆ ಅಗತ್ಯವೇ ಇಲ್ಲದ ಕಾರ್ಖಾನೆಗಳನ್ನು ಇಲ್ಲಿಗೆ ತಂದು ಹಾಕಿ ಜನರ ನೆಮ್ಮದಿ ಹಾಳು ಮಾಡುತ್ತಿದೆ. ಇದು ನಮ್ಮ ದುರಾದೃಷ್ಟ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಇತ್ತೀಚಿನ ದಿನಗಳಲ್ಲಿ ಕೋಟಿ ವಿದ್ಯೆಗಿಂತ ಲೂಟಿ ವಿದ್ಯೆಯೇ ಮೇಲು ಎಂಬಂತಾಗಿದ್ದು ರೈತರಿಗೆ ಅನ್ಯಾಯವಾಗುತ್ತಿದೆ. ರೈತನ ಅಭಿವೃದ್ಧಿಯೇ ದೇಶದ ಅಭಿವೃದ್ಧಿ. ಕೃಷಿ ಅಭಿವೃದ್ಧಿಯಾದರೆ ಮಾತ್ರ ಮನುಷ್ಯ ಪಾಣಿ ಪಕ್ಷಿ ಸಂಕುಲ ಅಭಿವೃದ್ಧಿಯಾಗುತ್ತದೆ. ಕೃಷಿ ನಾಶವಾದರೆ ಮನುಕುಲದ ಜೊತೆಗೆ ಸಂಬಂಧ ಹೊಂದಿರುವ ಎಲ್ಲವೂ ನಾಶವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಬಳಿಕ ಕಟೀಲು ದುರ್ಗಾಪರಮೇಶ್ವರಿ ದೇವಳದ ಅನುವಂಶಿಕ ಅರ್ಚಕರಾದ ಅನಂತ ಅಸ್ರಣ್ಣ ಮಾತನಾಡಿದರು. ಸಭೆಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಮುಖಂಡ ನಾರಾಯಣ ಸ್ವಾಮಿ, ಒಬ್ಬ ರೈತನ ಸಮಸ್ಯೆ ಎಲ್ಲ ರೈತರ ಸಮಸ್ಯೆ. ಒಬ್ಬರ ಸಮಸ್ಯೆಗೆ ಎಲ್ಲರೂ ಒಗ್ಗೂಡಿ ಹೋರಾಡಬೇಕಿದೆ. ರೈತರ ಅನುಮತಿ ಇಲ್ಲದೆ ಆಕ್ರಮಿಸಿಕೊಂಡು ಬೆಳೆ ನಾಶ ಮಾಡಿಕೊಂಡು ತಮ್ಮ ಕಾರ್ಯ ಸಾಧನೆ ಮಾಡುತ್ತಿದೆ. ಕಂಪೆನಿಗೆ ರೈತರ ಜಮೀನಿಗೆ ಅನಧಿಕೃತ ದಾಳಿ ಮಾಡಿ ಬೆಳೆ ಹಾನಿ ಮಾಡಲು ಪರವಾನಿಗೆ ನೀಡಿದವರು ಯಾರು ಎಂದು ಪ್ರಶ್ನಿಸಿದರು. ಸರಕಾರದ ಅವೈಜ್ಞಾನಿಕ ನಿರ್ಧಾರಗಳಿಂದ ರೈತರು ಕೃಷಿ ಬಿಟ್ಟು ಕಾರ್ಮಿಕರಾಗುತ್ತಿದ್ದಾರೆ. ಆದಷ್ಟು ಕೃಷಿ ಭೂಮಿಗಳಿಂದ ದೂರದಿಂದ ಈ ಕಾಮಗಾರಿ ನಡೆಸಬೇಕು. ಈ ಕಾಮಗಾರಿಗೆ ರೈತರು ಒಂದು ಇಂಚೂ ಜಾಗವನ್ನು ನೀಡುವುದಿಲ್ಲ ಎಂದು ಕಂಪೆನಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸುಚರಿತ ಶೆಟ್ಟಿ, ಕೃಷ್ಣಪ್ರಸಾದ್ ತಂತ್ರಿ, ಗ್ರಾ.ಪಂ. ಅಧ್ಯಕ್ಷೆ ಶಾಲಿನಿ, ಪ್ರವೀಣ್ ಭಂಡಾರಿ, ವಸಂತ ಭಟ್, ರವಿರಾಜ್, ಸುರೇಶ್ ಶೆಟ್ಟಿ ದೋಟ, ಬಾಲಕೃಷ್ಣ ದೇವಾಡಿಗ, ಭಾಸ್ಕರ ಶೆಟ್ಟಿ, ಅಲ್ಫೋನ್ಸ್ ನಿಡ್ಡೋಡಿ, ಇನ್ನಾ ಚಂದ್ರಹಾಸ ಶೆಟ್ಟಿ, ಹೊನ್ನಪ್ಪಗೌಡ, ಕೃಷ್ಣಮೂರ್ತಿ, ಜಾಕಿಂ ಪಿಂಟೊ, ಸುದೇಶ್ ದೇವಾಡಿಗ, ಹರೀಶ್ ಉಳ್ಳಾಲ ಮತ್ತಿತರ ಪ್ರಮುಖರು ಭಾಗವಹಿಸಿದ್ದರು.
A large group of farmers staged a protest at Ashwatthapura near Moodbidri on Saturday against the Udupi–Kasaragod 440 kV power line project, accusing the Star Light Power Company of destroying agricultural lands and using police force to suppress farmers’ voices.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm