ಬ್ರೇಕಿಂಗ್ ನ್ಯೂಸ್
04-11-25 05:03 pm Mangalore Correspondent ಕರಾವಳಿ
ಮಂಗಳೂರು, ನ.4 : ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖಾ ಪ್ರಕ್ರಿಯೆ ಬಗ್ಗೆ ರಾಜ್ಯ ಮಹಿಳಾ ಆಯೋಗ ಅತೃಪ್ತಿ ವ್ಯಕ್ತಪಡಿಸಿದ್ದು ದೂರುದಾರ ಚಿನ್ನಯ್ಯ ಹೇಳಿಕೆಗೆ ಮಾತ್ರ ತನಿಖೆಯನ್ನು ಸೀಮಿತಗೊಳಿಸದೆ ಧರ್ಮಸ್ಥಳಕ್ಕೆ ಸಂಬಂಧಿಸಿ ರಾಜ್ಯದ ಇತರೆಡೆ ದಾಖಲಾಗಿರುವ ಪ್ರಕರಣಗಳು ಸೇರಿದಂತೆ ಮಹಿಳೆಯರಿಗೆ ಸಂಬಂಧಿಸಿದ ಎಲ್ಲ ಅಸಹಜ ಪ್ರಕರಣಗಳ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಹೇಳಿದೆ.
ಈ ಬಗ್ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು ಈ ಹಿಂದೆ ತಾವು ಬರೆದ ಪತ್ರವನ್ನು ಆಧರಿಸಿ ಸರ್ಕಾರ ಎಸ್ಐಟಿ ರಚಿಸಿರುವುದನ್ನು ಉಲ್ಲೇಖಿಸಿದ್ದಲ್ಲದೆ, ಎಸ್ಐಟಿ ರಚನೆಯ ಆದೇಶದಲ್ಲಿ ಮಹಿಳೆಯರಿಗೆ ಸಂಬಂಧಿಸಿದ ಎಲ್ಲ ರೀತಿಯ ಅಸಹಜ ಪ್ರಕರಣಗಳ ಬಗ್ಗೆ ತನಿಖೆಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.



ಸರ್ಕಾರದ ಆದೇಶದಲ್ಲಿ ಕೇವಲ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ 39-2025, ಕಲಂ 211(ಎ) ಬಿಎನ್ಎಸ್ ಪ್ರಕರಣದ ತನಿಖೆಗೆ ಸೀಮಿತವಾಗಿರಿಸದೆ ಮಹಿಳೆಯರಿಗೆ ಸಂಬಂಧಿಸಿದ ಪ್ರಕರಣಗಳ ಸಮಗ್ರ ತನಿಖೆಯನ್ನು ಎಸ್ಐಟಿ ಮಾಡಬೇಕೆಂಬುದನ್ನು ಸೂಚಿಸುತ್ತದೆ. ಹೀಗಿದ್ದರೂ ಈವರೆಗೆ ಎಸ್ಐಟಿ ಅಂತಹ ಪ್ರಕರಣಗಳನ್ನು ತನಿಖೆ ಮಾಡುತ್ತಿರುವ ಬಗ್ಗೆ ಯಾವುದೇ ಮಾಹಿತಿ ಕಂಡುಬರುತ್ತಿಲ್ಲ.
ಮಾಧ್ಯಮಗಳ ವರದಿಯನ್ನು ಗಮನಿಸಿದಾಗ ಎಸ್ಐಟಿ ರಚನೆಯಾದಾಗಿನಿಂದ ಕೇವಲ ನ್ಯಾಯಾಲಯದ ಮುಂದೆ ಹೇಳಿಕೆ ನೀಡಿದ ಚಿನ್ನಯ್ಯ ಎಂಬ ವ್ಯಕ್ತಿಯ ಹೇಳಿಕೆಯನ್ನು ಆಧರಿಸಿ ಮಾನವ ಕಳೇಬರಗಳ ಉತ್ಖನನಕ್ಕೆ ಸೀಮಿತವಾಗಿ ಆತನ ಹೇಳಿಕೆಯ ಮಿತಿಯೊಳಗೆ ತನಿಖೆ ನಡೆದಿರುವುದು ಕಂಡುಬಂದಿದೆ. ಉತ್ಖನನ ಸಂದರ್ಭದಲ್ಲಿ ದೊರೆತ ಅಸ್ಥಿಪಂಜರಗಳ ಅವಶೇಷಗಳ ಬಗ್ಗೆ, ಸಾವು ಸಂಭವಿಸಿದ ಕಾರಣದ ಬಗ್ಗೆ, ಅವುಗಳಲ್ಲಿ ಮಹಿಳೆಯರ ಅಸ್ಥಿಪಂಜರಗಳನ್ನು ಗುರುತಿಸುವ ಬಗ್ಗೆ, ಕಾಡಿನ ಪ್ರದೇಶದಲ್ಲಿ ಅಸ್ಥಿಪಂಜರ ಪತ್ತೆಯಾಗಲು ಕಾರಣಗಳ ಬಗ್ಗೆ ತನಿಖೆ ನಡೆದಿಲ್ಲ.
ಎಸ್ಐಟಿ ರಚನೆಯ ಆಯೋಗದ ಕೋರಿಕೆ ಮತ್ತು ನಂತರದ ಸರ್ಕಾರದ ಆದೇಶಕ್ಕೆ ಅನುಗುಣವಾಗಿ ಕೂಡಲೇ ಮಹಿಳೆಯರು ಮತ್ತು ಯುವತಿಯರ ನಾಪತ್ತೆ, ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನೂ ಸೇರಿದಂತೆ ಅಸಹಜ ಮತ್ತು ಅನುಮಾನಾಸ್ಪದ ಸಾವುಗಳು ಮತ್ತಿತರ ಪ್ರಕರಣಗಳ ಸಮಗ್ರ ತನಿಖೆಯನ್ನು ಕೈಗೊಳ್ಳುವಂತೆ ಅಥವಾ ಕೈಗೊಂಡಿದ್ದರೆ ಈ ಬಗ್ಗೆ ಮಾಹಿತಿಯನ್ನು ಆಯೋಗಕ್ಕೆ ನೀಡುವಂತೆ ಕೋರಲಾಗಿದೆ ಎಂದು ಸರ್ಕಾರಕ್ಕೆ ಬರೆದ ಪತ್ರದಲ್ಲಿ ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.
The Karnataka State Women’s Commission has expressed dissatisfaction with the progress of the Special Investigation Team (SIT) probe into the Dharmasthala buried body case. The commission has urged that the investigation should not be limited to the statements made by complainant Chinnayya, but should also cover all suspicious and unnatural deaths involving women linked to Dharmasthala and its surrounding areas.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
04-12-25 06:39 pm
Mangalore Correspondent
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
Cm Siddaramaiah Mangalore: ಆಹ್ವಾನ ಇಲ್ಲದೆ ನಾನೇ...
03-12-25 10:35 pm
Mangalore, CM Siddaramaiah, High Court: ಮಂಗಳೂ...
03-12-25 07:23 pm
CM Siddaramaiah, Mangalore, Narayan Guru: ದೇವ...
03-12-25 04:52 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm