ಬ್ರೇಕಿಂಗ್ ನ್ಯೂಸ್
05-11-25 07:49 pm Mangalore Correspondent ಕರಾವಳಿ
ಮಂಗಳೂರು, ನ.5 : ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ ಅವರು ತನ್ನ ಜಾನಪದೀಯ ಸಂಶೋಧನೆಯ ಕ್ಷೇತ್ರ ಕಾರ್ಯದ ಅನುಭವಗಳನ್ನು ದಾಖಲಿಸುವ ಮೂಲಕ ಸಂಶೋಧನಾ ಕ್ಷೇತ್ರಕ್ಕೆ ಬರುವವರಿಗೆ ಬಹುದೊಡ್ಡ ಮಾರ್ಗದರ್ಶಿ ಕೊಡುಗೆಯನ್ನು ನೀಡಿದ್ದಾರೆ, ತುಳುವಿನಲ್ಲಿ ಇದೊಂದು ಮಹತ್ವದ ಕೃತಿಯಾಗಲಿದೆ ಎಂದು ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಆಶಾಲತಾ ಸುವರ್ಣ ಹೇಳಿದರು.
ತುಳು ಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ಡಾ.ಇಂದಿರಾ ಹೆಗ್ಗಡೆ ಅವರ ‘ಬಾರಗೆರೆ ಬರಂಬು ತುಳುವೆರೆ ಪುಂಚ ನಾಡೊಂದು’ ತುಳು ಕೃತಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಜಾನಪದೀಯ ಅಧ್ಯಯನ ಕ್ಷೇತ್ರ ಕಾರ್ಯಗಳ ಸಂದರ್ಭದಲ್ಲಿ ಮಹಿಳೆಯರು ಸಾಕಷ್ಟು ಎಡರು ತೊಡಕುಗಳನ್ನು ಎದುರಿಸುವ ಸಂದರ್ಭ ಉಂಟಾಗುತ್ತಿತ್ತು. ಈ ಎಲ್ಲಾ ಸವಾಲುಗಳನ್ನು ಧೈರ್ಯದಿಂದ ಎದುರಿಸಿ ಮುನ್ನಡೆದು ಡಾ.ಇಂದಿರಾ ಹೆಗ್ಗಡೆ ಅವರು ಹಲವು ಮಹತ್ವದ ಕೃತಿಗಳನ್ನು ನೀಡಿರುವುದು ಪ್ರಶಂಸನೀಯ ಎಂದು ಡಾ.ಆಶಾಲತಾ ಸುವರ್ಣ ಅಭಿಪ್ರಾಯಪಟ್ಟರು.
ಲೇಖಕಿ ಡಾ.ಇಂದಿರಾ ಹೆಗ್ಗಡೆ ಮಾತನಾಡಿ, ತಾನು ಕನ್ನಡದಲ್ಲಿ ಹಲವು ಕೃತಿಗಳನ್ನು ಬರೆದರೂ ತುಳುವಿನಲ್ಲಿ ಬರೆದ ‘ಬಾರಗೆರೆ ಬರಂಬು ತುಳುವೆರೆ ಪುಂಚ ನಾಡೊಂದು’ ಕೃತಿ ನನಗೆ ಹೃದಯಕ್ಕೆ ಹಾಗೂ ಮನಸ್ಸಿಗೆ ತುಂಬಾ ಆಪ್ತವಾಯಿತು, ತುಳುವಿನಲ್ಲಿ ಬರೆಯುವುದು ತುಂಬಾ ಆಪ್ತವಾದ ವಿಚಾರ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಡಾ.ಸಮೀರ್ ಮಾಡ, ಹಿರಿಯ ಲೇಖಕಿ ಪ್ರೇಮಾ ಅಜ್ರಿ ಕಾರ್ಕಳ, ಚೇಳೈರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ.ಜ್ಯೋತಿ ಚೇಳೈರು, ನಿವೃತ್ತ ಪ್ರಾಂಶುಪಾಲ ಕೃಷ್ಣಮೂರ್ತಿ ಪಿ. ಅವರು ಕೃತಿಯ ಬಗ್ಗೆ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ತುಳುವಿನಲ್ಲಿ ಹೊಸದಾಗಿ ಸಂಶೋಧನೆ ಮಾಡಲು ಹೊರಟವರಲ್ಲಿ ಕ್ಷೇತ್ರ ಕಾರ್ಯದ ಅನುಭವದ ಕೊರತೆ ಇದೆ, ತಳಸ್ಪರ್ಶಿಯಾದ ಕ್ಷೇತ್ರ ಅಧ್ಯಯನದ ಮೂಲಕ ಸಂಶೋಧನೆ ನಡೆಸುವುದಕ್ಕೆ ಇಂದಿರಾ ಹೆಗ್ಗಡೆಯವರು ನಿದರ್ಶನವಾಗಿದ್ದಾರೆ ಎಂದರು. ಅಕಾಡೆಮಿಯ ಸದಸ್ಯ ಸಂತೋಷ್ ಶೆಟ್ಟಿ ಹಿರಿಯಡ್ಕ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
The release of Dr. Indira Heggade’s latest Tulu work marks a major milestone in regional research literature. Scholars described the book as a guiding light for young researchers and a rich documentation of her field experiences in folklore studies.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am