ಬ್ರೇಕಿಂಗ್ ನ್ಯೂಸ್
12-11-25 06:56 pm Mangalore Correspondent ಕರಾವಳಿ
ಮಂಗಳೂರು, ನ.12: ನವ ಮಂಗಳೂರು ಬಂದರು ಪ್ರಾಧಿಕಾರ (ಎನ್ಎಂಪಿಎ) ಸ್ಥಾಪನೆಗೊಂಡು 50 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ನ.13ರಂದು ಗೋಲ್ಡನ್ ಜುಬಿಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಕೇಂದ್ರ ಸರ್ಕಾರದ ಅಧಿಕೃತ ಕಾರ್ಯಕ್ರಮ ಆಗಿದ್ದರೂ, ಆಹ್ವಾನ ಪತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಸ್ಥಳೀಯ ಶಾಸಕ ಪ್ರತಿನಿಧಿಗಳ ಹೆಸರನ್ನು ಉಲ್ಲೇಖಿಸದೆ ನಿರ್ಲಕ್ಷಿಸಿರುವುದು ಭಾರೀ ಆಕ್ಷೇಪಕ್ಕೆ ಕಾರಣವಾಗಿದೆ.
ಕಾರ್ಯಕ್ರಮಕ್ಕೆ ಕೇಂದ್ರ ಬಂದರು ಮತ್ತು ಜಲಸಾರಿಗೆ ಸಚಿವ ಸರ್ಬಾನಂದ ಸೋನೋವಾಲ್ ಮತ್ತು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರನ್ನು ಮುಖ್ಯ ಅತಿಥಿಯಾಗಿ ಕರೆದಿದ್ದಾರೆ. ಇದರ ಜೊತೆಗೆ ಸಣ್ಣ ಕೈಗಾರಿಕೆ ಮತ್ತು ಕಾರ್ಮಿಕ ಇಲಾಖೆಯ ಸಚಿವೆ ಶೋಭಾ ಕರಂದ್ಲಾಜೆ ಮತ್ತು ರಾಜ್ಯ ಮೀನುಗಾರಿಕೆ ಮತ್ತು ಬಂದರು ಇಲಾಖೆಯ ಸಚಿವ ಮಂಕಾಳ ವೈದ್ಯ ಅವರನ್ನು ಆಹ್ವಾನಿಸಿದ್ದಾರೆ. ಇವರೊಂದಿಗೆ ಹಾಲಿ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ, ಮಾಜಿ ಸಂಸದ ನಳಿನ್ ಕುಮಾರ್, ಸ್ಥಳೀಯ ಶಾಸಕರಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಅವರನ್ನು ಆಹ್ವಾನಿಸಲಾಗಿದೆ.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರನ್ನಾಗಲೀ, ಉಸ್ತುವಾರಿ ಸಚಿವರ ಹೆಸರನ್ನು ಆಹ್ವಾನ ಪತ್ರದಲ್ಲಿ ಮುದ್ರಿಸಿಲ್ಲ. ಹಾಲಿ ಜನಪ್ರತಿನಿಧಿಗಳನ್ನು ಬಿಟ್ಟು ಬಿಜೆಪಿಯ ಮಾಜಿ ಸಂಸದ ನಳಿನ್ ಕುಮಾರ್ ಹೆಸರನ್ನು ಆಹ್ವಾನ ಪತ್ರದಲ್ಲಿ ಸೇರಿಸಿರುವುದು ಕಾಂಗ್ರೆಸಿಗರ ಕಣ್ಣು ಕೆಂಪಾಗಿಸಿದ್ದು ಸಚಿವ ದಿನೇಶ್ ಗುಂಡೂರಾವ್ ಅವರು ಕೇಂದ್ರ ಬಂದರು ಇಲಾಖೆಯ ಕಾರ್ಯದರ್ಶಿಯಿಂದ ಹಿಡಿದು ಸಚಿವ ಸರ್ಬಾನಂದ ಸೋನೋವಾಲ್, ರಾಜ್ಯ ಮುಖ್ಯ ಕಾರ್ಯದರ್ಶಿ, ಎನ್ಎಂಪಿಎ ಅಧ್ಯಕ್ಷ ವೆಂಕಟರಮಣ ಅಕ್ಕರಾಜು ಅವರಿಗೆ ಪತ್ರ ಬರೆದು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
‘ಮಂಗಳೂರು ಬಂದರಿನ ಗೋಲ್ಡನ್ ಜುಬಿಲಿ ಕಾರ್ಯಕ್ರಮದ ಆಹ್ವಾನ ಪತ್ರದಲ್ಲಿ ಶಿಷ್ಟಾಚಾರವನ್ನು ಸಂಪೂರ್ಣ ಉಲ್ಲಂಘಿಸಿದ್ದೀರಿ, ಆದರೆ ಇಲ್ಲಿ ಕಣ್ತಪ್ಪಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಹೆಸರು ತಪ್ಪಿ ಹೋಗಿರುವಂತೆ ಕಾಣುತ್ತಿಲ್ಲ. ಬಿಜೆಪಿಯ ಹಾಲಿ ಮತ್ತು ಮಾಜಿ ಸಂಸದರ ಹೆಸರನ್ನೂ ಸೇರಿಸಿದ್ದೀರಿ. ಜೊತೆಗೆ, ಮಂಗಳೂರಿನ ಹಿಂದು ಸಂಘಟನೆಗಳ ಪ್ರಮುಖರನ್ನು ಸೇರಿಸದೇ ಬಿಟ್ಟಿರುವುದಕ್ಕೆ ಥ್ಯಾಂಕ್ಸ್ ಹೇಳಬೇಕಷ್ಟೆ.
‘ಸರ್ಕಾರಿ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳನ್ನು ಕರೆಯುವುದು ಶಿಷ್ಟಾಚಾರ. ಭವಿಷ್ಯದಲ್ಲಿ ಇಂತಹ ತಪ್ಪು ಆಗದಂತೆ ನೋಡಿಕೊಳ್ಳಿ. ಜೊತೆಗೆ, ಕೇಂದ್ರ ಮತ್ತು ರಾಜ್ಯದಲ್ಲಿ ಯಾವ ಪಕ್ಷ ಆಡಳಿತದಲ್ಲಿರುತ್ತೆ ಎನ್ನುವ ವಿಚಾರ ಬದಿಗಿಟ್ಟು ಮಂಗಳೂರನ್ನು ಬಂದರು ಇಲಾಖೆಯು ಮರಿಟೈಮ್ ಗೇಟ್ ವೇ ಆಫ್ ಕರ್ನಾಟಕ ಎಂದಾಗಿಯೇ ಉಳಿಸಿಕೊಳ್ಳಿ. ಅದನ್ನು ಬಿಜೆಪಿಯ ಗೇಟ್ ವೇ ರೀತಿ ಮಾಡಿಕೊಳ್ಳಬೇಡಿ ಎಂದು ದಿನೇಶ್ ಗುಂಡೂರಾವ್ ತನ್ನ ಪತ್ರದಲ್ಲಿ ಖಾರವಾಗಿ ಬರೆದಿದ್ದಾರೆ. ಇದೇ ಪತ್ರವನ್ನು ಕೇಂದ್ರ ಬಂದರು ಇಲಾಖೆ ಕಾರ್ಯದರ್ಶಿ ವಿಜಯ ಕುಮಾರ್, ಬಂದರು ಸಚಿವ ಸೋನೋವಾಲ್ ಅವರಿಗೂ ನೀಡಿದ್ದಾರೆ.

ಸರಿಪಡಿಸದಿದ್ದರೆ ಕರಿಪತಾಕೆ ಎಚ್ಚರಿಕೆ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪರವಾಗಿ ಕಾರ್ಯದರ್ಶಿ ಟಿಡಿ ವಿಕಾಸ್ ಶೆಟ್ಟಿ ಎನ್ಎಂಪಿಎ ಅಧ್ಯಕ್ಷ ವೆಂಕಟರಮಣ ಅಕ್ಕರಾಜು ಅವರಿಗೆ ಪತ್ರ ಬರೆದಿದ್ದು, ಮಂಗಳೂರು ಬಂದರು 50ನೇ ವರ್ಷ ಆಚರಿಸುತ್ತಿರುವುದು ನಮಗೆಲ್ಲ ಹೆಮ್ಮೆ. ಆದರೆ ಈ ಬಂದರು ನಿರ್ಮಾಣಕ್ಕಾಗಿ ಕಾಂಗ್ರೆಸಿನ ಮಾಜಿ ಸಂಸದ ಯು.ಎಸ್ ಮಲ್ಯ ಶ್ರಮಿಸಿದ್ದರು ಎಂಬುದನ್ನು ಮರೆಯಬೇಡಿ. ಹಾಗೆಯೇ, ಬಂದರು ಅಭಿವೃದ್ಧಿಯಲ್ಲಿ ಮಾಜಿ ಸಂಸದರಾದ ಜನಾರ್ದನ ಪೂಜಾರಿ, ಆಸ್ಕರ್ ಫೆರ್ನಾಂಡಿಸ್ ಕೊಡುಗೆಯೂ ದೊಡ್ಡದಿದೆ. ಈಗ 50ನೇ ವರ್ಷದ ಆಚರಣೆ ಸಂದರ್ಭದಲ್ಲಿ ಮಾಜಿ ಸಂಸದರು, ಸಚಿವರ ಹೆಸರನ್ನೇ ಮರೆತಿರುವುದು ತೀವ್ರ ಬೇಸರ ಉಂಟು ಮಾಡಿದೆ.
ಇದಲ್ಲದೆ, ಕಾರ್ಯಕ್ರಮ ಶಿಷ್ಟಾಚಾರ ಪ್ರಕಾರ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್ತಿನ ಸದಸ್ಯರ ಹೆಸರನ್ನು ಉಲ್ಲೇಖಿಸಬೇಕಿತ್ತು. ಸರ್ಕಾರಿ ಕಾರ್ಯಕ್ರಮದಲ್ಲಿ ಗಂಭೀರ ಶಿಷ್ಟಾಚಾರ ಉಲ್ಲಂಘನೆ ಇದಾಗಿದ್ದು, ಕೂಡಲೇ ಆಗಿರುವ ಪ್ರಮಾದವನ್ನು ಸರಿಪಡಿಸದೇ ಇದ್ದರೆ ಕಾರ್ಯಕ್ರಮ ನಡೆಯುವ ಸಂದರ್ಭದಲ್ಲಿ ಕಪ್ಪು ಪತಾಕೆ ಹಿಡಿದು ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆಯನ್ನು ನೀಡಿದ್ದರು.




ಬೆದರಿಕೆಗೆ ಅಂಜಿದ ಬಂದರು ಅಧ್ಯಕ್ಷ
ಇದಲ್ಲದೆ, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಎನ್ಎಂಪಿಎ ಅಧ್ಯಕ್ಷ ಅಕ್ಕರಾಜು ಅವರಿಗೆ ಫೋನ್ ಕರೆ ಮಾಡಿಯೂ ಶಿಷ್ಟಾಚಾರ ಮರೆತಿರುವ ಬಗ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಇದರ ಪರಿಣಾಮ ಎನ್ನುವಂತೆ ಬುಧವಾರ ಸಂಜೆ ವೇಳೆಗೆ ಆಹ್ವಾನ ಪತ್ರದಲ್ಲಿ ಸಚಿವ ದಿನೇಶ್ ಗುಂಡೂರಾವ್, ಸ್ಪೀಕರ್ ಯುಟಿ ಖಾದರ್, ಎಂಎಲ್ಸಿ ಮಂಜುನಾಥ ಭಂಡಾರಿ, ಐವಾನ್ ಡಿಸೋಜ ಹೆಸರನ್ನು ಸೇರ್ಪಡೆ ಮಾಡಲಾಗಿದೆ. ಬಿಜೆಪಿಯ ಎಂಎಲ್ಸಿ ಕಿಶೋರ್ ಕುಮಾರ್, ಪ್ರತಾಪಸಿಂಹ ನಾಯಕ್ ಹೆಸರು ಸೇರಿಸಿಲ್ಲ. ಇದೇ ವೇಳೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರನ್ನು ಆಹ್ವಾನ ಪತ್ರದಿಂದ ಕೈಬಿಡಲಾಗಿದೆ. ಮಾಜಿ ಸಂಸದರನ್ನು ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಪ್ರಕಾರ ವೇದಿಕೆಗೆ ಕರೆಯುವ ವಾಡಿಕೆ ಇಲ್ಲದಿದ್ದರೂ, ಅವರ ಹೆಸರನ್ನು ಆಹ್ವಾನ ಪತ್ರದಲ್ಲಿ ಉಳಿಸಿಕೊಂಡಿದ್ದಾರೆ. ಬಂದರು ಅಧ್ಯಕ್ಷ ಅಕ್ಕರಾಜು ಅವರಿಗೆ ಮಾಜಿಗಳ ಬಗ್ಗೆ ಏನೋ ಅಕ್ಕರೆ ಇದ್ದಂತಿದೆ.
The New Mangalore Port Authority (NMPA) is celebrating its Golden Jubilee on November 13, marking 50 years since its establishment. However, the event has triggered a major political controversy after the official invitation omitted the names of state ministers and local Congress representatives, violating government protocol.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm